ಸಚಿವ ಡಾ.ಕೆ.ಸಿ ನಾರಾಯಣ ಗೌಡ ಅವರಿಂದ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ

Team Udayavani, Oct 12, 2021, 3:39 PM IST

ಸಚಿವ ಡಾ.ಕೆ.ಸಿ ನಾರಾಯಣ ಗೌಡ ಅವರಿಂದ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರದಾನ

ಬೆಂಗಳೂರು: ಇಂದು ಯವನಿಕದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 2017-18, 2018-19, 2019-20 ನೇ ಸಾಲಿನ ಎನ್‌ಎಸ್ಎಸ್ ರಾಜ್ಯ ಪ್ರಶಸ್ತಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಡಾ. ಕೆಸಿ ನಾರಾಯಣ ಗೌಡ ಅವರು ಪ್ರದಾನ ಮಾಡಿದರು.

ಎನ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ 36 ಕಾಲೇಜುಗಳು, 36 ಕಾರ್ಯಕ್ರಮ ಅಧಿಕಾರಿಗಳು ಹಾಗೂ 36 ಸ್ವಯಸೇವಕರಿಗೆ ಎನ್ಎಸ್ ಎಸ್ ರಾಜ್ಯ ಪ್ರಶಸ್ತಿಯನ್ನು ಸಚಿವ ನಾರಾಯಣ ಗೌಡ ಅವರು ವಿತರಿಸಿದರು.

ಇದೆ ವೇಳೆ ಎನ್‌ಎಸ್ಎಸ್ ಸ್ವಯಂ ಸೇವಕರ ನೋಂದಣಿ ಜಾಲತಾಣ(ವೆಬ್ ಸೈಟ್), ಯುವ ಸಹಾಯವಾಣಿ ಕೇಂದ್ರವನ್ನು ಸಚಿವ ನಾರಾಯಣ ಗೌಡ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ ಅವರು ಲೋಕಾರ್ಪಣೆಗೊಳಿಸಿದರು.

ಎನ್‌ಎಸ್ಎಸ್ ರಾಜ್ಯ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿರುವುದು ಸಂತೋಷದ ವಿಷಯವಾಗಿದೆ. ಈ ಪ್ರಶಸ್ತಿಗೆ ಭಾಜನರಾಗಿರುವವರು ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿರುವವರು. ಎನ್‌ಎಸ್ಎಸ್ ಸ್ವಯಂ ಸೇವಕರಿಗೆ ಇವರೆಲ್ಲಾ ಪ್ರೇರಣೆ ಆಗಬೇಕು. ಸ್ವಯಂ ಸೇವಕರ ನೋಂದಣಿಗೆ ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಯುವಜನತೆ ಇದರ ಸದುಪಯೋಗ ಪಡೆಯಬೇಕು. ಯುವ ಸ್ಪಂದನೆಗಾಗಿ ಮೊಟ್ಟಮೊದಲ ಬಾರಿಗೆ ಸಹಾಯವಾಣಿ ಕೇಂದ್ರ ತೆಗೆಯಲಾಗಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ನಾರಾಯಣ ಗೌಡ ಅವರು ಕರೆ ನೀಡಿದರು.

ನಿಮ್ಹಾನ್ಸ್ ಮೂಲಕ ಎನ್‌ಎಸ್‌ಎಸ್ ಸ್ವಯಂ ಸೇವಕರರಿಗೆ ಕೌನ್ಸೆಲಿಂಗ್ ತರಬೇತಿ ನೀಡಲಾಗುತ್ತಿದೆ. ಇದುವರೆಗೆ 2,31,000 ಯುವ ಜನರಿಗೆ ಆನ್‌ಲೈನ್ ಕೌನ್ಸೆಲಿಂಗ್ ತರಬೇತಿ ನೀಡಲಾಗಿದೆ. ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಎನ್ಎಸ್ಎಸ್ ಚಟುವಟಿಕೆ ಕಡ್ಡಾಯಗೊಳಿಸಲು ತೀರ್ಮಾನಿಸಿದ್ದು, ನಿಟ್ಟಿನಲ್ಲಿ ಪ್ರಕ್ರಿಯೆಗಳು ಸಾಗಿವೆ ಎಂದರು.

ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಎನ್‌ಎಸ್ಎಸ್ ಸಹಯೋಗದೊಂದಿಗೆ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ. ಸ್ವಚ್ಛ ಭಾರತ್ ಕಾರ್ಯಕ್ರಮದ ಅಡಿಯಲ್ಲಿ ಇದುವರೆಗೂ 1 ಲಕ್ಷ ಟನ್ ತ್ಯಾಜ್ಯ ಸಂಗ್ರಹಿಸಲಾಗಿದ್ದು, ಅಕ್ಟೋಬರ್ 1 ರಿಂದ 31ರವರೆಗೆ 75 ಲಕ್ಷ ಟನ್ ತ್ಯಾಜ್ಯ ಸಂಗ್ರಹಿಸಿ, ಸಮರ್ಪಕ ನಿರ್ವಹಣೆ ಮಾಡುವ ಗುರಿ ಹೊಂದಲಾಗಿದೆ ಎಂದರು.

