ಅಂತರ್ ಜಿಲ್ಲೆ ಓಡಾಟಕ್ಕೆ ಪಾಸ್ ಅಗತ್ಯವಿಲ್ಲ
Team Udayavani, May 21, 2020, 7:13 AM IST
ಬೆಂಗಳೂರು: ಲಾಕ್ ಡೌನ್ 4.0 ಸಂದರ್ಭದಲ್ಲಿ ಅಂತರ್ ಜಿಲ್ಲಾ ಓಡಾಟಕ್ಕೆ ಯಾವುದೇ ಪಾಸ್ ಪಡೆಯುವ ಅಗತ್ಯವಿಲ್ಲ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ. ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಈ ಹಿಂದಿನ 3 ಬಾರಿಯ ಲಾಕ್ ಡೌನ್ ಸಂದರ್ಭದಲ್ಲಿ ಯಾವೆಲ್ಲ ಷರತ್ತುಗಳು ಜಾರಿಯಲ್ಲಿದ್ದವೋ ಅವೆಲ್ಲ ಅನ್ವಯವಾಗುತ್ತದೆ. ಈ ಮೊದಲು ಅಂತರ್ ಜಿಲ್ಲೆ ಓಡಾಟಕ್ಕೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಪಾಸ್ ಪಡೆಯುವ ಅಗತ್ಯವಿತ್ತು.
ಇದೀಗ ಈ ನಿಯಮವನ್ನು ಸಡಿಲಿಕೆ ಮಾಡಲಾಗಿದೆ. ಈ ಹಿಂದಿನ ನಿಯಮದ ಪ್ರಕಾರ, ಸರ್ಕಾರಿ ನೌಕರರು ಪೊಲೀಸರಿಗೆ ತಮ್ಮ ಗುರುತಿನ ಚೀಟಿ ತೋರಿಸಿ ಸಂಚರಿಸಬೇಕು. ಆದರೆ, ಹೊಸ ಲಾಕ್‌ಡೌನ್ ನಿಯಮವನ್ನು ಪಾಲಿಸಬೇಕು. ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಯಾವುದೇ ಖಾಸಗಿ ವಾಹನಗಳು ಸಂಚರಿಸುವಂತಿಲ್ಲ. ಸಾರ್ವಜನಿಕರು ಈ ನಿಯಮವನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.