ವಿಪಕ್ಷ ನಾಯಕ ಸ್ಥಾನದ ಬೇಡಿಕೆ ಇಟ್ಟಿಲ್ಲ: ಖರ್ಗೆ
Team Udayavani, Sep 12, 2020, 11:19 PM IST
ಬೆಂಗಳೂರು: ರಾಜ್ಯಸಭಾ ವಿಪಕ್ಷ ನಾಯಕನ ಸ್ಥಾನಕ್ಕೆ ತಾನು ಬೇಡಿಕೆ ಇಟ್ಟಿಲ್ಲ. ಈ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಉಸ್ತುವಾರಿಯಿಂದ ಕೈಬಿಟ್ಟಿರುವುದಕ್ಕೆ ಬೇಸರವಿಲ್ಲ. ಎಲ್ಲವೂ ನನಗೆ ಸಿಗಬೇಕೆಂಬ ಆಸೆ ನನಗಿಲ್ಲ. ನನಗೂ ಒಂದು ಸಿದ್ಧಾಂತವಿದೆ. ನೆಹರೂ, ಅಂಬೇಡ್ಕರ್ ಅವರಂಥವರ ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವವನು ಎಂದರು.
ಪಕ್ಷದ ಸಿದ್ಧಾಂತ ಅನುಷ್ಠಾನಕ್ಕೆ ತರಲು ಯಾರೇ ಮುಂದಾದರೂ ನನ್ನ ಒಪ್ಪಿಗೆಯಿದೆ. ನನಗೆ ಸಿಗಲಿಲ್ಲ ಎಂದು ವ್ಯಥೆಪಟ್ಟವನೂ ಅಲ್ಲ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಎಲ್ಲರೂ ಇರಬೇಕು. ಈಗ ಗುಲಾಂ ನಬಿ ಅವರು ರಾಜ್ಯಸಭೆ ವಿಪಕ್ಷ ನಾಯಕರಾಗಿದ್ದಾರೆ. ಅದರ ಬಗ್ಗೆ ಹೈಕಮಾಂಡ್ ನಿಲುವು ತೆಗೆದುಕೊಳ್ಳಲಿದೆ ಎಂದು ಹೇಳಿದರು.
ಮಹಾರಾಷ್ಟ್ರದ ಜವಾಬ್ದಾರಿ ನಿಭಾಯಿಸುವೆ: ಪಾಟೀಲ್
ಬೆಂಗಳೂರು: ಪಕ್ಷದ ಹೈಕಮಾಂಡ್ ನೀಡಿರುವ ಮಹಾರಾಷ್ಟ್ರ ಉಸ್ತುವಾರಿ ಜವಾ ಬ್ದಾರಿಯನ್ನು ಎಲ್ಲ ನಾಯಕರ ಸಹಕಾರದೊಂದಿಗೆ ಸಮರ್ಥವಾಗಿ ನಿಭಾಯಿಸುವೆ ಎಂದು ಎಚ್.ಕೆ. ಪಾಟೀಲ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮಹಾರಾಷ್ಟ್ರ ದೊಡ್ಡ ರಾಜ್ಯ ಹಾಗೂ ರಾಜ ಕೀಯವಾಗಿ ದೇಶದಲ್ಲಿಯೇ ಮಹತ್ವ ಹೊಂದಿದೆ. ಅಲ್ಲಿ ಸಾಕಷ್ಟು ಸವಾಲುಗಳಿವೆ. ತನಗೆ ನೀಡಿದ ಜವಾಬ್ದಾರಿಯನ್ನು ನಿಭಾಯಿಸಿ, ಮಹಾ ರಾಷ್ಟ್ರದಲ್ಲಿ ಕಾಂಗ್ರೆಸ್‌ನ ಗತವೈಭವ ಸ್ಥಾಪಿಸಲು ಪ್ರಯತ್ನಿಸುವುದಾಗಿ ಹೇಳಿದರು. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅಲ್ಲಿ ಉಸ್ತುವಾರಿಯಾಗಿ ದ್ದರು. ಹೀಗಾಗಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಸಂಘಟಿಸುವುದಾಗಿ ಹೇಳಿದರು. ಇದೇ ಸಂದರ್ಭದಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಅವರು ಜಮೀರ್ ಬೆಂಬಲಿಸಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.