“ಸಂಸದೀಯ ಕಾರ್ಯದರ್ಶಿ ನೇಮಕ ಉದ್ದೇಶ ಸದ್ಯಕ್ಕಿಲ್ಲ’
Team Udayavani, Sep 24, 2019, 3:00 AM IST
ಬೆಂಗಳೂರು: “ಸಂಸದೀಯ ಕಾರ್ಯದರ್ಶಿ’ಗಳನ್ನು ನೇಮಕ ಮಾಡುವ ಉದ್ದೇಶ ಸದ್ಯಕ್ಕಿಲ್ಲ ಎಂದು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್ಗೆ ಹೇಳಿದೆ. ವಿವಿಧ ಇಲಾಖೆಗಳಿಗೆ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ ಸರ್ಕಾರದ ಕ್ರಮ ಆಕ್ಷೇಪಿಸಿ ಬೆಂಗಳೂರಿನ ನಿವಾಸಿ ಎಂ.ಬಿ. ಆದಿನಾರಾಯಣ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಸರ್ಕಾರದ ಪರ ವಕೀಲರಾದ ಬಿ.ವಿ. ಕೃಷ್ಣ ವಾದ ಮಂಡಿಸಿ, ಸಂಸದೀಯ ಕಾರ್ಯದರ್ಶಿಗಳನ್ನು ನೇಮಕ ಮಾಡುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಸದ್ಯಕ್ಕಿಲ್ಲ. ಈ ಬಗ್ಗೆ ಅಡ್ವೋಕೇಟ್ ಜನರಲ್ ಅವರು ಕೋರ್ಟ್ ಮುಂದೆ ವಾದ ಮಂಡಿಸಲಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಅ.18ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.