ಹದಿನೈದು ಉಪ ನಿರ್ದೇಶಕರಿಗೆ ನೋಟಿಸ್‌


Team Udayavani, Nov 3, 2017, 11:20 AM IST

notice.jpg

ಬೆಂಗಳೂರು: ಕಾಲಮಿತಿಯಲ್ಲಿ ನಿಗದಿತ ಅನುದಾನ ಬಳಸದ 15 ಜಿಲ್ಲೆಗಳ ಉಪ ನಿರ್ದೇಶಕರಿಗೆ ನೋಟಿಸ್‌ ನೀಡಿ ಬಿಸಿ ಮುಟ್ಟಿಸಿರುವ ತೋಟಗಾರಿಕೆ ಇಲಾಖೆಯು, ಕಳಪೆ ಕಾರ್ಯ ಸಾಧನೆ ತೋರಿದ ಉಪನಿರ್ದೇಶಕರಿಗೆ ದಂಡ ಸಹಿತ ಶಿಸ್ತು ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಮುಂದಾಗಿದೆ.

ತೋಟಗಾರಿಕೆ ಇಲಾಖೆಯಲ್ಲಿ ಎಸ್‌ಸಿಪಿ – ಟಿಎಸ್‌ಪಿ ಯೋಜನೆ, ಕೇಂದ್ರ ವಲಯ, ರಾಜ್ಯ ವಲಯ ಹಾಗೂ ಜಿಲ್ಲಾ ವಲಯದ ಯೋಜನೆಗಳು 15 ಜಿಲ್ಲೆಗಳಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಆಯುಕ್ತರು ಶಿಸ್ತು ಮೂಡಿಸಲು ಕಠಿಣ ಕ್ರಮಕ್ಕೆ ಚಿಂತಿಸಿದ್ದಾರೆ.

ರಾಜ್ಯ ವಲಯ ವ್ಯಾಪ್ತಿಯಲ್ಲಿ ಸೂಕ್ಷ್ಮ ಹನಿ ನೀರಾವರಿ, ಸಮಗ್ರ ತೋಟಗಾರಿಕೆ ಅಭಿವೃದಿಟಛಿ ಯೋಜನೆ, ಹೂ ಕೃಷಿಗೆ ಉತ್ತೇಜನ, ಸಾಂಬಾರ ಪದಾರ್ಥಗಳ ಅಭಿವೃದಿಟಛಿ ಮಂಡಳಿ, ಹಸಿರುಮನೆ, ಶೀಥಲ ಗೃಹ, ಹಣ್ಣು ಮಾಗಿಸುವ ಘಟಕ ಇತರೆ ಯೋಜನೆ ಜಾರಿಗೊಳಿಸಲಾಗಿದೆ. ಹಾಗೆಯೇ ಜಿಲ್ಲಾ ವಲಯ ವ್ಯಾಪ್ತಿಯಲ್ಲಿ ತೋಟಗಾರಿಕೆ ಕ್ಷೇತ್ರಗಳ ನಿರ್ವಹಣೆ, ಶೈತ್ಯಾಗಾರಗಳಿಗೆ ಧನ ಸಹಾಯ, ರೈತರಿಗೆ ತರಬೇತಿ ಸೇರಿ ಇತರೆ ಉತ್ತೇಜನ ಕಾರ್ಯಕ್ರಮಗಳನ್ನು ಕಲ್ಪಿಸಿದೆ. ಜತೆಗೆ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಜಾತಿ, ಪಂಗಡದವರು ತೋಟಗಾರಿಕೆ ವಲಯದಲ್ಲಿ ತೊಡಗಿಸಿಕೊಳ್ಳಲು ಕೆಲ ಯೋಜನೆಗಳನ್ನು ರೂಪಿಸಿ ಅದಕ್ಕೆ ಎಸ್‌ ಸಿಪಿಟಿಎಸ್‌ಪಿ ಅನುದಾನ ಒದಗಿಸಲಾಗಿದೆ.

