CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Team Udayavani, Nov 18, 2024, 6:45 AM IST
ಬೆಂಗಳೂರು: ಮುಖ್ಯಮಂತ್ರಿ ಆಗುವ ಹಿರಿತನ ಮತ್ತು ಸಾಮರ್ಥ್ಯ ಇರುವಂತಹ ಸಮುದಾಯದ ನಾಯಕರಿಗೆ ಯಾವುದೇ ಉಪಯೋಗಕ್ಕೆ ಬಾರದ ಖಾತೆಗಳನ್ನು ನೀಡಿದ್ದಾರೆ. ನಾವೇನು ಜೀತಕ್ಕೆ ಇದ್ದೇವಾ ಎಂದು ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಗುಡುಗಿದರು.
ಗಾಂಧಿ ಭವನದಲ್ಲಿ ಕರ್ನಾಟಕ ರಾಜ್ಯ ಮಾದಿಗ ಪ್ರಾಧ್ಯಾಪಕರ ವೇದಿಕೆ ಹಮ್ಮಿಕೊಂಡಿದ್ದ “ಒಳಮೀಸಲಾತಿ; ಚಿಂತನ ಮಂಥನ’ ಕುರಿತ ಶಿಬಿರದಲ್ಲಿ ಮಾತನಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಹೊಂದಿರುವ 7 ಬಾರಿ ಸಂಸದರಾದ ಕೆ.ಎಚ್. ಮುನಿಯಪ್ಪ ಅವರಿಗೆ ಈ ಹಿಂದೆ ಗೋವಿಂದ ಕಾರಜೋಳ ಅವರಿಗೆ ಹೆಚ್ಚುವರಿಯಾಗಿ ಕೊಟ್ಟಂತಹ ಖಾತೆಯನ್ನು ನೀಡಲಾಗಿದೆ.
ಸಮುದಾಯದ ಇಬ್ಬರು ಸಚಿವರಿದ್ದಾರೆ. ಆ ಇಬ್ಬರಿಗೂ ನಮ್ಮ ಸಮಾಜದವರಿಗೆ ಒಂದು ಲೈಸನ್ಸ್ ಕೂಡ ಕೊಡಲು ಆಗುವುದಿಲ್ಲ. ಯಾವುದೇ ಉಪಯೋಗ ಆಗದಿರುವ ಖಾತೆಗಳನ್ನು ಕೊಟ್ಟಾಗ ನಾವು ಹೇಗೆ ಸುಮ್ಮನಿರುವುದು? ಇದೇ ಸಾಲಿನಲ್ಲಿ ಸಚಿವ ಆರ್.ಬಿ. ತಿಮ್ಮಾಪುರ, ರಾಜ್ಯಸಭೆ ಮಾಜಿ ಸದಸ್ಯ ಡಾಣ ಎಲ್. ಹನುಮಂತಯ್ಯ ಕೂಡ ಇದ್ದಾರೆ. ಇದೇ ಸರಕಾರದಲ್ಲಿ ನಮ್ಮ “ಬ್ರದರ್’ಗಳಿಗೇ (ಎಸ್ಸಿ ಬಲ) ಗೃಹ ಸೇರಿದಂತೆ ಪ್ರಮುಖ ಖಾತೆಗಳನ್ನು ನೀಡಲಾಗಿದೆ. ನಮ್ಮವರಿಗೆ ಮಾತ್ರ ಯಾವುದೇ ಉಪಯೋಗಕ್ಕೆ ಬಾರದ ಖಾತೆಗಳನ್ನು ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.