ಕೆಪಿಸಿಸಿ ಅಧ್ಯಕ್ಷರ ನೇಮಕ ಅವಸರವಿಲ್ಲ: ಖರ್ಗೆ
Team Udayavani, Jan 22, 2020, 3:04 AM IST
ಕಲಬುರಗಿ: ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕೆ ನಮಗೇನೂ ಅವಸರವಿಲ್ಲ. ಆದರೆ ಮಾಧ್ಯಮಗಳು ಮತ್ತು ಪ್ರತಿಪಕ್ಷಗಳಿಗೆ ಅವಸರವಿದ್ದಂತೆ ಕಾಣುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂ ಧಿಸಿದ ಚರ್ಚೆಗಳು ಈಗಾಗಲೇ ಪೂರ್ಣಗೊಂಡಿವೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಲ್ವರು ಕಾರ್ಯಾಧ್ಯಕ್ಷರ ನೇಮಕದ ಬಗ್ಗೆಯೂ ಚರ್ಚೆ ನಡೆದಿದೆ. ಮಹಾರಾಷ್ಟ್ರದಲ್ಲಿ ಐವರು ಕಾರ್ಯಾಧ್ಯಕ್ಷರನ್ನು ನೇಮಿಸಲಾಗಿತ್ತು. ಕರ್ನಾಟಕದಲ್ಲಿಯೂ ಈ ಹಿಂದೆ ಇಬ್ಬರು ಕಾರ್ಯಾಧ್ಯಕ್ಷರ ನೇಮಕ ಮಾಡಲಾಗಿತ್ತು. ಸಂದರ್ಭಕ್ಕೆ ತಕ್ಕಂತೆ ಕಾರ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಇದು ಪಕ್ಷದ ಆಂತರಿಕ ವಿಚಾರ.
ಕೆಲವು ನಾಯಕರಲ್ಲಿ ಭಿನ್ನ ನಿಲುವುಗಳಿರಬಹುದು. ಆದರೆ, ಎಲ್ಲರೂ ಪಕ್ಷದ ನಿರ್ಣಯಕ್ಕೆ ಬದ್ಧರಾಗಿರುತ್ತೇವೆ ಎಂದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣ ಬಗ್ಗೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಸರ್ಕಾರ ತಕ್ಷಣ ತನಿಖಾ ಸಂಸ್ಥೆಗೆ ಸೂಕ್ತ ನಿರ್ದೇಶನ ನೀಡಬೇಕು. ಯಾರೇ ತಪ್ಪಿತಸ್ಥರಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.