ಸಿಎಂ ಬದಲಾವಣೆ ವಿಚಾರದಲ್ಲಿ ಎಚ್ ಡಿ ಡಿ ಕುಟುಂಬ ಎಳೆಯುವುದು ಬೇಡ : ಕುಮಾರಸ್ವಾಮಿ
Team Udayavani, Jun 14, 2021, 4:02 PM IST
ಮಂಡ್ಯ: ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬವನ್ನು ಎಳೆದು ತರುವುದು ಸರಿಯಲ್ಲ. ನಾವು ಯಾರ ಪರವಾಗಿಯೂ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ತಾಲೂಕಿನ ಹನಕೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹಾಗೂ ದೇವೇಗೌಡರನ್ನು ಎರಡೂ ರಾಷ್ಟಿçÃಯ ಪಕ್ಷಗಳು ಹಲವಾರು ವರ್ಷಗಳಿಂದ ದುರ್ಬಳಕೆ ಮಾಡಿಕೊಂಡಿವೆ. ಕೊರೊನಾದಂಥ ಸಮಯವಲ್ಲಿ ರಾಜಕೀಯ ಮಾಡಬಾರದು ಎಂದು ಮೌನವಾಗಿದ್ದೇವೆ. ಮುಂದಿನ ದಿನಗಳಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ದ ಹೋರಾಟ ಮಾಡಲಾಗುವುದು. ಅಲ್ಲಿಯವರೆಗೂ ನಾವು ತಾಳ್ಮೆಯಿಂದ ಇರುತ್ತೇವೆ ಎಂದರು.
ಯಾರು ಮುಖ್ಯಮಂತ್ರಿಯಾಗಿ ಇರುತ್ತಾರೋ ಅದು ನಮಗೆ ಸಂಬAಧವಿಲ್ಲದ ವಿಷಯವಾಗಿದೆ. ನಾಡಿನ ರಕ್ಷಣೆ ಮಾಡುವುದರ ಕಡೆ ಅಧಿಕಾರದಲ್ಲಿರುವವರು ಗಮನ ಕೊಡಬೇಕು. ಕೊರೊನಾವನ್ನು ನಿಯಂತ್ರಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಹೇಳಿದರು.
ಲಘುವಾಗಿ ಪರಿಗಣಿಸಬೇಡಿ:
ಸೋಂಕು ಕಡಿಮೆ ಆಗುತ್ತದೆ ಎಂದು ಲಘುವಾಗಿ ಪರಿಗಣಿಸಬಾರದು. ಈಗಲೂ ಸರ್ಕಾರ ಎಚ್ಚೆತ್ತು ಕೆಲಸ ಮಾಡಬೇಕು. ರಾಜ್ಯದ ಮೂಲೆ ಮೂಲೆಗಳಿಂದ ಜನ ಬೆಂಗಳೂರಿಗೆ ಈಗಾಗಲೇ ಬರುತ್ತಿದ್ದಾರೆ. ಎರಡನೇ ಅಲೆ ನಗರಗಳಷ್ಟೇ ಅಲ್ಲದೆ, ಹಳ್ಳಿಗಳನ್ನೂ ಬಾಧಿಸಿದೆ. ಈಗಲೂ ಕೆಲ ಗ್ರಾಮೀಣ ಭಾಗಗಳಲ್ಲಿ ಸೋಂಕು ಕಡಿಮೆಯಾಗಿಲ್ಲ. ಜನರು ಕೂಡ ಕೋವಿಡ್ ನಿಯಮ ಕಟ್ಟು ನಿಟ್ಟಾಗಿ ಪಾಲಿಸಬೇಕು. ರೈತರು, ಕಾರ್ಮಿಕರು ಸಂಕಷ್ಟದಲ್ಲಿದ್ದಾರೆ. ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ನಷ್ಟಕ್ಕೊಳಗಾಗುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ನೆರವಿಗೆ ಬರಬೇಕು ಎಂದು ಹೇಳಿದರು.
ಖಜಾನೆ ತುಂಬಿಸಲು ಬೆಲೆ ಏರಿಕೆ:
ಸರ್ಕಾರದ ಖಜಾನೆ ತುಂಬಿಸುವುದಕ್ಕೆ ಈ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡಿಸೇಲ್ ದರ ದಿನನಿತ್ಯ ಏರುತ್ತಲೇ ಇದೆ. ಕಾಂಗ್ರೆಸ್ ನಾಯಕರು ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬೆಲೆ ೩೨ ರೂ. ಇದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲಿಯಂ ಪ್ರಾಡಕ್ಟ್ಗಳ ಮೇಲೆ ೬೮ ರೂ. ಸೆಸ್ ವಿಧಿಸುತ್ತಿದೆ. ಈ ಸೆಸ್ ಕಡಿತ ಮಾಡಬೇಕು. ಇಲ್ಲದಿದ್ದರೆ ಜನ ಸಾಮಾನ್ಯರು ಮತ್ತಷ್ಟು ದರ ಏರಿಕೆಯಿಂದ ತತ್ತರಿಸಲಿದ್ದಾರೆ ಎಂದರು.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ:
ನಾನು ಸಿಎಂ ಆಗಿದ್ದಾಗ ಮನ್‌ಮುಲ್ ಆಡಳಿತ ಮಂಡಳಿ ವಿರುದ್ಧ ತನಿಖೆಗೆ ಆದೇಶಿಸಿದ್ದೆ. ಆಗಿನ ಆಡಳಿತ ಮಂಡಳಿ ೭೨ ಕೋಟಿ ರೂ. ಅವ್ಯವಹಾರ ನಡೆಸಿದ ಹಿನ್ನಲೆ ತನಿಖೆ ನಡೆಸಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಬಳಿಕ ತನಿಖೆಗೆ ತಡೆ ಹಿಡಿದಿದ್ದಾರೆ. ಮನ್‌ಮುಲ್ ಮುಳಗಿಸಿ ಬಿಟ್ಟೆವು ಎನ್ನುತ್ತಾರೆ. ಆದರೆ ಮುಳುಗಿಸಿದವರ ರಕ್ಷಣೆಗೆ ಕೆಲವರು ನಿಂತಿದ್ದಾರೆ. ಹಾಲಿಗೆ ನೀರು ಮಿಕ್ಸ್ ಮಾಡುವ ದಂಧೆ ಹಲವು ವರ್ಷಗಳಿಂದ ನಡೆಯುತ್ತಿದೆ ಎಂಬುದನ್ನು ಅಲ್ಲಿ ಕೆಲಸ ಮಾಡುವವರೇ ಹೇಳುತ್ತಿದ್ದಾರೆ. ಈಗ ಸತ್ಯಾಂಶ ಹೊರ ಬಿದ್ದಿದೆ. ಜನರ ದುಡ್ಡು ಲೂಟಿ ಮಾಡುವವರು ಯಾವುದೇ ಪಕ್ಷದವರಾದರೂ ಸರಿ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಖಾರವಾಗಿ ಹೇಳಿದರು.
ಕಾಂಗ್ರೆಸ್ ಪಕ್ಷದ ನಿರ್ಧಾರ:
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟು ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಅವರ ಪಕ್ಷದ ನಿರ್ಧಾರ. ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.