ಜಿಲ್ಲೆಗೊಬ್ಬ ನೋಡೆಲ್ ಅಧಿಕಾರಿ ನೇಮಕ
Team Udayavani, Dec 6, 2017, 7:45 AM IST
ಬೆಂಗಳೂರು: ಸರ್ಕಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಶೈಕ್ಷಣಿಕ ಕಾರ್ಯಕ್ರಮವನ್ನು ರಾಜ್ಯದ ಶೈಕ್ಷಣಿಕ ಜಿಲ್ಲೆಗಳಲ್ಲಿ
ರಚನಾತ್ಮಕವಾಗಿ ಅನುಷ್ಠಾನಗೊಳಿಸಲು ಜಿಲ್ಲೆಗೊಬ್ಬ ನೋಡೆಲ್ ಅಧಿಕಾರಿಯನ್ನು ನೇಮಿಸಿ ಇಲಾಖೆ ಸುತ್ತೋಲೆ ಹೊರಡಿಸಿದೆ.
ಸರ್ಕಾರದ ಎಲ್ಲಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆ, ಅಧಿಕಾರಿಗಳ ಜಿಲ್ಲಾ ಪ್ರವಾಸದ ಮಾಹಿತಿ ಸಭೆ, ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಯನ್ನು ಈ ಅಧಿಕಾರಿಗಳಿಗೆ ವಹಿಸಲಾಗಿದೆ. ಇಲಾಖೆ ಆಯುಕ್ತರು, ಬೆಂಗಳೂರು ಉತ್ತರ ಮತ್ತು ದಕ್ಷಿಣ ಜಿಲ್ಲೆಯ ನೋಡಲ್ ಅಧಿಕಾರಿಯಾಗಿ ಸೇವೆ ಸಲ್ಲಿಸಲಿದ್ದಾರೆ. ಎಸ್‌ಎಸ್‌ಎ ನಿರ್ದೇಶಕರಿಗೆ ಬೆಳಗಾವಿ, ಧಾರವಾಡ ಮತ್ತು ಕಲಬುರಗಿ
ವಿಭಾಗದ ಅಪರ ಆಯುಕ್ತರಿಗೆ ಕ್ರಮವಾಗಿ ಬೀದರ್, ವಿಜಯಪುರ, ನಿರ್ದೇಶಕರ ವರ್ಗಕ್ಕೆ ಹಾಸನ, ಮಂಡ್ಯ, ಮೈಸೂರು ಹೀಗೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಒಂದೊಂದು ಜಿಲ್ಲೆಯ ಹಂಚಿಕೆ ಮಾಡಲಾಗಿದೆ.
ಆರ್‌ಟಿಐ ಪ್ರಕರಣದ ವಿಲೇವಾರಿಯ ನಿರ್ವಹಣೆ, ಶುಲ್ಕ ಜಮಾ ಮಾಡಿರುವ ದಾಖಲೆ, ಸಾರ್ವಜನಿಕ ಕುಂದುಕೊರತೆ, ಮಹಿಳಾ ಆಯೋಗ ಸೇರಿದಂತೆ ವಿವಿಧ ಆಯೋಗದಿಂದ ಬರುವ ಅರ್ಜಿಗಳ ನಿರ್ವಹಣೆಯ ಪರಿಶೀಲನೆ ಮಾಡಲು ಈ ಅಧಿಕಾರಿಗಳಿಗೆ ತಿಳಿಸಲಾಗಿದೆ. ಎಸ್ಸೆಸ್ಸೆಲ್ಸಿ ಫಲಿತಾಂಶದ ವಿಶ್ಲೇಷಣೆ ಹಾಗೂ ಕ್ರಿಯಾ ಯೋಜನೆಯ ಅನುಷ್ಠಾನ ಜತೆಗೆ 32 ಅಂಶಗಳ ಬಗ್ಗೆ ಗಮನ ಹರಿಸಲು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
Bellary; ಲೂಟಿ ಮಾಡಿದ ರೆಡ್ಡಿಯನ್ನು ಯಾಕೆ ಪಕ್ಷಕ್ಕೆ ಸೇರಿಸಿದಿರಿ: ಮೋದಿಗೆ ಸಿಎಂ ಪ್ರಶ್ನೆ
Renukaswamy Case: ಪವಿತ್ರಾ ಗೌಡ ಸೇರಿ ನಾಲ್ವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
Sugarcane: ನ.8ರಿಂದ ಕಬ್ಬು ಕಟಾವು ಆರಂಭಿಸಿ: ರೈತರಿಗೆ ಸಚಿವ ಶಿವಾನಂದ ಪಾಟೀಲ ಮನವಿ
MUST WATCH
ಹೊಸ ಸೇರ್ಪಡೆ
Suniel Shetty: ಆ್ಯಕ್ಷನ್ ದೃಶ್ಯದ ಚಿತ್ರೀಕರಣದ ವೇಳೆ ಅವಘಡ; ಸುನಿಲ್ ಶೆಟ್ಟಿಗೆ ಗಂಭೀರ ಗಾಯ
IPL 2025: ಹರಾಜು ಪಟ್ಟಿಯಲ್ಲಿಲ್ಲ ಬೆನ್ ಸ್ಟೋಕ್ಸ್ ಹೆಸರು!
ರೀಲ್‌ನಿಂದ ರಿಯಲ್ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
ʼಅಮರನ್’ ಫೋನ್ ನಂಬರ್ ಸೀನ್; ಸಾಯಿಪಲ್ಲವಿ ನಂಬರ್ ಎಂದು ವಿದ್ಯಾರ್ಥಿಗೆ ನೂರಾರು ಕಾಲ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.