ತೋಟಗಾರಿಕೆ ಬೆಳೆಗೆ ಉತ್ತೇಜನ ನೀಡುವ ಕಾರ್ಯಕ್ರಮಗಳಿಗೆ ಪೂರಕ ಅನುದಾನವೂ ಇದೆ. ಆರ್ಥಿಕ ವರ್ಷಕ್ಕೆ ಮಂಜೂರಾದ ಒಟ್ಟು ಅನುದಾನವನ್ನು ವಿಂಗಡಿಸಿ ನಾಲ್ಕು ತ್ತೈಮಾಸಿಕವಾರು ಅನುದಾನ ಬಳಕೆ ಮಾಡುವಂತೆ ಗುರಿ
ನಿಗದಿಪಡಿಸಲಾಗಿದೆ. ಅಂದರೆ ಪ್ರಸಕ್ತ ಆರ್ಥಿಕ ವರ್ಷದ ನಾಲ್ಕು ತ್ತೈಮಾಸಿಕದಲ್ಲಿ ತಲಾ ಶೇ.25 ರಷ್ಟು ಅನುದಾನವನ್ನು ಕಡ್ಡಾಯವಾಗಿ ಬಳಸಿದರೆ ಪೂರ್ಣ ಪ್ರಮಾಣದಲ್ಲಿ ವೆಚ್ಚವಾಗಲಿದ್ದು, ಬೆಳೆಗಾರರಿಗೆ ಅನುಕೂಲವಾಗಲಿದೆ ಎಂಬುದು
ಇಲಾಖೆ ಆಶಯ.

ಅದರಂತೆ ಮೊದಲ ತ್ತೈಮಾಸಿಕ ಅವಧಿಯಲ್ಲಿನ ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ಶೇ.25 ರಷ್ಟು ಅನುದಾನ ಬಳಸುವ ಗುರಿ ನೀಡಲಾಗಿತ್ತು. ಆದರೆ ಹಲವು ಜಿಲ್ಲೆಗಳಲ್ಲಿ ಈ ಗುರಿ ಸಾಧನೆಯಾಗಿಲ್ಲ. ಅದರಲ್ಲೂ ಎಸ್‌ಸಿಪಿಟಿಎಸ್‌ಪಿ ಯೋಜನೆಯಡಿ ಅನುದಾನ ಬಳಕೆ ಕಡಿಮೆಯಾಗಿರುವುದು ಕಂಡು ಬಂದಿದೆ.

ಕಳಪೆ ಸಾಧನೆ: ರಾಜ್ಯದ 14 ಜಿಲ್ಲೆಗಳು ಮೊದಲ ತ್ತೈಮಾಸಿಕದಲ್ಲಿ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯ ಅನುದಾನ ಬಳಕೆಯಲ್ಲಿ ಕಳಪೆ ಸಾಧನೆ ತೋರಿವೆ. ಧಾರವಾಡದಲ್ಲಿ ಶೇ.0.47ರಷ್ಟು ಅನುದಾನ ಬಳಕೆಯಾಗಿದ್ದು, ಅತಿ ಕಡಿಮೆ ಅನುದಾನ ಬಳಸಿದ ಜಿಲ್ಲೆ ಎನಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.1.66ರಷ್ಟು ಅನುದಾನವಷ್ಟೇ ಬಳಕೆಯಾಗಿದೆ. ಶೇ.22.02ರಷ್ಟು ಅನುದಾನ ಬಳಸಿದ ಕಲಬುರಗಿ ಜಿಲ್ಲೆಯು ನಿಗದಿತ ಅನುದಾನ ಬಳಸುವಲ್ಲಿ ವಿಫ‌ಲವಾಗಿದೆ.

