ನಾವು ಲಾಕ್ ಡೌನ್ ಮಾಡುವ ಪ್ರಮೇಯವಿಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ
Team Udayavani, Apr 13, 2021, 12:42 PM IST
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಮೇಯವಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ವಿಪಕ್ಷದವರ ಜೊತೆ ಸಭೆ ಮಾಡಿ, ಅವರ ಸಲಹೆಯನ್ನೂ ಪಡೆಯುತ್ತೇವೆ. ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರಿಗೆ ಯಾವ ಕಾರಣಕ್ಕೂ ಸಂಬಳ ನೀಡುವುದಿಲ್ಲ. ಕೆಲಸ ಮಾಡಿದವರಿಗೆ ಮಾತ್ರ ವೇತನ ನೀಡಲಾಗುವುದು. ಅವರು ಯಾರದೋ ಮಾತು ಕೇಳಿಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಯಾರನ್ನೂ ಕರೆದು ಮಾತಾಡುವ ಪ್ರಮೆಯವೇ ಇಲ್ಲ ಎಂದರು.
ಉಪ ಚುನಾವಣೆಯ ಬಗ್ಗೆ ಮಾತನಾಡಿದ ಸಿಎಂ ಬಿಎಸ್ ವೈ, ಎರಡು ವಿಧಾನಸಭೆ ಚುನಾವಣಾ ಪ್ರಚಾರ ಮುಗಿಸಿ ಬಂದಿದ್ದೇನೆ. ನಾಳೆ ಹನ್ನೆರಡು ಗಂಟೆ ಮೇಲೆ ಬೆಳಗಾವಿ ಗೋಕಾಕ್ ತೆರಳುತ್ತೇನೆ. ಮೂರು ಕ್ಷೇತ್ರ ಉಪಚುನಾವಣೆ ಗೆಲ್ಲುವ ಭರವಸೆಯಿದೆ. ಇಪ್ಪತ್ತು ಸಾವಿರ ಅಂತರದ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಜನತೆಗೆ ಯುಗಾದಿ ಹಬ್ಬದ ಶುಭ ಕೋರಿದ ಸಿಎಂ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಷಯಗಳು. ರಾಜ್ಯದ ಜನತೆಗೆ ಸಂಪತ್ತು, ನೆಮ್ಮದಿ ಸಿಗಲಿ. ಸಕಾಲಕ್ಕೆ ಮಳೆ-ಬೆಳೆಯಾಗಲಿ ಎಂದು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.