ತೃತೀಯ ಲಿಂಗಿಗಳಿಗೆ ಕಾಲೇಜು ಪ್ರವೇಶಕ್ಕೆ ಸೂಚನೆ
Team Udayavani, Oct 15, 2022, 10:46 PM IST
ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾಕರು ಕಾಲೇಜುಗಳಲ್ಲಿ ಪ್ರವೇಶ ಬಯಸುವ ವೇಳೆ ಅವರಿಗೆ ವೈದ್ಯಕೀಯ ಪ್ರಮಾಣ ಪತ್ರ ಕೇಳದೆ, ಅವರು ನೀಡುವ ಸ್ವಯಂ ದೃಢೀಕೃತ ಪ್ರಮಾಣ ಪತ್ರದ ಆಧಾರದಲ್ಲಿ ಪ್ರವೇಶ ಕಲ್ಪಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.
ರಾಜ್ಯದ ಎಲ್ಲ ಸರಕಾರಿ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾಕರಿಗೆ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಸೌಲಭ್ಯಗಳನ್ನು ಕಲ್ಪಿಸಿ ಅವುಗಳನ್ನು ಅನುಷ್ಠಾನ ಮಾಡುವಂತೆ ತಿಳಿಸಿದೆ. ಆ ಪ್ರಕಾರವಾಗಿ ಕಾಲೇಜು ಹಾಸ್ಟೆಲ್ಗಳ ಅರ್ಜಿ ನಮೂನೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾಕರಿಗೆ ಅವಕಾಶ ಕಲ್ಪಿಸಬೇಕು. ಅಲ್ಲದೆ, ವಸತಿ ನಿಲಯಗಳಲ್ಲಿ ಅವರ ಸ್ವಯಂ ನಿರ್ಧರಿತ ಲಿಂಗ ಗುರುತಿನ ಪ್ರಕಾರ ವಸತಿ ಕಲ್ಪಿಸಬೇಕು.
ತೃತೀಯ ಲಿಂಗಿ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಮಾರ್ಗಸೂಚಿಗಳನ್ನು ರೂಪಿಸಲು ಅಥವಾ ವಿದ್ಯಾರ್ಥಿಗಳು ತಮ್ಮ ಲಿಂಗ ಗುರುತನ್ನು ವಿಶ್ವವಿದ್ಯಾನಿಲಯ ದಾಖಲೆಗಳಲ್ಲಿ ಬದಲಾಯಿಸಲು ಇಚ್ಛಿಸಿದಾಗ ಯಾವುದೇ ಶಸ್ತ್ರ ಚಿಕಿತ್ಸೆ, ಪುರಾವೆ, ವೈದ್ಯಕೀಯ ಪ್ರಮಾಣ ಪತ್ರ ಇವುಗಳನ್ನು ಕಡ್ಡಾಯಗೊಳಿಸದೆ ಅವರ ಸ್ವಯಂ ಘೋಷಿತ ಅಫಿದವಿತ್ ಅನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಬೇಕೆಂದು ಕಾಲೇಜು ಶಿಕ್ಷಣ ಇಲಾಖೆಯು ಪ್ರಾಂಶುಪಾಲರಿಗೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.