C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
ಕಲಾಪದ ಆಡಿಯೋ ಮತ್ತು ವಿಡಿಯೋ ಪರಿಶೀಲನೆ ಸಾಧ್ಯತೆ... ತಾರ್ಕಿಕ ಅಂತ್ಯದವರೆಗೂ ಹೋರಾಟ: ಬಿಜೆಪಿ ಆಕ್ರೋಶ
Team Udayavani, Dec 20, 2024, 7:19 PM IST
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಅವಾಚ್ಯ ಶಬ್ದ ಬಳಸಿರುವ ಆರೋಪದ ಸುತ್ತಲಿನ ವಿವಾದದಲ್ಲಿ ಮಹತ್ವದ ತಿರುವು ಎಂಬಂತೆ ”ಯಾವುದೇ ಅವಾಚ್ಯ ಶಬ್ದಗಳನ್ನು ಬಳಸಿರುವುದಕ್ಕೆ ದಾಖಲೆ ಇಲ್ಲ” ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಶುಕ್ರವಾರ(ಡಿ20 ) ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ಅವರು ”ಸಿ.ಟಿ.ರವಿ ಅವರು ಬಳಸಿದ್ದಾರೆ ಎನ್ನಲಾದ ಪದ ಪರಿಷತ್ತಿನಲ್ಲಿ ದಾಖಲಾಗಿಲ್ಲ.ಸಿ.ಟಿ.ರವಿ ಮತ್ತು ಸಚಿವೆ ಲಕ್ಷ್ಮಿ ಇಬ್ಬರೂ ದೂರು ನೀಡಿದ್ದು, ನಾನು ಅವರೊಂದಿಗೆ ಮಾತನಾಡಿದ್ದೇನೆ, ನಂತರ ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಿಸಲಾಗಿದೆ” ಎಂದು ಹೇಳಿದ್ದಾರೆ.
ಸೂಕ್ಷ್ಮಗಳನ್ನು ಕಂಡು ಹಿಡಿವ ಅನಿವಾರ್ಯತೆ
ಸಭಾಪತಿಗಳ ಹೇಳಿಕೆ ಮಹತ್ವ ಪಡೆದಿದ್ದು, ಪೊಲೀಸರು ತನಿಖೆಯ ಭಾಗವಾಗಿ ಪರಿಷತ್ ಕಲಾಪದ ಆಡಿಯೋ ಮತ್ತು ವಿಡಿಯೋ ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಪ್ರಕರಣ ದೊಡ್ಡ ಮಟ್ಟದ ರಾಜಕೀಯ ಸಮರಕ್ಕೆ ಕಾರಣವಾಗಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಸೂಕ್ಷ್ಮಗಳನ್ನು ಕಂಡು ಹಿಡಿದು ಯಾವ ಪದ ಬಳಕೆ ಮಾಡಿದ್ದಾರೆ ಎನ್ನುವುದನ್ನು ಕಂಡು ಹಿಡಿಯಬೇಕಾದ ಅನಿವಾರ್ಯತೆ ಎದುರಾಗಿದೆ.
ಈಗಾಗಲೇ ಸಿ.ಟಿ.ರವಿ ಅವರನ್ನು ಬಂಧಿಸಿಸುವುದಕ್ಕೆ ಮತ್ತು ಸುವರ್ಣ ಸೌಧದ ಆವರಣದಲ್ಲೇ ಅವರ ಮೇಲೆ ದಾಳಿ ನಡೆಸಲುಯತ್ನಿಸಿರುವುದರ ವಿರುದ್ಧ ಬಿಜೆಪಿ ಸಮರ ಸಾರಿದೆ. ಕಾಂಗ್ರೆಸ್ ಕೂಡ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.
ಇನ್ನೊಂದೆಡೆ ಕಾಂಗ್ರೆಸ್ ನ ಪರಿಷತ್ ಸದಸ್ಯರು ಸಿ.ಟಿ.ರವಿ ಅವರು ಅವಾಚ್ಯ ಪದ ಬಳಕೆ ಮಾಡಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ ಎಂದು ಆಕ್ರೋಶ ಹೊರ ಹಾಕುತ್ತಲೇ ಇದ್ದಾರೆ. ಬಿಜೆಪಿ ಸದಸ್ಯರು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಪವನ್ನು ತಳ್ಳಿ ಹಾಕಿದ್ದಾರೆ.
