Parameshwara: ಇನ್ನು ಮುಂದೆ ಯಾವುದೇ ಚರ್ಚೆ ಮಾಡುವುದಿಲ್ಲ
Team Udayavani, Oct 11, 2024, 7:25 AM IST
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾವು ಎಲ್ಲಿಯೂ ಚರ್ಚೆ ನಡೆಸಿಲ್ಲ, ಅನಗತ್ಯ ಸಭೆಗಳನ್ನೂ ನಡೆಸಿಲ್ಲ. ಇನ್ನು ಮುಂದೆ ಮಾಧ್ಯಮದವರು ಪ್ರಶ್ನೆ ಮಾಡಿದರೂ ನಾನು ಮುಖ್ಯಮಂತ್ರಿ ಹುದ್ದೆ ಕುರಿತು ಯಾವುದೇ ಪ್ರತಿಕ್ರಿಯೆಯನ್ನೂ ನೀಡುವುದಿಲ್ಲ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.
ಜವಾಬ್ದಾರಿಯುತ ಸಚಿವನಾಗಿರುವ ಜತೆಗೆ ಪಕ್ಷದಲ್ಲಿ ಹಿರಿಯ ರಾಜಕಾರಣಿಯಾಗಿರುವ ನನಗೂ ಕೆಲವು ಜವಾಬ್ದಾರಿಗಳಿವೆ. ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ಜತೆಗೆ ನಾವು ಊಟ ಮಾಡಿ ಸಭೆ ನಡೆಸಿದ್ದಕ್ಕೆ ಚರ್ಚೆಗಳಾಗುತ್ತಿರುವುದು ವಿಷಾದಕರ ಎಂದು ಬೇಸರ ವ್ಯಕ್ತಪಡಿಸಿದರು.
ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕು ಎಂಬ ಕಾರಣಕ್ಕಾಗಿ ಸಿದ್ಧಗಂಗಾ ಮಠದಲ್ಲಿ ಪೂಜೆ ಮಾಡಿಸಿದ್ದಾರೆ ಎಂದು ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ನಮ್ಮ ಕುಟುಂಬಕ್ಕೂ ಸಿದ್ಧಗಂಗಾ ಮಠಕ್ಕೂ
ಸುದೀರ್ಘ ನಂಟಿದೆ. ಅಲ್ಲಿ ರಾಜಕೀಯ ಮಾತನಾಡು ತ್ತೇನೆ ಎಂದು ಹೇಳುವುದು ಸರಿಯಲ್ಲ ಎಂದರು.
ಹಗರಣಗಳ ತನಿಖೆ ತಾರ್ಕಿಕ ಅಂತ್ಯಕ್ಕೆ
ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿರುವ ವಿವಿಧ ಹಗರಣಗಳ ಕುರಿತು ನಾನಾ ರೀತಿಯ ತನಿಖೆಗಳು ನಡೆಯುತ್ತಿವೆ. ಕೆಲವು ಪೂರ್ಣಗೊಂಡಿವೆ, ಇನ್ನೂ ಕೆಲವು ಅಂತಿಮ ಹಂತದಲ್ಲಿವೆ. ನಮ್ಮ ಸರಕಾರ ಹಣಕಾಸಿನ ಅವ್ಯವಹಾರ ಹಾಗೂ ಇತರ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿದೆ. ಯಾರೇ ತಪ್ಪು ಮಾಡಿದರೂ ಕ್ಷಮಿಸುವ ಪ್ರಶ್ನೆ ಇಲ್ಲ ಎಂದು ಸಚಿವ ಪರಮೇಶ್ವರ್ ಸ್ಪಷ್ಟ ಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.