ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನಲ್ಲೆಲ್ಲೂ ಪ್ರತಿಭಟನೆ-ರಾಲಿ ನಡೆಸುವಂತಿಲ್ಲ:ಹೈಕೋರ್ಟ್
Team Udayavani, Mar 3, 2022, 4:46 PM IST
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ಹೊರತುಪಡಿಸಿ ರಾಜಧಾನಿ ಬೆಂಗಳೂರಿನ ಯಾವುದೇ ಭಾಗದಲ್ಲಿಯೂ ರಾಜಕೀಯ ಪಕ್ಷಗಳು ಹಾಗೂ ಸಂಘಟನೆಗಳ ಪ್ರತಿಭಟನೆ, ಮೆರವಣಿಗೆ, ರಾಲಿ ನಡೆಸಬಾರದು ಎಂದು ಹೈಕೋರ್ಟ್ ಆದೇಶಿಸಿದೆ.
ರಾಜಕೀಯ ಪಕ್ಷಗಳು ಅಥವಾ ಸಂಘಟನೆಗಳು ಪ್ರತಿಬಾರಿ ಪಾದಯಾತ್ರೆ-ಪ್ರತಿಭಟನೆ ಕೈಗೊಂಡಾಗಲೂ ಜನಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿರುವ ಹಿನ್ನೆಲೆಯಲ್ಲಿ ನಿಗದಿತ ಸ್ಥಳ (ಫ್ರೀಡಂ ಪಾರ್ಕ್) ಹೊರತುಪಡಿಸಿ, ನಗರದ ಬೇರೆ ಯಾವ ಕಡೆಯೂ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳಿಗೆ ಪ್ರತಿಭಟನೆ, ಮೆರವಣಿಗೆ ನಡೆಸುವುದನ್ನು ನಿರ್ಬಂಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಇದನ್ನೂ ಓದಿ:ರಿಸ್ಕ್ ತೆಗೆದುಕೊಳ್ಳದೇ ಹೋಗಿದ್ದರೆ ಖಂಡಿತವಾಗಿಯೂ ಬರಲು ಆಗುತ್ತಿರಲಿಲ್ಲ
ಅಲ್ಲದೇ, ಈ ಆದೇಶವನ್ನು ಆದಷ್ಟು ಬೇಗ ಜಾರಿಗೆ ತರುವಂತೆಯೂ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಇದೇ ವೇಳೆ ಕಾಂಗ್ರೆಸ್ ಪಾದಯಾತ್ರೆಯಿಂದ ಸಂಚಾರ ದಟ್ಟಣೆ ಉಂಟಾಗಿದ್ದಕ್ಕೆ ಹೈಕೋರ್ಟ್ ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.