ಕಾನೂನು ಕೈಗೆತ್ತಿಕೊಳ್ಳುವ ಗೋರಕ್ಷಕರಿಗಿಲ್ಲ ರಕ್ಷಣೆ
Team Udayavani, May 6, 2017, 12:59 PM IST
ಬೆಂಗಳೂರು: ಗೋ ರಕ್ಷಣೆ ನೆಪದಲ್ಲಿ ಕಾನೂನು ಕೈಗೆತ್ತಿಕೊಳ್ಳುವವರಿಗೆ ಯಾವುದೇ ರೀತಿಯ ರಕ್ಷಣೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, “1964ರ ಗೋಹತ್ಯೆ ರಕ್ಷಣಾ ಕಾಯ್ದೆಯಲ್ಲಿ ಗೋರಕ್ಷಕರಿಗೆ ಯಾವುದೇ ರೀತಿಯಲ್ಲೂ ಬೆಂಬಲ ನೀಡಲಾಗಿಲ್ಲ. ಗೋರಕ್ಷಣೆ ಹೆಸರಿನಲ್ಲಿ ಹಿಂಸೆ ಮಾಡುವ ಗುಂಪುಗಳನ್ನು ನಿಷೇಧಿಸುವಂತೆ ಕೋರಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅದಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಪ್ರಮಾಣ ಪತ್ರ ಸಲ್ಲಿಸಿದೆ. ಜಾಗೃತ ಪಡೆಗಳ ಹೆಸರಿನಲ್ಲಿ ಸಾಮಾಜಿಕ ಸಾಮರಸ್ಯ ಕದಡಿದರೆ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಗೋವು ರಕ್ಷಣೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವವರನ್ನು ಸರ್ಕಾರ ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಲ್ಲಿ ಗರಿಷ್ಠ ಪ್ರದರ್ಶನ ದರವನ್ನು 200 ರೂ.ಗೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಈ ಬಗ್ಗೆ ಮಲ್ಟಿಫ್ಲೆಕ್ಸ್ ಗಳು ನ್ಯಾಯಾಲಯದ ಮೊರೆ ಹೋದರೆ ಸರ್ಕಾರ ತಡೆಯಲು ಸಾಧ್ಯವಿಲ್ಲ. ಒಂದೊಮ್ಮೆ ನ್ಯಾಯಾಲಯದ ಮೆಟ್ಟಿಲೇರಿದರೆ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು.
ಸಿಎಂ ಪ್ರಗತಿ ಪರಿಶೀಲನೆ ಇಂದು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ನಿಗದಿಯಾಗಿದ್ದು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಪಾಲ್ಗೊಳ್ಳಲಿದ್ದಾರೆ. ವಿವಿಧ ಇಲಾಖೆಗಳು ಕೈಗೊಂಡಿರುವ ಅಭಿವೃದ್ಧಿ
ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಆಗಿರುವ ಪ್ರಗತಿ ಕುರಿತು ಮುಖ್ಯಮಂತ್ರಿ ಸಭೆಯಲ್ಲಿ ಪರಿಶೀಲನೆ ನಡೆಸಲಿದ್ದಾರೆ.
ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಂದಾಯ, ಯೋಜನೆ, ಕೃಷಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಆಹಾರ, ವಸತಿ ಇಲಾಖೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಯಲಿದೆ. ಕೆರೆ ಸಂಜೀವಿನಿ, ಸ್ವತ್ಛ ಭಾರತ್, ಪ್ರಧಾನಮಂತ್ರಿ ಗ್ರಾಮ
ಸಡಕ್ ಯೋಜನೆ, ನಗರೋತ್ಥಾನ, ಹೈದರಾಬಾದ್-ಕರ್ನಾಟಕ ಪ್ರದೇಶಾಭಿ ವೃದ್ಧಿ, ನರೇಗಾ, ಪಡಿತರ ಚೀಟಿ ವಿತರಣೆ ಮತ್ತಿತರ ಯೋಜನೆಗಳ ಪ್ರಗತಿ ಕುರಿತು ಮುಖ್ಯಮಂತ್ರಿಯವರು ಮಾಹಿತಿ ಪಡೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Waqf Notice: ವಕ್ಫ್ ಬೋರ್ಡ್ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ
By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್ ಕುಮಾರಸ್ವಾಮಿಗೋ?
Election Campaign: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
Loan facility: ಕೇಂದ್ರ ಸರಕಾರದ ಯೋಜನೆಗಳಡಿ ಸಾಲ ಮಂಜೂರು ಹೆಚ್ಚಿಸಿ: ನಿರ್ಮಲಾ
MUST WATCH
ಹೊಸ ಸೇರ್ಪಡೆ
Delhi Ganesh: ಹಿರಿಯ ನಟ ಡೆಲ್ಲಿ ಗಣೇಶ್ ಇನ್ನಿಲ್ಲ
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Toxic: ಯಶ್ ಚಿತ್ರಕ್ಕೆ ಬಂದ ಹಾಲಿವುಡ್ ನ ಜೆ.ಜೆ.ಪೆರ್ರಿ
Final Verdict: ಬುಲ್ಡೋಜರ್ ನ್ಯಾಯ ಒಪ್ಪಲು ಅಸಾಧ್ಯ: ಸಿಜೆಐ ಚಂದ್ರಚೂಡ್ ಅಂತಿಮ ತೀರ್ಪು
BGT: ಭಾರತ ವಿರುದ್ದದ ಮೊದಲ ಟೆಸ್ಟ್ ಗೆ ಆಸೀಸ್ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.