ಪ್ರಚಾರಕ್ಕಿಳಿಯದ ಸಂಸದ: ಬಿಜೆಪಿಗೆ ತಲೆನೋವು
Team Udayavani, Nov 26, 2019, 3:04 AM IST
ಬೆಂಗಳೂರು: ಹೊಸಕೋಟೆ ಕ್ಷೇತ್ರದ ಉಪಚುನಾವಣಾ ಕಣ ರಂಗೇರಿದ್ದು, ಈವರೆಗೆ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪ್ರಚಾರ ಕಣದಲ್ಲಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ. ಅಲ್ಲದೇ, ರಾಜ್ಯ ಬಿಜೆಪಿ ನಾಯಕರು ಇದನ್ನು ಸೂಕ್ಷ್ಮವಾಗಿಯೇ ಗಮನಿಸುತ್ತಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶರತ್ ಬಚ್ಚೇಗೌಡ ಸ್ಪರ್ಧಿಸಿರುವ ಹೊಸಕೋಟೆ ಕ್ಷೇತ್ರ ತೀವ್ರ ಕುತೂಹಲ ಕೆರಳಿಸಿರುವ ಉಪಚುನಾವಣಾ ಕಣಗಳಲ್ಲಿ ಒಂದಾಗಿದೆ.
ಉಪಚುನಾವಣೆ ಘೋಷಣೆಯಾದಾಗಿನಿಂದಲೂ ಸ್ಪರ್ಧಿಸುವುದಾಗಿ ಹೇಳುತ್ತಿದ್ದ ಶರತ್ ಬಚ್ಚೇಗೌಡ, ಬಿಜೆಪಿ ಟಿಕೆಟ್ ಸಿಗದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. ಇದು ಬಿಜೆಪಿ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಬಿ.ಎನ್.ಬಚ್ಚೇಗೌಡ ಅವರು ಪ್ರಚಾರದಲ್ಲಿ ಕಾಣಿಸಿಕೊಂಡಿಲ್ಲ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಆಗಿರುವ ಬಚ್ಚೇಗೌಡರು, ಈವರೆಗೆ ಆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿಯೂ ಪ್ರಚಾರ ನಡೆಸಿಲ್ಲ.
ಅಲ್ಲದೇ, ಜಿದ್ದಾಜಿದ್ದಿನ ಕಣವಾಗಿ ರೂಪುಗೊಂಡಿರುವ ಹೊಸಕೋಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಪರವಾಗಿಯೂ ಪ್ರಚಾರ ನಡೆಸಿಲ್ಲ. ಇದು ರಾಜ್ಯ ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಹೊಸಕೋಟೆ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಮನಸ್ಸಿಲ್ಲದಿದ್ದರೆ, ಉಸ್ತುವಾರಿಯಾಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಾದರೂ ಪ್ರಚಾರ ನಡೆಸಬಹುದಿತ್ತು.
ಆದರೆ ಈವರೆಗೆ ಪ್ರಚಾರಕ್ಕೆ ಬಂದಿಲ್ಲ. ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ಅಭ್ಯರ್ಥಿ ಆಡಳಿತ ಪಕ್ಷದ ಸಂಸದರು ಪ್ರಚಾರ ನಡೆಸದಿರುವುದು ಸರಿ ಎನಿಸದು. ಈ ಸಂಬಂಧ ಹಿರಿಯ ನಾಯಕರು ಬಚ್ಚೇಗೌಡ ಅವರನ್ನು ಕರೆದು ಮಾತನಾಡುವ ಸಾಧ್ಯತೆಯಿದೆ. ನಂತರವೂ ಸ್ಪಂದಿಸದಿದ್ದರೆ ಮುಂದಿನ ಕ್ರಮದ ಬಗ್ಗೆ ಕೈಗೊಳ್ಳಬಹುದು ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.