ಎನ್‌ಇಪಿಯಲ್ಲಿ ಯಾವುದೇ ಭಾಷೆ ಕಡ್ಡಾಯವಲ್ಲ
ಕೇಂದ್ರದಿಂದ ಹೈಕೋರ್ಟ್‌ಗೆ ಪ್ರಮಾಣ ಪತ್ರ ; ರಾಜ್ಯದ ಯತ್ನಕ್ಕೆ ಹಿನ್ನಡೆ
Team Udayavani, Mar 9, 2022, 7:15 AM IST
ಬೆಂಗಳೂರು: ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಬಗ್ಗೆ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಾಗೂ ಅದರ ನಿಯಮಗಳಲ್ಲಿ ಉಲ್ಲೇಖವಿಲ್ಲ ಎಂದು ಕೇಂದ್ರ ಸರಕಾರ ಹೈಕೋರ್ಟ್‌ಗೆ ಹೇಳಿದೆ.
ಪದವಿಯಲ್ಲಿ ಕನ್ನಡ ಕಲಿಕೆ ಕಡ್ಡಾಯ ಗೊಳಿಸಿ ರಾಜ್ಯ ಸರಕಾರ ಹೊರ ಡಿಸಿರುವ ಆದೇಶ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್ ಹಾಗೂ ಕೆಲವು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾ| ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಲಾದ ಪ್ರಮಾಣಪತ್ರದಲ್ಲಿ ಈ ಮಾಹಿತಿ ನೀಡಲಾಗಿದೆ. ಈ ಮೂಲಕ ಪದವಿಯಲ್ಲಿ ಕನ್ನಡ ಕಲಿ ಕೆಯನ್ನು ಕಡ್ಡಾಯ ಮಾಡಲು ಹೊರ ಟಿದ್ದ ರಾಜ್ಯಕ್ಕೆ ತೀವ್ರ ಹಿನ್ನಡೆಯಾದಂತಾಗಿದೆ.
ವಿದ್ಯಾರ್ಥಿಗಳ ಪರ ವಕೀಲರು, “ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆ ಯನ್ನು ಕಡ್ಡಾಯ ಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ ಎಂದು ಕೇಂದ್ರ ಸರಕಾರ ತನ್ನ ಪ್ರಮಾಣ ಪತ್ರದಲ್ಲಿ ತಿಳಿಸಿದೆ. ಅದರಂತೆ ಪದವಿ ಹಂತದಲ್ಲಿ ಕನ್ನಡ ಕಲಿಕೆ ಕಡ್ಡಾಯವಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅರ್ಜಿದಾರ ವಿದ್ಯಾರ್ಥಿಗಳು ಆಯ್ಕೆ ಮಾಡಿ ಕೊಂಡಿರುವ ಭಾಷೆಯಲ್ಲಿ ಕಲಿಕೆ ಮುಂದುವರಿಸಲು ಸ್ವತಂತ್ರರು ಎಂದು ಆದೇಶಿಸಬೇಕು’ ಎಂದು ಮನವಿ ಮಾಡಿದರು. ಪ್ರಮಾ ಣ ಪತ್ರದ ಬಗ್ಗೆ ರಾಜ್ಯದ ಸ್ಪಷ್ಟನೆ ಕೇಳಿ ವಿಚಾರಣೆಯನ್ನು ಎ.4ಕ್ಕೆ ಮುಂದೂಡಿತು.
ಕೇಂದ್ರ ಸರಕಾರ ಹೇಳಿದ್ದೇನು?
ಸ್ಥಳೀಯ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಮಟ್ಟದ ಮಹತ್ವಾ ಕಾಂಕ್ಷೆ ಹಾಗೂ ಆವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಸುಲಭವಾಗಿ ಸಮಗ್ರ ಶೈಕ್ಷಣಿಕ ವ್ಯವಸ್ಥೆ ಕಲ್ಪಿಸುವ ಉದ್ದೇಶ ದಿಂದ ಎನ್‌ಇಪಿ ಜಾರಿಗೊಳಿಸಲಾಗಿದೆ. ಎನ್‌ಇಪಿಯ 22ನೇ ಅಧ್ಯಾಯ ದಲ್ಲಿ ಭಾರತದ ಭಾಷೆಗಳು, ಕಲೆ ಮತ್ತು ಸಂಸ್ಕೃತಿ ಪ್ರಚಾರದ ಬಗ್ಗೆ ಹೇಳಲಾಗಿದೆ. ಇದೇ ಅಧ್ಯಾಯದಲ್ಲಿ ದ್ವಿಭಾಷೆಗೆ ಅವಕಾಶ ವಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳು ಮಾತೃಭಾಷೆ ಅಥವಾ ಸ್ಥಳೀಯ ಭಾಷೆಯನ್ನು ಬೋಧನ ಭಾಷೆಯನ್ನಾಗಿ ಬಳಕೆ ಮಾಡಬಹು ದಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅನುಕೂಲಕ್ಕಾಗಿ ಭಿನ್ನ ಬಗೆಯ ಶೈಕ್ಷಣಿಕ ಸಾಫ್ಟ್ವೇರ್‌ಗಳನ್ನು ಅಭಿವೃದ್ಧಿಪಡಿಸಿ ಅದು ಎಲ್ಲರಿಗೂ ದೊರೆಯುವಂತೆ ಮಾಡುವ ಉದ್ದೇಶವನ್ನು ಎನ್‌ಇಪಿಯಲ್ಲಿ ಹೊಂದಲಾಗಿದೆ. ಎನ್‌ಇಪಿ ಮತ್ತದರ ನಿಯಮಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಯಮಗಳನ್ನು ಪುನರ್ ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರಕಾರ ಪ್ರಮಾಣಪತ್ರದಲ್ಲಿ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.