ಬಿಜೆಪಿ ಆಕ್ರೋಶ
ಸಿಟಿ.ರವಿ ಅವರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಆದೇಶ ನೀಡಿದ ಬೆನ್ನಲ್ಲೇ ಬಿಜೆಪಿ ಆಕ್ರೋಶ ಇನ್ನಷ್ಟು ಹೆಚ್ಚಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ “ರಾಜ್ಯ ಉಚ್ಛ ನ್ಯಾಯಾಲಯ ಕಾಂಗ್ರೆಸ್ ಸರ್ಕಾರದ ಪೊಲೀಸ್ ದಬ್ಬಾಳಿಕೆಗೆ ಮಂಗಳಾರತಿ ಎತ್ತಿದೆ.ಪ್ರಜಾಪ್ರಭುತ್ವ ಗೆದ್ದಿದೆ,ಶಾಸಕ ಸಿ.ಟಿ.ರವಿ ಅವರ
ಬಿಡುಗಡೆಗೆ ಆದೇಶ ಹೊರಟಿದೆ. ಜನಪ್ರತಿನಿಧಿಗಳು ಎಂಬುದನ್ನೂ ಲೆಕ್ಕಿಸದೇ ನೀತಿ-ನಿಯಮಗಳನ್ನು ಮೀರಿ ಪೊಲೀಸ್ ಬಲ ಬಳಸಿಕೊಂಡು, ಸರ್ವಾಧಿಕಾರಿ ಆಡಳಿತ ನೆನಪಿಸುವ ರೀತಿಯಲ್ಲಿ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ನಿನ್ನೆಯಿಂದ ಇಂದಿನವರಗೂ ಮಾನ್ಯ ಸಿ. ಟಿ. ರವಿ ಅವರನ್ನು ನಿಯಮ ಮೀರಿ ಬಂಧಿಸುವ ಮೂಲಕ ತುರ್ತು ಪರಿಸ್ಥಿತಿಯ ಕರಾಳತೆಯನ್ನು ಕಾಂಗ್ರೆಸ್ ಸರ್ಕಾರ ಇಂದಿನ ಪೀಳಿಗೆಗೆ ನೆನಪು ಮಾಡಿಕೊಟ್ಟಿದೆ.
ಗೂಂಡಾಗಳನ್ನು ಪೋಷಿಸಿಕೊಂಡು ಸರ್ಕಾರ ನಡೆಸುವುದು, ಪೊಲೀಸರನ್ನು ಬಳಸಿಕೊಂಡು ಯಾರನ್ನು ಬೇಕಾದರೂ ಬಂಧಿಸುತ್ತೇವೆಂದು ದ್ವೇಷ ಸಾರಲು ಹೊರಟಿದ್ದ ಈ ಸರ್ಕಾರಕ್ಕೆ ಪಾಠ ಹೇಳುವ ರೀತಿಯಲ್ಲಿ ಉಚ್ಚ ನ್ಯಾಯಾಲಯ ಸಕಾಲದಲ್ಲಿ ಮದ್ಯ ಪ್ರವೇಶಿಸಿ ಸಂವಿಧಾನ ಹಾಗೂ ಈ ನೆಲದ ಕಾನೂನಿನ ಘನತೆಯನ್ನು ತಿಳಿಸಿಕೊಟ್ಟಿದೆ. ನ್ಯಾಯಾಲಯದ ಈ ತೀರ್ಪನ್ನು ಕರ್ನಾಟಕದ ಜನತೆಯ ಪರವಾಗಿ ಹೃತ್ಪೂರ್ವಕವಾಗಿ ಸ್ವಾಗತಿಸಿ, ಶಾಸಕ ಸಿ.ಟಿ ರವಿಯವರನ್ನು ಅಭಿನಂದಿಸುತ್ತೇನೆ.
”ಪ್ರಜಾಪ್ರಭುತ್ವ ದಮನಮಾಡಿ ದಬ್ಬಾಳಿಕೆ, ಕ್ರೌರ್ಯ ತುಂಬಿಕೊಂಡ ವರ್ತನೆಗಳು ಹಾಗೂ ಭ್ರಷ್ಟಾಚಾರದ ಹಗರಣಗಳನ್ನು ಮೈಗೆ ಮೆತ್ತಿಕೊಂಡಿರುವ ಈ ಕಾಂಗ್ರೆಸ್ ಸರ್ಕಾರದ ವಿರುದ್ಧ ತಾರ್ಕಿಕ ಅಂತ್ಯ ಕಾಣುವವರೆಗೂ ಬಿಜೆಪಿ ವಿರಮಿಸದೇ ತನ್ನ ಹೋರಾಟ ಮುಂದುವರೆಸಲಿದೆ.ಪ್ರಜಾಪ್ರಭುತ್ವ ದೇಗುಲದಲ್ಲಿ ನಡೆದ ಪರಮ ದೌರ್ಜನ್ಯದ ಈ ಘಟನೆಯನ್ನು, ದೇಶದ ಗಮನ ಸೆಳೆಯುವಂತೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಪರಿಣಾಮಕಾರಿ ಪಾತ್ರ ವಹಿಸಿದ ಮಾಧ್ಯಮಗಳನ್ನು ಈ ಸಂದರ್ಭದಲ್ಲಿ ಮನಃ ಪೂರ್ವಕವಾಗಿ ಅಭಿನಂದಿಸುವೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.