ಡಿ.31ರೊಳಗೆ ಅಕ್ರಮ-ಸಕ್ರಮ ಅರ್ಜಿಗಳ ವಿಲೇವಾರಿಗೆ ಸೂಚನೆ
Team Udayavani, Sep 20, 2017, 9:51 AM IST
ಬೆಂಗಳೂರು: ರಾಜ್ಯ ಸರ್ಕಾರದ ಅಕ್ರಮ-ಸಕ್ರಮ ಯೋಜನೆಗೆ ಸಲ್ಲಿಸಿರುವ ಅರ್ಜಿಗಳನ್ನು ಡಿಸೆಂಬರ್ 31ರೊಳಗೆ ವಿಲೇವಾರಿ ಮಾಡುವಂತೆ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಕರ್ನಾಟಕ ಭೂ ಕಂದಾಯ 1964ರ ಕಲಂ 94ಸಿ ಅಡಿಯಲ್ಲಿ ಗ್ರಾಮೀಣ ಪ್ರದೇಶ, 94ಸಿಸಿ ಅಡಿಯಲ್ಲಿ ನಗರ ಪ್ರದೇಶಗಳಲ್ಲಿ 2012 ಜನವರಿ 1ಕ್ಕೂ ಮುಂಚೆ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿ ರುವ ವಾಸದ ಮನೆಗಳನ್ನು 2017ರ ಡಿಸೆಂಬರ್ 31ರೊಳಗೆ ಸಕ್ರಮಗೊಳಿಸುವಂತೆ ಸರ್ಕಾರ ಸುತ್ತೂಲೆ ಹೊರಡಿಸಿದೆ.
2017ರ ಜುಲೈ 31ರ ವರೆಗೆ ಗ್ರಾಮೀಣ ಪ್ರದೇಶ ದಿಂದ (94ಸಿ) ಒಟ್ಟು 5,40,241 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಅದರಲ್ಲಿ 2,61,572 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು, 2,78,670 ಅರ್ಜಿಗಳು ಇನ್ನೂ ಬಾಕಿ ಇವೆ. ಅದರಂತೆ 94ಸಿಸಿ ಅಡಿಯಲ್ಲಿ ನಗರ ಪ್ರದೇಶದಲ್ಲಿ 1,67,567 ಅರ್ಜಿಗಳು ಬಂದಿದ್ದು, 49,178 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ 1,18,389 ಅರ್ಜಿಗಳು ಬಾಕಿ ಉಳಿದಿವೆ. ಹೀಗಾಗಿ, ಸಂಬಂಧ ಪಟ್ಟ ತಹಶೀಲ್ದಾರರು ಅಟಲ್ ಜಿ ಜನಸ್ನೇಹಿ ಕೇಂದ್ರದಿಂದ ಸ್ವೀಕರಿಸಲ್ಪಟ್ಟ ಅರ್ಜಿಗಳನ್ನು ಇತ್ಯರ್ಥ ಪಡಿಸಲು ಗ್ರಾಮ ಲೆಕ್ಕಿಗ, ಪಿಡಿಒ, ಕಂದಾಯ ನಿರೀಕ್ಷಕರು, ನಗರ ಸ್ಥಳೀಯ ಅಧಿಕಾರಿಗಳ ಜೊತೆಯಲ್ಲಿ ಪ್ರತಿ ಗ್ರಾಮ ಗಳಿಗೆ ಭೇಟಿ ನೀಡುವ ದಿನಾಂಕವನ್ನು ಮೊದಲೇ ನಿಗದಿ ಪಡಿಸಿ, ಗ್ರಾಮಗಳಿಗೆ ಭೇಟಿ ನೀಡಿ, ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ಅರ್ಜಿಗಳ ನೈಜತೆಯನ್ನು ಜಾಗರೂಕತೆಯಿಂದ ಪರಿಶೀಲಿಸಿ ಸಕ್ರಮಗೊಳಿಸಲು ಸೂಚಿಸಲಾಗಿದೆ. ಅಲ್ಲದೆ, ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿ ಗಳನ್ನು ಡಿ.31ರೊಳಗೆ ವಿಲೇವಾರಿ ಮಾಡಿ, ಸಂಬಂಧಿ ಸಿದ ಪ್ರಾದೇಶಿಕ ಆಯುಕ್ತರ ಮೂಲಕ ಸರ್ಕಾರಕ್ಕೆ ವರದಿ ಸಲ್ಲಿಸುವಂತೆಯೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.