ಎಲ್ಲರಿಗೂ ಪರೀಕ್ಷೆ : ಈ ಬಾರಿ ಕನಿಷ್ಠ ಹಾಜರಾತಿ ಭಯವಿಲ್ಲ
Team Udayavani, Jan 11, 2021, 7:00 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಈ ಬಾರಿ ಎಸೆಸೆಲ್ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮತ್ತು ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಮೊದಲಾದ ಕೋರ್ಸ್‌ಗಳ ಸೆಮಿಸ್ಟರ್ ಪರೀಕ್ಷೆ ಬರೆಯಲು ನಿಗದಿತ ಹಾಜರಾತಿಯ ಅಡ್ಡಿ ಇಲ್ಲ!
ವಾರ್ಷಿಕ ಅಥವಾ ಸೆಮಿಸ್ಟರ್ ಪರೀಕ್ಷೆ ಗಳನ್ನು ಶಾಲಾ ಹಾಜರಾತಿ ಇಲ್ಲದೆಯೂ ಎದುರಿಸಬಹುದು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮಹ್ವತದ ನಿರ್ಧಾರ ವನ್ನು ಶೀಘ್ರವೇ ತೆಗೆದು ಕೊಳ್ಳಲಿದೆ. ಕೋವಿಡ್ ಕಾರಣ ಇಲಾಖೆಯ ಇತಿ ಹಾಸ ದಲ್ಲೇ ಮೊದಲ ಬಾರಿಗೆ ಕನಿಷ್ಠ ಹಾಜರಾತಿ ನಿಯಮದಲ್ಲಿ ವಿನಾಯಿತಿ ನೀಡಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಈಗಾಗಲೇ ಎಸೆಸೆಲ್ಸಿ, ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ, ಡಿಪ್ಲೊಮಾ ಸೆಮಿಸ್ಟರ್ ಪರೀಕ್ಷೆ ದಿನಾಂಕ ನಿಗದಿಯಾಗಿದೆ. ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಕೋರ್ಸ್‌ಗಳ ಸೆಮಿಸ್ಟರ್ ಪರೀಕ್ಷೆಯ ದಿನಾಂಕ ಗಳನ್ನು ಆಯಾ ವಿ.ವಿ.ಗಳು ನಿರ್ಧ ರಿಸು ತ್ತಿವೆ. ಆದರೆ ಈ ಬಾರಿ ಯಾರಿಗೂ ಕನಿಷ್ಠ ಹಾಜರಾತಿ ಸಮಸ್ಯೆ ಉದ್ಭವಿಸದು.
ಹಳೆಯ ನಿಯಮದ ಪ್ರಕಾರ, ವರ್ಷ ಪೂರ್ತಿ ಅಥವಾ ಸೆಮಿಸ್ಟರ್‌ನಲ್ಲಿ ಶೇ. 70 ಅಥವಾ ಶೇ. 75ರಷ್ಟು ಹಾಜರಾತಿ ಇರಲೇ ಬೇಕಿತ್ತು. ಹಾಜರಾತಿಯ ಕೊರತೆಯಿಂದ ಪ್ರತೀ ವರ್ಷ ಸಾವಿರಾರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿರಲಿಲ್ಲ. ಈ ಬಾರಿ ನಿಯಮ ಸಡಿಲಿಕೆ ಮಾಡಲಾಗಿ ದ್ದರೂ ನೇರ ತರಗತಿ, ಆನ್‌ಲೈನ್ ಅಥವಾ ಆಫ್ಲೈನ್ ಹೀಗೆ ಯಾವು ದಾದರೂ ವಿಧಾನದಲ್ಲಿ ವಿದ್ಯಾರ್ಥಿ ಗಳ ಹಾಜರಾತಿಯನ್ನು ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್ ವ್ಯವಸ್ಥೆ (ಎಸ್‌ಎಟಿಎಸ್) ಮೂಲಕ ನಿತ್ಯವೂ ದಾಖಲಿಸ ಲಾಗುತ್ತಿದೆ. ವಿದ್ಯಾರ್ಥಿಗಳು ಕಲಿಕೆ ಮುಂದುವರಿಸ ಬೇಕೆಂಬ ಉದ್ದೇಶದಿಂದ ಈ ಕ್ರಮ ಅನುಸರಿಸಲಾಗುತ್ತಿದೆ.
ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಕನಿಷ್ಠ ಹಾಜರಾತಿ ನಿಯಮದಿಂದ ವಿನಾಯಿತಿ ಇರಲಿದೆ. ಆದರೆ ನೇರ ತರಗತಿಗೆ ಹಾಜರಾಗುವ ಮೂಲಕ ಅಥವಾ ಅನ್ಯ ವಿಧಾನದಿಂದ ವಿದ್ಯಾರ್ಥಿಗಳು ಕಲಿಕೆಯ ನಿರಂತರತೆಯನ್ನು ಕಾಪಾಡಿಕೊಳ್ಳಬೇಕು.– ಆರ್. ಸ್ನೇಹಲ್,ಪ.ಪೂ. ಶಿಕ್ಷಣ ಇಲಾಖೆಯ ನಿರ್ದೇಶಕಿ
ಪದವಿ ವಿದ್ಯಾರ್ಥಿಗಳ ಹಾಜರಾತಿ ಏರಿಕೆಯಾಗು ತ್ತಿದೆ. ವಿಜ್ಞಾನ ವಿದ್ಯಾರ್ಥಿಗಳ ಹಾಜರಾತಿ ಇನ್ನೂ ಚೆನ್ನಾಗಿದೆ. ಸೆಮಿಸ್ಟರ್ ಪರೀಕ್ಷೆ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳನ್ನು ಆಯಾ ವಿ.ವಿ.ಗಳೇ ನಿರ್ಧರಿಸಿಕೊಳ್ಳಲಿವೆ.–ಪ್ರೊ| ಎಸ್. ಮಲ್ಲೇಶ್ವರಪ್ಪ , ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕ
- ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.