ಸಾಂಖ್ಯಿಕ ಅಧಿಕಾರಿಗಳಾಗಿರುವ ಶಿಕ್ಷಕರ ವರ್ಗಾವಣೆಗೆ ಸೂಚನೆ
Team Udayavani, Sep 23, 2022, 6:52 AM IST
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಾಗಿ ನೇಮಕವಾಗಿ ಹತ್ತಾರು ವರ್ಷಗಳಿಂದ ಇಲಾಖೆ ಕಚೇರಿಗಳಲ್ಲಿ ಬೋಧಕೇತರ ಸಿಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಸಾಂಖ್ಯಿಕ ಅಧಿಕಾರಿಗಳಿಗೆ ಶಿಕ್ಷಣ ಇಲಾಖೆ ಬಿಸಿ ಮುಟ್ಟಿಸಿದೆ. ಅವರನ್ನು ಕೂಡಲೇ “ಸಿ’ ವಲಯಕ್ಕೆ ವರ್ಗಾಯಿಸಲು ಸೂಚಿಸಿದೆ.
ಡಯಟ್, ಸಿಟಿಇ ಮತ್ತು ಉಪ ನಿರ್ದೇಶಕರ ಕಚೇರಿಗಳಲ್ಲಿ ಸಹಾಯಕ ಸಾಂಖ್ಯಿಕ ಅಧಿಕಾರಿಗಳಾಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಕೂಡಲೇ ವರ್ಗಾಯಿ ಸುವಂತೆ ಇಲಾಖೆ ಆಯುಕ್ತರು ಸಂಬಂಧಪಟ್ಟ ವಿಭಾಗೀಯ ಜಂಟಿ ನಿರ್ದೇಶಕರು ಹಾಗೂ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆಯು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಈ ಹುದ್ದೆಗಳಲ್ಲಿ ತಜ್ಞ ಸಿಬಂದಿ ಕಾರ್ಯನಿರ್ವಹಿಸಬೇಕಾಗಿದ್ದು, ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವುದು ಸರಿಯಲ್ಲ. ಇಲ್ಲಿರುವ ಶಿಕ್ಷಕರು ಈಗಾಗಲೇ “ಸಿ’ ವಲಯದಲ್ಲಿ 10 ಸೇವೆ ಸಲ್ಲಿಸಿದ್ದಲ್ಲಿ ಎ, ಬಿ, ಸಿ ವಲಯದ ಯಾವುದಾದರೂ ಶಾಲೆಗೆ ಅವರ ಇಚ್ಛೆಗೆ ಅನುಸಾರವಾಗಿ ನಿಯುಕ್ತಿಗೊಳಿಸಬೇಕು. ಈ ಸಂಬಂಧ ಕೈಗೊಂಡ ಕ್ರಮದ ಬಗ್ಗೆ 3 ದಿನಗಳೊಳಗೆ ವರದಿ ಸಲ್ಲಿಸಬೇಕು ಎಂದು ಎಲ್ಲ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ. ಒಂದು ವೇಳೆ ವರದಿ ನೀಡದಿದ್ದರೆ ಸಂಬಂಧಪಟ್ಟ ಉಪ ನಿರ್ದೇಶಕರ ವಿರುದ್ಧವೇ ಶಿಸ್ತುಕ್ರಮ ಜರಗಿಸಲು ಶಿಫಾರಸು ಮಾಡಲಾಗುತ್ತದೆ ಎಂಬ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.