ಇನ್ನೂ ಮುಗಿದಿಲ್ಲ ವಸತಿ ನಿಲಯ ಗೊಂದಲ!
ನಿರ್ಧಾರ ತೆಗೆದುಕೊಳ್ಳದ ರಾಜ್ಯ ಸರಕಾರ, ಶಿಕ್ಷಣ ಇಲಾಖೆ; ಹೊರಡದ ಮಾರ್ಗಸೂಚಿ
Team Udayavani, Aug 14, 2020, 6:50 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಥಮ ಪಿಯುಸಿ ಪ್ರವೇಶ ಪ್ರಕ್ರಿಯೆ ಚುರುಕುಗೊಂಡಿದೆ. ಆದರೆ ಸರಕಾರಿ ಮತ್ತು ಖಾಸಗಿ ವಸತಿ ಶಾಲೆ ಹಾಗೂ ವಸತಿ ನಿಲಯಗಳ ಪ್ರವೇಶಕ್ಕೆ ಸಂಬಂಧಿಸಿ ಸರಕಾರದ ಮಾರ್ಗಸೂಚಿ ಇನ್ನೂ ಬಿಡುಗಡೆಯಾಗಿಲ್ಲ. ಇದರಿಂದ ಬಹುತೇಕ ಹೆತ್ತವರು- ಪೋಷಕರಲ್ಲಿ ಗೊಂದಲ ಉಂಟಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ದಾಖಲಾತಿ ಬಹುತೇಕ ಪೂರ್ಣಗೊಂಡಿದೆ. ಅನೇಕ ಖಾಸಗಿ ಪಿಯು ಕಾಲೇಜುಗಳು ಈಗಾಗಲೇ ಸೀಟು ಮುಂಗಡ ಭರ್ತಿ ಮಾಡಿವೆ. ಆದರೂ ವಸತಿ ಸಹಿತ ಕಾಲೇಜು ಹಾಗೂ ಹಾಸ್ಟೆಲ್‌ಗಳಿಗೆ ಇನ್ನೂ ವಿದ್ಯಾರ್ಥಿಗಳು ಸೇರಿಕೊಂಡಿಲ್ಲ. ದಾಖಲಾತಿ ಮಾಡಿದ್ದೇವೆ. ಆದರೆ ಹಾಸ್ಟೆಲ್‌ಗೆ ಸೇರಿಸಬೇಕೇ ಅಥವಾ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಬೇಕೇ ಎಂಬ ಕುರಿತು ಕಾಲೇಜು ಆರಂಭವಾದ ಬಳಿಕ ಯೋಚಿಸಬೇಕಾಗಿದೆ ಎಂದು ಪಾಲಕರು ಹೇಳುತ್ತಾರೆ.
ಕಟ್‌ಆಫ್ ಗೆ ಕೊಕ್
ಕೊರೊನಾ ಪರಿಣಾಮವಾಗಿ ಕಾಲೇಜುಗಳು ಈ ವರ್ಷ ಕಟ್ ಆಫ್ ಮಾರ್ಕ್‌ಗೆ ಕೊಕ್ ನೀಡಿದ್ದು, ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ಆಧಾರದಲ್ಲಿ ದಾಖಲಾತಿ ನಡೆಸುತ್ತಿವೆ.
ಹೊರಜಿಲ್ಲೆಯವರಿಗೆ ಸಮಸ್ಯೆ
ಮಾರ್ಗಸೂಚಿ ಪ್ರಕಟಿಸದೆ ಇರುವುದರಿಂದ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಸ್ಯೆ ಎದುರಾಗಿದೆ. ಸರಕಾರಿ ವಸತಿ ಶಾಲೆಗಳ ಜತೆಗೆ ಬಹುತೇಕ ಖಾಸಗಿ ವಸತಿ ಶಾಲಾ-ಕಾಲೇಜುಗಳಲ್ಲಿ, ಶಿಕ್ಷಣ ಟ್ರಸ್ಟ್‌ಗಳ ವಸತಿ ಶಾಲಾ- ಕಾಲೇಜುಗಳಲ್ಲಿ ಶಿಕ್ಷಣ ಪಡೆಯಲು ರಾಜ್ಯದ ಬೇರೆ ಬೇರೆ ಭಾಗಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಆದರೆ 2020-21ನೇ ಸಾಲಿಗೆ ಮಕ್ಕಳನ್ನು ಹಾಸ್ಟೆಲ್‌ಗೆ ಅಥವಾ ವಸತಿ ಶಾಲೆಗೆ ಸೇರಿಸಲು ಹೆತ್ತವರು, ಪೋಷಕರು ಮನಸ್ಸು ಮಾಡುತ್ತಿಲ್ಲ. ಹಾಸ್ಟೆಲ್‌ಗಳ ಸುರಕ್ಷಾ ಕ್ರಮದ ಬಗ್ಗೆ ಸರಕಾರ ಈಗಲೇ ಮಾರ್ಗಸೂಚಿ ಪ್ರಕಟಿಸಬೇಕು. ಇಲ್ಲ ವಾದರೆ ಕಷ್ಟ ಎಂದು ಹೆತ್ತವರು ಹೇಳುತ್ತಾರೆ.
ಅಧಿಕೃತವಾಗಿ ದಾಖಲಾತಿ ಆರಂಭಿಸಲು ಬುಧವಾರ ಪದವಿಪೂರ್ವ ಶಿಕ್ಷಣ ಸಂಸ್ಥೆಗಳಿಗೆ ಅನುಮತಿ ನೀಡಿದ್ದೇವೆ. ಇದರ ಅರ್ಥ ಕಾಲೇಜುಗಳಿಗೆ ವಿದ್ಯಾರ್ಥಿಗಳು ಹಾಜರಾಗಬೇಕೆಂದಲ್ಲ. ದಾಖಲಾತಿಯ ಆಧಾರದ ಮೇಲೆ ಲಭ್ಯ ಸಂಪನ್ಮೂಲಗಳನ್ನು ಬಳಸಿ ಪದವಿಪೂರ್ವ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಲಿವೆ.
– ಎಸ್. ಸುರೇಶ್ ಕುಮಾರ್, ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.