KAS; 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ
Team Udayavani, Feb 27, 2024, 12:04 AM IST
ಬೆಂಗಳೂರು: ನನೆಗುದಿಗೆ ಬಿದ್ದಿದ್ದ ಗೆಜೆಟೆಡ್ ಪ್ರೊಬೆಷನರಿ (ಕೆಎಎಸ್) ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದ್ದು, 2023-24ನೇ ಸಾಲಿನ ಗ್ರೂಪ್ ಎ ಮತ್ತು ಬಿ ವೃಂದದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಭರ್ತಿಗೆ ಮೇ 5ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ.
ಕರ್ನಾಟಕ ಗೆಜೆಟೆಡ್ ಪ್ರೊಬೆಷನರಿ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) ನಿಯಮಗಳು-1997 ಹಾಗೂ ಕಾಲಕಾಲಕ್ಕೆ ತಿದ್ದುಪಡಿಯಾದ ನಿಯಮಗಳನ್ವಯ ಗೆಜೆಟೆಡ್ ಪ್ರೊಬೇಷನರಿ -2023-24ನೇ ಸಾಲಿನ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಪೂರ್ವಭಾವಿ ಪರೀಕ್ಷೆಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಗ್ರೂಪ್ ಎ ಉಳಿಕೆ ಮೂಲ ವೃಂದ (ಆರ್ಪಿಸಿ) 123 ಹುದ್ದೆಗಳು, ಹೈದರಾಬಾದ್ ಕರ್ನಾಟಕ ವೃಂದದ 36 ಸಹಿತ ಒಟ್ಟು 159, ಗ್ರೂಪ್ ಬಿ ವೃಂದದ ಉಳಿಕೆ ಮೂಲ ವೃಂದ (ಆರ್ಪಿಸಿ) 184 ಹಾಗೂ ಹೈದರಾಬಾದ್ ಕರ್ನಾಟಕ ವೃಂದದ 41 ಸಹಿತ ಒಟ್ಟು 225 ಹುದ್ದೆಗಳು ಒಳಗೊಂಡು ಒಟ್ಟಾರೆ ಎ ಮತ್ತು ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಕೆ ಮಾ.4ರಂದು ಆರಂ ಭವಾಗಿ ಎ.3ರಂದು ಕೊನೆ ಯಾಗ ಲಿದೆ. ಅರ್ಜಿ ಸಲ್ಲಿಸುವ ಹಂತಗಳು, ಅರ್ಜಿ ಶುಲ್ಕ, ಮೀಸಲಾತಿ, ವಯೋ ಮಿತಿ ಮತ್ತಿತರ ಮಾಹಿತಿ ಆಯೋಗದ ವೆಬ್ಸೈಟ್ https://kpsc.kar.nic.in/ ನಲ್ಲಿ ಲಭ್ಯ ವಿದೆ. ತೊಂದರೆ ಎದುರಾದಲ್ಲಿ 080- 30574957/ 30574901 ನಂಬರ್ಗೆ ಕರೆ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.