ಬಿಎಸ್‌ವೈ ನಾಯಕತ್ವಕ್ಕೆ ಆಕ್ಷೇಪವಿಲ್ಲ: ಜೋಶಿ
Team Udayavani, Jan 29, 2020, 3:05 AM IST
ಹುಬ್ಬಳ್ಳಿ: ಸಿಎಂ ಯಡಿಯೂರಪ್ಪ ನಾಯಕತ್ವದ ಬಗ್ಗೆ ಕೇಂದ್ರದ ನಾಯಕರಿಗಾಗಲಿ, ರಾಜ್ಯದ ನಾಯಕರಿಗಾಗಲಿ ಯಾವುದೇ ಆಕ್ಷೇಪ ಇಲ್ಲ. ಅವರ ನಾಯಕತ್ವದ ಬಗ್ಗೆ ಅಪಾರ ಗೌರವ ಇದೆ. ಅವರ ನಾಯಕತ್ವಕ್ಕೆ ಆಕ್ಷೇಪ ಎನ್ನುವುದು ಕೇವಲ ಊಹಾಪೋಹ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಬಗ್ಗೆ ಪಕ್ಷದ ಹೈಕಮಾಂಡ್ ಅಪಾರ ಗೌರವ ಹೊಂದಿದೆ.
ಅವರನ್ನು ಕಡೆಗಣಿಸುವ ಮಾತೇ ಇಲ್ಲ. ಸಚಿವ ಸಂಪುಟ ವಿಸ್ತರಣೆ, ಯಾರನ್ನು ಸೇರಿಸಿಕೊಳ್ಳಬೇಕು ಎಂಬುದು ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ಪಕ್ಷ ಅಧಿಕಾರಕ್ಕೆ ಬರಲು ತ್ಯಾಗ ಮಾಡಿದವರಲ್ಲಿ ಎಷ್ಟು ಜನರಿಗೆ ಸಚಿವ ಸ್ಥಾನ ಎಂಬ ಬಗ್ಗೆ ಮುಖ್ಯಮಂತ್ರಿ ಹಾಗೂ ಪಕ್ಷ ತೀರ್ಮಾನಿಸುತ್ತದೆ ಎಂದರು. ಸಿಎಎ, ಎನ್‌ಆರ್‌ಸಿ ವಿರುದ್ಧ ಹೋರಾಟಕ್ಕೆ ಹಾಗೂ ಹಿಂಸಾಚಾರಕ್ಕೆ ವಿದೇಶಗಳಿಂದ ಹಣ ಹರಿದು ಬಂದಿರುವುದು ಆತಂಕಕಾರಿ ವಿಚಾರ.
ವಿದೇಶಿ ಹಣ ಬಳಸಿಕೊಂಡು ಕೆಲವರು ಹೋರಾಟಕ್ಕೆ ಮುಂದಾಗಿರುವುದು ಕಳವಳಕಾರಿ ಸಂಗತಿ. ಸಿಎಎ ಬಗ್ಗೆ ಸಂಸತ್‌ನಲ್ಲಿ ಸುದೀರ್ಘ ಚರ್ಚೆಯಾಗಿದೆ. ವಿಪಕ್ಷಗಳ ಎಲ್ಲ ಪ್ರಶ್ನೆಗಳಿಗೂ ಸಮರ್ಪಕ ಉತ್ತರ ನೀಡಿ, ಸಂಸತ್ತಿನಲ್ಲಿ ಒಪ್ಪಿಗೆ ಪಡೆದ ನಂತರವೇ ಕಾಯ್ದೆ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಅದರ ವಿರುದ್ಧ ಕೆಲವರು ವಿನಾಕಾರಣ ಹೋರಾಟಕ್ಕಿಳಿಸಿದ್ದು, ಇದರ ಹಿಂದೆ ಕಾಂಗ್ರೆಸ್ ಸೇರಿ ವಿಪಕ್ಷಗಳ ಕುಮ್ಮಕ್ಕು ಇದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.