ಈದ್ಗಾ ಮೈದಾನದಲ್ಲಿ ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶವಿಲ್ಲ; ಸರ್ಕಾರದ ತೀರ್ಮಾನ
Team Udayavani, Aug 11, 2022, 2:20 PM IST
ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ವಿವಾದವನ್ನು ತಣ್ಣಗಾಗಿಸಲು ಸರಕಾರ ಮುಂದಾಗಿದ್ದು, ಯಾವುದೇ ಸಂಘಟನೆಗಳಿಗೆ ಧ್ವಜಾರೋಹಣಕ್ಕೆ ಅವಕಾಶ ನೀಡದೇ ಇರಲು ನಿರ್ಧರಿಸಿದೆ.
ಕಂದಾಯ ಸಚಿವ ಆರ್.ಅಶೋಕ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಸರಕಾರದ ವತಿಯಿಂದಲೇ ಈ ಬಾರಿ ಧ್ವಜಾರೋಹಣ ನಡೆಸಲಾಗುತ್ತದೆ.
ಇದನ್ನೂ ಓದಿ:ಸಿಎಂ ಬದಲಾವಣೆ ವಿಚಾರದಲ್ಲಿ ಅಂತರ ಕಾಯ್ದುಕೊಂಡ ಸಿದ್ದರಾಮಯ್ಯ
ಸರಕಾರದ ಪರವಾಗಿ ಉಪವಿಭಾಗಾಧಿಕಾರಿ ಧ್ವಜಾರೋಹಣ ನಡೆಸಲಿದ್ದು, ಸಾರ್ವಜನಿಕರು ಭಾಗವಹಿಸಬಹುದಾಗಿದೆ. ಯಾವುದೇ ಸಂಘಟನೆಗಳಾಗಲಿ, ಶಾಸಕ ಜಮೀರ್ ಅಹ್ಮದ್ ಖಾನ್ ಅವರಾಗಲಿ ವೈಯಕ್ತಿಕವಾಗಿ ಧ್ವಜಾರೋಹಣ ನಡೆಸುವಂತಿಲ್ಲ. ಸರಕಾರವೇ ಧ್ವಜಾರೋಹಣ ನಡೆಸುತ್ತದೆ ಎಂದು ಸಭೆಯ ಬಳಿಕ ಕಂದಾಯ ಸಚಿವ ಆರ್.ಅಶೋಕ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.