ಪರಿಷತ್ ಚುನಾವಣೆಗೆ ಇಂದು ಅಧಿಸೂಚನೆ: ಅಭ್ಯರ್ಥಿಗಳ ಆಯ್ಕೆ ಕಸರತ್ತು
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪರಾಮರ್ಶೆ
Team Udayavani, Nov 16, 2021, 6:00 AM IST
ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾ ವಣೆಗೆ ಮಂಗಳವಾರ ಅಧಿಸೂಚನೆ ಹೊರ ಬೀಳಲಿದೆ. ಅದಕ್ಕೆ ಪೂರಕವಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಬಿರುಸುಗೊಂಡಿದೆ.
ಆಡಳಿತಾರೂಢ ಬಿಜೆಪಿ ಯಲ್ಲಿ ಹಾಲಿ ಆರು ಸದಸ್ಯರ ಪೈಕಿ ಐವರಿಗೆ ಟಿಕೆಟ್ ಖಚಿತವಾಗಿದೆ. ಉಳಿದೆಡೆ ಪ್ರತೀ ಕ್ಷೇತ್ರಕ್ಕೂ ಮೂವರು ಅಭ್ಯರ್ಥಿ ಗಳನ್ನು ಕೇಂದ್ರ ಸಮಿತಿಗೆ ಶಿಫಾರಸು ಮಾಡಲು ರಾಜ್ಯ ಘಟಕ ತೀರ್ಮಾ ನಿಸಿದೆ. ಶಾಸಕರು, ಮುಖಂಡರ ಅಭಿಪ್ರಾಯ ಸಂಗ್ರಹಿಸಿ ವರದಿ ಸಲ್ಲಿಸಲು ಕೋರ್ ಕಮಿಟಿ ಯಲ್ಲೂ ತೀರ್ಮಾನವಾಗಿತ್ತು. ಅದ ರಂತೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆದು ಪಟ್ಟಿ ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.
ಮೈಸೂರು – ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಗೆದ್ದಿದ್ದ ಸಂದೇಶ್ ನಾಗರಾಜ್ ಮತ್ತು ಕೋಲಾರ- ಚಿಕ್ಕಬಳ್ಳಾಪುರ ಕ್ಷೇತ್ರದ ಸಿ.ಆರ್. ಮನೋಹರ್ ಬಿಜೆಪಿಗೆ ಬರಲು ಉತ್ಸುಕರಾಗಿದ್ದಾರೆ. ಅವರ ಸೇರ್ಪಡೆಗೆ ಸ್ಥಳೀಯವಾಗಿ ವಿರೋಧ ಇದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸರಣಿ ಸಭೆ
ಕಾಂಗ್ರೆಸ್‌ಅಭ್ಯರ್ಥಿಗಳ ಆಯ್ಕೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೋಮವಾರವೂ ಸರಣಿ ಸಭೆ ನಡೆಸಿದರು. ಶಾಸಕರು, ಜಿಲ್ಲಾಧ್ಯಕ್ಷರು ಮತ್ತು ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಒಮ್ಮತದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.
25 ಕ್ಷೇತ್ರಗಳಲ್ಲಿಯೂ ಟಿಕೆಟ್‌ಗಾಗಿ ಪೈಪೋಟಿ ಬಲವಾಗಿದ್ದು, ದ್ವಿಸದಸ್ಯ ಕ್ಷೇತ್ರಗಳಲ್ಲಿ ಒಬ್ಬ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಈ ಮಧ್ಯೆ ಮಾಜಿ ಸಚಿವ, ಬಿಜೆಪಿ ಮುಖಂಡ ಎ. ಮಂಜು ರವಿವಾರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವ ರನ್ನು ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ. ಸೋಮವಾರ ಅವರ ಪುತ್ರ ಮಂತರ್‌ಗೌಡ ಕೂಡ ಸಿದ್ದ ರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್‌ನಿಂದ ಹಾಸನ ಕ್ಷೇತ್ರಕ್ಕೆ ಟಿಕೆಟ್ ಬೇಡಿಕೆ ಮಂಡಿಸಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಆದಿವಾಸಿಗಳ ನಿರ್ಲಕ್ಷಿಸಿದ್ದ ಕಾಂಗ್ರೆಸ್: ಪ್ರಧಾನಿ ಮೋದಿ ಆರೋಪ
ಭವಾನಿ ರೇವಣ್ಣ ಸ್ಪರ್ಧೆ ಖಚಿತ
ಜೆಡಿಎಸ್ ಕೂಡ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಸುತ್ತಿದೆ. ಹಾಸನ ಕ್ಷೇತ್ರಕ್ಕೆ ಭವಾನಿ ರೇವಣ್ಣ ಸ್ಪರ್ಧೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಕೋಲಾರ- ಚಿಕ್ಕಬಳ್ಳಾಪುರ, ತುಮಕೂರು, ಬೆಂ. ಗ್ರಾಮಾಂ ತರ, ಮೈಸೂರು-ಚಾಮರಾಜನಗರ ಕ್ಷೇತ್ರಗಳಿಗೆ ಆಕಾಂಕ್ಷಿಗಳು ಹೆಚ್ಚಾಗಿದ್ದು ಗೆಲ್ಲುವ ಮಾನದಂಡ ಇರಿಸಿಕೊಂಡು ಟಿಕೆಟ್ ನೀಡಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಇನ್ನು ಅಂತಿಮಗೊಳಿಸಿಲ್ಲ. ಪಕ್ಷ ಗೆಲ್ಲುವ ಆರರಿಂದ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿ ಹಾಕುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.
ಈಗಾಗಲೇ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮ ಕೂರು ಕ್ಷೇತ್ರಗಳ ಬಗಗೆ ನಾನೇ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಹೆಸರು ಅಂತಿಮಗೊಳಿಸಲಾಗುವುದು ಎಂದು ತಿಳಿಸಿದರು.
ಹಾಸನದಲ್ಲಿ ಅಭ್ಯರ್ಥಿ ಯಾರಾಗು ತ್ತಾರೆ ಎಂಬ ವಿಚಾರ ನನ್ನವರೆಗೂ ಬಂದಿಲ್ಲ. ಜಿಲ್ಲೆಯಲ್ಲಿ ನಮ್ಮ ಪಕ್ಷದ ಶಾಸಕರು ಸೇರಿ ಅದನ್ನು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
98,846 ಮತದಾರರು
ರಾಜ್ಯದ ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳ ಚುನಾವಣೆಗೆ ನ. 13 ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 98,846 ಮತದಾರರನ್ನು ಗುರುತಿಸಲಾಗಿದೆ. ಇದರಲ್ಲಿ 47,368 ಪುರುಷ, 51,474 ಮಹಿಳಾ ಮತದಾರರು ಮತ್ತು ಮೂವರು ತೃತೀಯ ಲಿಂಗಿ ಮತದಾರರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.