ಮತ್ತೆ ಲಾಕ್ ಡೌನ್ ಮಾಡುವ ಯಾವುದೇ ಚಿಂತೆನೆ ಇಲ್ಲ: ಸಚಿವ ಕೆ.ಸುಧಾಕರ್
Team Udayavani, Nov 29, 2021, 12:37 PM IST
ಬೆಂಗಳೂರು: ಈಗಾಗಲೇ ಅನುಭವಿಸಿರುವ ಲಾಕ್ ಡೌನ್ ನಿಂದ ಜನರು ಸಾಕಷ್ಟು ನೊಂದಿದ್ದಾರೆ. ಹೀಗಾಗಿ ಮತ್ತೆ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದಾಗಿ ಅನಾರೋಗ್ಯ ಸಮಸ್ಯೆ, ಲಾಕ್ ಡೌನ್ ನಿಂದ ಆರ್ಥಿಕವಾಗಿ ಈಗಾಗಲೇ ಜನರು ಬಹಳಷ್ಟು ನೊಂದಿದ್ದಾರೆ. ಬಹಳ ನಷ್ಟ ಅನುಭವಿಸಿದ್ದಾರೆ. ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ, ಹೀಗಾಗಿ ಮತ್ತೆ ಮತ್ತೆ ಆತಂಕ, ಸಮಸ್ಯೆ ಸೃಷ್ಟಿ ಮಾಡುವ ಕೆಲಸ ಮಾಡುವುದಿಲ್ಲ, ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದರು.
ಇದನ್ನೂ ಓದಿ:ಮುನಾವರ್ ಫಾರುಕಿ ಕಾರ್ಯಕ್ರಮ ರದ್ದಾದ ಬೆನ್ನಲ್ಲೇ ಟ್ರೆಂಡಿಂಗ್ ಆದ ಜಾಕಿರ್ ಖಾನ್
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿ ಹಬ್ಬುತ್ತಿದೆ. ಹೀಗೆ ಲಾಕ್ ಡೌನ್ ನ ಸುಳ್ಳು ಸುದ್ದಿ ಹಬ್ಬಿಸಿ ಜನರಲ್ಲಿ ಭಯ, ಆತಂಕ ಸೃಷ್ಟಿಸುವುದು ಬೇಡ, ಗೊಂದಲಮಯ ಸುದ್ದಿ ಹಾಕುವುದು ಬೇಡ ಎಂದರು.
ಕೋವಿಡ್ ರೂಪಾಂತರಿ ಹೊಸ ತಳಿ ಬರುತ್ತಿದೆ, ಇದು ಬಹಳ ವೇಗವಾಗಿ ಸಮುದಾಯದಲ್ಲಿ ಹರಡುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ಸರಿಯಾದ ಎಚ್ಚರಿಕೆ ಸುದ್ದಿ ನೀಡುತ್ತಿದ್ದೀರಿ. ಅದು ಮುಂದುವರಿಯಲಿ, ಆದರೆ ಲಾಕ್ ಡೌನ್ ನಂತಹ ಆತಂಕಗೊಳಿಸುವ ಸುದ್ದಿ ಬೇಡ ಎಂದು ಮನವಿ ಮಾಡಿಕೊಂಡರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.