BJP; ನನಗೆ ಅವಮಾನಿಸಿದ ಪಕ್ಷಕ್ಕೆ ಮರಳಲಾರೆ: ಶೆಟ್ಟರ್
Team Udayavani, Dec 1, 2023, 11:38 PM IST
ವಿಜಯಪುರ : ನನಗೆ ಅವಮಾನ ಮಾಡಿರುವ ಬಿಜೆಪಿ ಪಕ್ಷಕ್ಕೆ ಮರಳಿ ಹೋಗುವ ಪ್ರಶ್ನೆಯೇ ಇಲ್ಲ ಎಂದು ಕಡ್ಡಿ ಮುರಿದಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ನಾನು ಬಿಜೆಪಿ ಪಕ್ಷಕ್ಕೆ ಮರಳುತ್ತೇನೆ ಎಂದು ಈಶ್ವರಪ್ಪ ಹೇಳುತ್ತಿರುವುದ ಓಲೈಕೆಗೆ ಹಾಗೂ ಹಸಿ ಸುಳ್ಳು ಎಂದು ಜಗದೀಶ ಶೆಟ್ಟರ್ ಹರಿಹಾಯ್ದರು.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸೇರಲು ನನಗೆ ಯಾರಿಂದಲೂ ಆಹ್ವಾನ ಬಂದಿಲ್ಲ, ಯಾವ ಕಾರಣಕ್ಕೂ ನಾನು ಮರಳಿ ಬಿಜೆಪಿ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಇಲ್ಲ ಎಂದರು.
ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದನ್ನು ತಡೆಯಲು ನನ್ನ ಹೆಸರು ಬಳಸಿ ಇಂಥ ಹೇಳಿಕೆ ಕೊಡುತ್ತಿದ್ದಾರೆ. ಜಗದೀಶ ಶೆಟ್ಟರ್ ಅವರೇ ಬಿಜೆಪಿ ಪಕ್ಷಕ್ಕೆ ಮರಳಲಿದ್ದು, ಕಾಂಗ್ರೆಸ್ ಸೇರಬೇಡಿ ಎಂದು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಕಿಡಿ ಕಾರಿದರು.
ಬಿಜೆಪಿ ಪಕ್ಷ ಲಕ್ಷ್ಮಣ ಸವದಿ ಹಾಗೂ ನನಗೆ ವಿಧಾನಸಭಾ ಟಿಕೆಟ್ ತಪ್ಪಿಸಿದ ಪರಿಣಾಮವನ್ನು ಚುನಾವಣೆ ಫಲಿತಾಂಶದ ಮೂಲಕ ರಾಜ್ಯದ ಜನರು ಬಿಜೆಪಿ ಪಕ್ಷಕ್ಕೆ ತೋರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅಂಥ ಹೊಡೆತ ತಡೆಯಲು ನಾನು ಬಿಜೆಪಿ ಸೇರುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಹರಿಹಾಯ್ದರು.
ಈಶ್ವರಪ್ಪ ಹೇಳಿದಂತೆ ನನ್ನ ರಕ್ತದಲ್ಲಿ ಹಿಂದೂತ್ವವೇ ಹರಿಯುತ್ತದೆ. ಆದರೆ ನನಗೆ ಟಿಕೇಟ್ ತಪ್ಪಿಸಿದ್ದು ಏಕೆ ಎಂದು ಪ್ರಶ್ನಿಸಿದ ಶಟ್ಟರ್, ಜನಸಂಘದಿಂದ ನಮ್ಮ ತಂದೆ, ಚಿಕ್ಕಪ್ಪ ಅವರೆಲ್ಲ ಪಕ್ಷ ಸಂಘಟನೆ ಮಾಡಿದ್ದಾರೆ. ಅಂಥ ನಮ್ಮ ಕುಟುಂಬಕ್ಕೆ ಸಣ್ಣ ಎಂ.ಎಲ್.ಎ. ಟಿಕೇಟ್ ಕೊಡೊಕೆ ಆಗಲಿಲ್ಲ. ಜನಸಂಘದಿಂದ ಬಂದವರಿಗೆ ಬಿಜೆಪಿ ಟಿಕೆಟ್ ಕೊಟ್ಟಿಲ್ಲ ಎಂದು ಕಿಡಿ ಕಾರಿದರು.
ಬಿಜೆಪಿ ಯಾರನ್ನ ಕಡೆಗಣಿಸುತ್ತಿದೆ ಎನ್ನುವುದಕ್ಕೆ ಇದು ತಾಜಾ ಉದಾಹರಣೆ. ರಾಜಕಾರಣದಲ್ಲಿ ಹಿಂದುತ್ವ ಏಕೆ ಬೆರೆಸಲಾಗುತ್ತಿದೆ. ಹಿಂದುಳಿದ ವರ್ಗದವರು, ಶೋಷಿತರು ಸೇರಿದಂತೆ ಇತರೆ ಎಲ್ಲ ಸಮುದಾಯ, ಸಮಾಜಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎಲ್ಲ ಧರ್ಮಗಳ ಜೊತೆಗೆ ಸೌಹಾರ್ದ ವಾತಾವರಣ ಉಂಟು ಮಾಡುವ ಅವಶ್ಯಕತೆ ಇದೆ ಎಂದರು.
ನಾನು ಕಾಂಗ್ರೆಸ್‌ಗೆ ಹೋಗುವ ಪರಿಸ್ಥಿತಿ ನಿರ್ಮಾಣ ಮಾಡಿದ್ದು ಬಿಜೆಪಿ. ಈ ಬಗ್ಗೆ ಅವರು ಆತ್ಮಾವಲೋಕನ ಮಾಡಿಕೊಳ್ಳಲಿ. ಬಿಜೆಪಿ ಕಟ್ಟಿ ಬೆಳೆಸಿದ ವ್ಯಕ್ತಿಗೆ ಅಪಮಾನ ಮಾಡಿದ್ದಾರೆ, ನನ್ನನ್ನು ಹಾಗೂ ಕೆಲವರನ್ನು ಬಹಳ ಹೀನಾಯವಾಗಿ ನಡೆಸಿಕೊಂಡು ಅಪಮಾನ ಮಾಡಿದರು ಎಂದು ವಾಗ್ದಾಳಿ ನಡೆಸುದರು.
ಈಶ್ವರಪ್ಪ ಅಪೇಕ್ಷೆಯಿಂದ ನಾನೇನು ಮಾಡಲಿ, ಅವರ ಅಪೇಕ್ಷೆ ನೂರೆಂಟು ಇರುತ್ತದೆ ಅವನ್ನೆಲ್ಲಾ ಈಡೇರಿಸಲು ನನಗೆ ಆಗದು. ಬಿಜೆಪಿಯಲ್ಲಿ ಅಪಮಾನ ಮಾಡಿದ್ದಕ್ಕೆ ನಾನು ಪಕ್ಷ ಬಿಟ್ಟೆ ಎಂದು ಹೇಳಿದರು.
ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಕಾಂಗ್ರೆಸ್ ಬಲಯುತವಾಗುತ್ತಿದೆ. ಜನರ ಬೆಂಬಲ ಸಿಗುತ್ತಿದೆ. ಡಿ. 3 ರಂದು ಫಲಿತಾಂಶ ಬರಲಿದ್ದು ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಗೆದ್ದು, ಅಧಿಕಾರ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.