ಲಾಕ್ ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್
Team Udayavani, Jun 14, 2021, 4:50 PM IST
ಬೆಂಗಳೂರು: ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್ ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಸಂಚಾರಕ್ಕೆ ತೊಂದರೆಯಾಗುವುದರಿಂದ ಶಿಕ್ಷಕರು ಲಾಕ್ ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಮೌಲ್ಯಾಂಕನ ಅವಧಿ ವಿಸ್ತರಣೆ: ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿಯುಸಿ ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್-ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಸಹ ಸಚಿವರು ಹೇಳಿದ್ದಾರೆ. ಈ ಕುರಿತಂತೆ ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಅವರು ಕ್ರಮ ಜರುಗಿಸಲಿದ್ದಾರೆ ಎದರು.
ಚೈಲ್ಡ್ ಪ್ರೊಫೈಲ್ ನಿಯಮಿತ ದಾಖಲೆ: ಈ ಬಾರಿ ನಿಗದಿತ ಅವಧಿಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ಸಮರ್ಥವಾಗಿ ಜಾರಿಯಲ್ಲಿಡುವ ಅವಶ್ಯಕತೆ ಇದೆ. ಪ್ರತಿ ಸೂಚಿತ ಅವಧಿಗೆ ವಿದ್ಯಾರ್ಥಿಗಳ ಚೈಲ್ಡ್ ಪ್ರೊಫೈಲ್ ಗಳನ್ನು ನಿಯಮಿತವಾಗಿ ದಾಖಲಿಸುವ, ಕಲಿಕಾ ಸಾಮರ್ಥ್ಯಗಳನ್ನು ಅಳೆಯುವ ಮಾನದಂಡಗಳಾಗಿ ರೂಪಿಸುವ ಸದೃಢ ವ್ಯವಸ್ಥೆಯನ್ನು ಜಾರಿಯಲ್ಲಿಡುವ ವ್ಯವಸ್ಥೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅತ್ಯವಶ್ಯಕವಾಗಿದ್ದು, ಇಂಥಹ ಸಂದರ್ಭದಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಮಂಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಪಾಕಿಸ್ತಾನದ ಹೆಸರಿಲ್ಲದೇ ಬಿಜೆಪಿ ರಾಜಕಾರಣವೇ ಇಲ್ಲ: ಬಿ.ಕೆ.ಹರಿಪ್ರಸಾದ್ ಆರೋಪ
ಕೊಠಡಿ ಮೇಲ್ವಿಚಾರಕ ಶಿಕ್ಷಕರಿಗೆ ಲಸಿಕೆ: ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರುಗಳಿಗೆ ಕೋವಿಡ್- 19ರ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮುನ್ನ ಪೂರ್ಣಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ವಹಿಸಬೇಕೆಂದೂ ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.
ಶೀಘ್ರದಲ್ಲೇ ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ: ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರಜ್ಞಾನ ಆಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆ ಎಂದರು.
ಪ್ಯಾಕೇಜ್ ಪರಿಹಾರ ನೇರ ಶಿಕ್ಷಕರ ಖಾತೆಗೆ: ಖಾಸಗಿ ಖಾಸಗಿ ಶಾಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಕ್ಲಪ್ತ ಸಮಯದಲ್ಲಿ ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಬೇಕೆಂದೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ, ಶಿಕ್ಷಕೇತರರ ಹಾಗೂ ಅತಿಥಿ ಶಿಕ್ಷಕರ ಬ್ಯಾಂಕ್‌ಖಾತೆಗಳ ವಿವರಗಳನ್ನು ಶೀಘ್ರ ಸಂಗ್ರಹಿಸಿ ಅನುದಾನವನ್ನು ನೇರ ಶಿಕ್ಷಕರ ಖಾತೆಗಳಿಗೆ ವರ್ಗಾಯಿಸಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಣೆಯಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.