15 ಉಪ ನಿರ್ದೇಶಕರಿಗೆ ನೋಟಿಸ್‌: ಮೊದಲ ತ್ತೈಮಾಸಿಕದಲ್ಲಿ ಎಸ್‌ಸಿಪಿಟಿಎಸ್‌ಪಿ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಸದ 14 ಜಿಲ್ಲೆಗಳ ಉಪನಿರ್ದೇಶಕರಿಗೆ ತೋಟಗಾರಿಕೆ ಇಲಾಖೆ ಆಯುಕ್ತರು ನೋಟಿಸ್‌ ನೀಡಿದ್ದಾರೆ. ಹಾಗೆಯೇ ರಾಜ್ಯ, ಕೇಂದ್ರ ಹಾಗೂ ಜಿಲ್ಲಾವಲಯ ಯೋಜನೆಗಳ ಅನುಷ್ಠಾನದಲ್ಲೂ ನಿರೀಕ್ಷಿತ ಸಾಧನೆ ತೋರದ ಮೂರು ಜಿಲ್ಲೆಗಳ ಉಪ ನಿರ್ದೇಶಕರಿಗೆ ನೋಟಿಸ್‌ ನೀಡಿದ್ದಾರೆ. ಈ ಪೈಕಿ ಕೆಲವರು ಸಮ ಜಾಯಿಷಿ ನೀಡಿದ್ದಾರೆ.
ಇವುಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಪ್ರತಿ ತ್ತೈಮಾಸಿಕದಲ್ಲಿ ಶೇ.25ರಷ್ಟು ಅನುದಾನ ಬಳಸುವಂತೆ ಗುರಿ ನೀಡಿದ್ದರೂ ಸುಮಾರು 15 ಜಿಲ್ಲೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ. ಈ ಬಾರಿ ಮುಂಗಾರು ಆರಂಭದಲ್ಲಿ ಎರಡೂವರೆ ತಿಂಗಳು ಮಳೆ ಬಾರದಿದ್ದುದ್ದು, ಬೆಳೆ ವಿಮೆ,
ಬೆಳೆ ಕಟಾವು ಪ್ರಕ್ರಿಯೆ, ಇದೇ ಅವಧಿಯಲ್ಲಿ ಬಡ್ತಿ, ವರ್ಗಾವಣೆ ಪ್ರಕ್ರಿಯೆ ನಡೆದ ಹಿನ್ನೆಲೆಯಲ್ಲಿ ಹಿನ್ನಡೆಯಾಗಿರಬಹುದು.
ಆದರೆ ಉಳಿದ ಜಿಲ್ಲೆಗಳಲ್ಲಿ ಉತ್ತಮ ಪ್ರಗತಿಯಾಗಿರುವ ಹಿನ್ನೆಲೆಯಲ್ಲಿ 15 ಜಿಲ್ಲೆಗಳ ಉಪ ನಿರ್ದೇಶಕರಿಗೆ ನೋಟಿಸ್‌
ನೀಡಲಾಗಿದೆ. ಜತೆಗೆ ಅತಿ ಕಡಿಮೆ ಪ್ರಗತಿ ಸಾಧಿಸಿದವರಿಗೆ ಅಲ್ಪ ಪ್ರಮಾಣದ ದಂಡವಿಧಿಸಿ, ಶಿಸ್ತು ಕ್ರಮ ಕೈಗೊಳ್ಳುವಂತೆಯೂ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುತ್ತಿದೆ.
– ಪ್ರಭಾಷ್‌ಚಂದ್ರ ರೇ ತೋಟಗಾರಿಕೆ ಇಲಾಖೆ ಆಯುಕ್ತ

– ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

Bhopal: ಮಧ್ಯಪ್ರದೇಶದಲ್ಲೀಗ ವಿಷ ತ್ಯಾಜ್ಯ ಅಪಾಯ

cyber crime

Cyber ​​fraud ಬ್ಯಾಂಕ್‌ ಹೊಣೆ: ಸುಪ್ರೀಂಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

vaman

Mangaluru: ವಾಮಂಜೂರು ಗುಂಡು ಹಾರಾಟ ಪ್ರಕರಣ: ಇಬ್ಬರು ಕುಖ್ಯಾತರ ಬಂಧನ

1-uss

American wildfires:1 ಲಕ್ಷ ಮಂದಿಯ ಸ್ಥಳಾಂತರ! ; ಹಾಲಿವುಡ್‌ನ‌ ಹಲವು ಕಾರ್ಯಕ್ರಮ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.