ಕೋವಿಡ್ ಕೆಲಸ ಮಾಡುವವರಿಗೆ ಇಂದಿನಿಂದ 50 ದಿನಗಳವರೆಗೆ ರಜೆ ಇಲ್ಲ: ಸಚಿವ ಸುಧಾಕರ್
Team Udayavani, Mar 18, 2021, 3:25 PM IST
ಬೆಂಗಳೂರು: ನಮ್ಮ ರಾಜ್ಯವನ್ನು ಕೋವಿಡ್ ಮುಕ್ತ ರಾಜ್ಯ ಮಾಡೋಣ. ಎಲ್ಲರೂ ಸೇರಿ ಸೋಂಕು ನಿಯಂತ್ರಿಸಬೇಕಿದೆ. ಇಂದಿನಿಂದ 50 ದಿನಗಳವರಗೆ ಸಚಿವರು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಕೋವಿಡ್ ಕೆಲಸ ಮಾಡುವವರಿಗೆ ರಜೆ ನೀಡಲಾಗುವುದಿಲ್ಲ ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಎರಡನೇ ಹಂತದ ಮುನ್ಸೂಚನೆ ಇರುವ ಹಿನ್ನೆಲೆ ಆರೋಗ್ಯ ಇಲಾಖೆ, ಮುಖ್ಯ ಆಸ್ಪತ್ರೆ ವೈದ್ಯರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ನಿರ್ದಿಷ್ಟ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಕೋವಿಡ್ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿರ ಹಾಸಿಗೆ ಮೀಸಲಿಡಲಾಗುವುದು, ವ್ಯಾಕ್ಸಿನ್ ಕೊಡುವ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 60 ವರ್ಷ ಮೇಲ್ಪಟ್ಟವರು ಲಸಿಕೆ ಹಾಕಿಸಿಕೊಳ್ಳಲು ಸ್ವಯಂ ಪ್ರೇರಿತರಾಗಿ ಬರಬೇಕು ಎಂದರು.
ಇದನ್ನೂ ಓದಿ:ಒಂದೇ ದಿನದಲ್ಲಿ ದೇಶದಲ್ಲಿ 35,871 ಹೊಸ ಕೋವಿಡ್ ಪ್ರಕರಣಗಳು ಪತ್ತೆ!
ಪ್ರತೀ ವಾರ್ಡಿಗೆ ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಬೆಂಗಳೂರಿಗೆ 200 ಆಂಬ್ಯುಲೆನ್ಸ್ ನೇಮಕ ಮಾಡಲಾಗಿದೆ. ಗೃಹ ಇಲಾಖೆ, ವೈದ್ಯರು ಸೇರಿದಂತೆ ಹಿಂದೆ ತೆಗೆದುಕೊಂಡಿದ್ದ ಕ್ರಮ ಮತ್ತೆ ತೆಗೆದುಕೊಳ್ಳಲಾಗಿದೆ. ಹಿಂದಿನಂತೆ ಕೋವಿಡ್ ವಾರ್ ರೂಮ್ ನಡೆಸಲಾಗುವುದು. ಇದೇ ವಾರದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಖಾಸಗಿ ಆಸ್ಪತ್ರೆ ಮಾಲೀಕರ ಜೊತೆ ಮಾತುಕತೆ ಮಾಡಲಾಗುವುದು. ಮುಂದೆ ಮತ್ತೆ ಎರಡನೇ ಅಲೆಯಲ್ಲಿ ಸೋಂಕು ಹೆಚ್ಚಾದರೆ ಬೆಡ್ ಮೀಸಲಿಡಲು ಸೂಚನೆ ನೀಡಲಾಗುವುದು ಎಂದು ಸಚಿವರು ಹೇಳಿದರು.
ಪೂರ್ವ ಸಿದ್ಧತೆ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಜವಾಬ್ದಾರಿ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಕೂಡ ಸಭೆ ಮಾಡಲಾಗಿದೆ. ಕಂದಾಯ ಇಲಾಖೆಯವರನ್ನೂ ಬಳಕೆ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಆ್ಯಪ್ ಬಳಕೆಯನ್ನು ಮುಂದುವರೆಸುತ್ತೇವೆ. ತಾಂತ್ರಿಕ ಸೌಲಭ್ಯ ಬಳಕೆ ಮಾಡಲಾಗುವುದು. ಪಾರದರ್ಶಕವಾಗಿರಲು ರಿಯಲ್ ಟೈಮ್ ಬಳಸಲಾಗುವುದು. ಯಾವುದರಲ್ಲಾದರೂ ಲೋಪ ಕಂಡು ಬಂದರೆ, ಆಯಾ ಇಲಾಖೆ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದರು.
ಇದನ್ನೂ ಓದಿ: ಜಾರಕಿಹೊಳಿಯವರಿಂದ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಯುವತಿ ಕೇಳಿದ್ದಳು: CD ಶಂಕಿತ ನರೇಶ್
ಇಡೀ ದೇಶದಲ್ಲೇ ನಮ್ಮ ರಾಜ್ಯದಲ್ಲಿ ಮರಣ ಹೊಂದಿರುವ ಸರಾಸರಿ ಕಡಿಮೆ ಇದೆ. ಪಾಸಿಟಿವ್ ಸರಾಸರಿಯು ಕೂಡ ಕಡಿಮೆಯಿದೆ. ಗುಣಮುಖರಾದವರ ಸಂಖ್ಯೆ 97ರಷ್ಟಿದೆ ಎಂದರು. ಇದು ಗಂಭೀರ ವಿಚಾರವಾಗಿರುವ ಹಿನ್ನೆಲೆಯಲ್ಲಿ ಜನರಿಗೆ ಮಾರ್ಗದರ್ಶನ ಮಾಡಬೇಕು. ಮಾಧ್ಯಮಗಳು ಸುಳ್ಳು ಸುದ್ದಿಗಳನ್ನ ಬಿತ್ತರಿಸಬಾರದು. ಪತ್ರಕರ್ತರಿಗೂ ಇಂದಿನಿಂದ ಲಸಿಕೆ ಹಾಕಿಸಿಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಸಣ್ಣ ಪುಟ್ಟ ಲೋಪಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.
ಜನರು ಹೋಗಿ ಲಸಿಕೆ ಹಾಕಿಸಿಕೊಳ್ಳಬೇಕು. ಲಸಿಕೆ ಹಾಕಿಸಿಕೊಂಡ ಬಳಿಕ ಸೋಂಕು ಬರುವುದಿದಿಲ್ಲಎಂದು ಮಾಸ್ಕ್ ಮರೆಯಬಾರದು. ಕಡ್ಡಾಯವಾಗಿ ಮಾಸ್ಕ್ ಬಳಸಬೇಕು. ಜನರು ಗುಂಪು ಸೇರಬಾರದು ಎಂದು ಸಚಿವ ಸುಧಾಕರ್ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.