ಕಾರಾಗೃಹದಲ್ಲೂ ಮಾಸ್ಕ್ ಧರಿಸಲು ಸೂಚನೆ
ಶಂಕಿತ ಪರೋಲ್ ಕೈದಿಗಳಿಗೆ ಕ್ವಾರಂಟೈನ್, ವಿದೇಶಿ ಕೈದಿಗಳತ್ತ ತೀವ್ರ ನಿಗಾ
Team Udayavani, Apr 22, 2020, 11:57 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್ ಭೀತಿ ರಾಜ್ಯದ ಕಾರಾಗೃಹಗಳಿಗೂ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಕಾರಾಗೃಹಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಈ ಕುರಿತು ಕಾರಾಗೃಹ ಮುಖ್ಯಸ್ಥರು ರಾಜ್ಯದ ಎಲ್ಲ ಕಾರಾಗೃಹಗಳಿಗೆ ಪತ್ರ ಬರೆದು ಸೂಚಿಸಿದ್ದಾರೆ. ಕಾರಾಗೃಹಕ್ಕೆ ಹೊಸದಾಗಿ ಮತ್ತು ಪರೋಲ್‌ನಿಂದ ಬಂದಿರುವ ಕೈದಿಗಳಿಗೆ
ಜ್ವರ, ಶೀತ ಇನ್ನಿತರೆ ಆರೋಗ್ಯ ಸಮಸ್ಯೆಯಿದ್ದರೆ ಸ್ಕ್ರೀನಿಂಗ್ ಮಾಡಬೇಕು. ಜತೆಗೆ ಪರೋಲ್ ಕೈದಿಗಳನ್ನು 10 ದಿನಗಳ ಕಾಲ ಬ್ಯಾರಕ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇಡಬೇಕು. ವಿಶೇಷವಾಗಿ ವಿದೇಶಿ ಬಂಧಿಗಳ ಮೇಲೆ ಹೆಚ್ಚು ನಿಗಾವಹಿಸಬೇಕು. ಕಾರಾಗೃಹಗಳಲ್ಲಿ ಪ್ರತ್ಯೇಕವಾದ ಐಸೋಲೇಷನ್ ವಾರ್ಡ್ ಸಿದ್ಧಪಡಿಸಿ, ಜ್ವರ, ಕೆಮ್ಮು ಹಾಗೂ ನೆಗಡಿ ಇತರೆ ಸೋಂಕಿನ ಲಕ್ಷಣಗಳ ಬಂಧಿಗಳನ್ನು ಪ್ರತ್ಯೇಕವಾಗಿ ಇರಿಸಿ, ನಿರಂತರ ವೈದ್ಯಕೀಯ ಮೇಲ್ವಿಚಾರಣೆ ನಡೆಯಬೇಕು. ಜತೆಗೆ, ಸಂದರ್ಶಕರು, ವಕೀಲರು, ಸಂಘ-ಸಂಸ್ಥೆಗಳು ಮತ್ತು ಕೈದಿಗಳ ಸಂಬಂಧಿಕರ ಭೇಟಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕು. ಆದರೆ, ಕೈದಿಗಳು ಜೈಲಿನಲ್ಲಿರುವ ಫೋನ್ ಮೂಲಕ ಮಾತನಾಡಲು ಅವಕಾಶ ಕೊಡಬೇಕು. ವಿಡಿಯೋ ಕಾನ್ಫರೆನ್ಸ್ ಮೂಲಕ ಬಂಧಿಗಳ ಹಾಜರಾತಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕು ಎಂದು ಸೂಚಿಸಿದ್ದಾರೆ.
ಜೈಲಿನಲ್ಲೇ ಮಾಸ್ಕ್ ತಯಾರಿ: ಜೈಲಿನಲ್ಲೇ ಕೈದಿಗಳೇ ಸರ್ಕಾರದ ನಾನಾ ಇಲಾಖೆಗಳಿಗೆ ಮಾಸ್ಕ್ಗಳನ್ನು ಸಿದ್ಧಪಡಿಸಿ ಕಳುಹಿಸಿದ್ದಾರೆ. ಅದೇ ಮಾಸ್ಕ್ ಅನ್ನು ಕಾರಾಗೃಹದ
ಅಧಿಕಾರಿಗಳು, ಸಿಬ್ಬಂದಿ, ಎಲ್ಲ ಕೈದಿಗಳು ಧರಿಸಬೇಕು. ಜತೆಗೆ ಕೇಂದ್ರ ಕಾರಾಗೃಹಗಳಲ್ಲಿ ಸಿದ್ಧವಾಗುವ ಮಾಸ್ಕ್ಗಳನ್ನು ಜಿಲ್ಲಾ ಮತ್ತು ತಾಲೂಕು ಕಾರಾಗೃಹಗಳಿಗೆ ಕಳುಹಿಸಬೇಕು. ಪದೇಪದೆ ಹ್ಯಾಂಡ್ ವಾಶ್ ಅಥವಾ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಬಳಸಿ ಕೈತೊಳೆದುಕೊಳ್ಳಬೇಕು ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು. ಜತೆಗೆ ಜೈಲುಗಳಲ್ಲಿರುವ ಕ್ಯಾನ್ಸರ್ ಇನ್ನಿತರೆ ಅನಾರೋಗ್ಯಕ್ಕೆ ತುತ್ತಾದ ಕೈದಿಗಳಿಗೆ ಪ್ರತ್ಯೇಕವಾಗಿರುವಂತೆ ಸೂಚಿಸಲಾಗಿದ್ದು, ನಿತ್ಯ ಆರೋಗ್ಯ ತಪಾಸಣೆ ನಡೆಯುತ್ತಿದೆ ಎಂದು ಅಧಿಕಾರಿ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.