ಸನ್ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಅಮೃತ ಸಮುದಾಯದ ಅಭಿವೃದ್ಧಿ ಯೋಜನೆಯ ಜವಾಬ್ದಾರಿಯನ್ನು ಎನ್‌ಎಸ್‌ಎಸ್‌ಗೆ ನೀಡಲಾಗಿದ್ದು, 750 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ. ಈ ಗ್ರಾಮಗಳ ಸಂಪೂರ್ಣ ಚಿತ್ರಣವನ್ನು ಎನ್‌ಎಸ್‌ಎಸ್ ಯಶಸ್ವಿಯಾಗಿ ದಾಖಲಿಸಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಇತರೆ ಇಲಾಖೆಗಳೊಂದಿಗೆ ಜೋಡಿಸಲಿದೆ ಎಂದು ಸಚಿವ ನಾರಾಯಣ ಗೌಡ ಅವರು ತಿಳಿಸಿದರು.

ಇದನ್ನೂ ಓದಿ: 2023 ರ ಚುನಾವಣೆಯಲ್ಲಿ ಸ್ವತಂತ್ರ ಸರ್ಕಾರ ನಡೆಸಲು ನಮ್ಮ ಪಕ್ಷವನ್ನು ಬೆಂಬಲಿಸಿ: ಹೆಚ್ ಡಿಕೆ

ಇದೇ ಮೊದಲ ಬಾರಿಗೆ ಕರ್ನಾಟಕದ ನಾಲ್ವರಿಗೆ ರಾಷ್ಟ್ರಮಟ್ಟದ ಎನ್ಎಸ್‌ಎಸ್ ಪ್ರಶಸ್ತಿ ಲಭಿಸಿರೋದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ. ಕೋವಿಡ್ ಸಂಕಷ್ಟದಲ್ಲೂ ಮಹಾಮಾರಿ ವಿರುದ್ಧ ಕೋರೋನಾ ವಾರಿಯರ್ ಆಗಿ ಸೇವೆ ಸಲ್ಲಿಸಿದ ಎನ್‌ಎಸ್ಎಸ್ ಸೇವಕ ಅಪಾರವಾದದ್ದು. ಸಮಾಜದ ಏಳಿಗೆಗೆ ಎನ್ಎಸ್ಎಸ್ ಕೊಡುಗೆ ತುಂಬಾ ದೊಡ್ಡದಿದೆ. ಇನ್ನಷ್ಟು ಸಮಾಜಮುಖಿ ಯುವಜನರ ಅನುಕೂಲವಾದ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಠಾನಕ್ಕೆ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ನಾರಾಯಣ ಗೌಡ ಅವರು ತಿಳಿಸಿದರು.

ಯುವ ಸಹಾಯವಾಣಿ ಆರಂಭಿಸಿರುವುದು ಯುವ ಜನತೆಗೆ ಬಹಳ ಅನುಕೂಲ ಅಗಲಿದೆ. ಯುವ ಜನತೆಯಲ್ಲಿರುವ ಮಾನಸಿಕ ತೋಳಲಾಟ ಹೇಳಿಕೊಳ್ಳಲು ಇದು ಅನುಕೂಲಾಗಲಿದೆ. ಈ ಸಹಾಯವಾಣಿ ಸಂಖ್ಯೆಯನ್ನು ಹೆಚ್ಚು ಹೆಚ್ಚು ಪ್ರಚಾರಪಡಿಸುವ ಮೂಲಕ ಎಲ್ಲರಿಗೂ ಅನುಕೂಲ ಆಗುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗಬೇಕು ಎಂದು ಸಚಿವ ಅಶ್ವಥ್ ನಾರಾಯಣ್ ಅವರು ಕರೆ ನೀಡಿದರು.

ಎನ್‌ಎಸ್ಎಸ್ ಸ್ಥಾಪನೆ ಮಾಡಿರುವ ಉದ್ದೇಶವನ್ನ ಯಶಸ್ವಿಗೊಳಿಸಬೇಕು. ಇಷ್ಟು ದಿನ ಎನ್‌ಎಸ್ಎಸ್ ಪಠೇತ್ಯರ ಚಟುವಟಿಕೆ ಆಗಿತ್ತು. ಆದರೀಗ ರಾಷ್ಟ್ರೀಯ ನೂತನ ಶಿಕ್ಷಣ ನೀತಿಯಲ್ಲಿ ಎನ್‌ಎಸ್ಎಸ್ ಹಾಗೂ ಎನ್‌ಸಿಸಿಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ. ಇದರಿಂದ ಎನ್‌ಎಸ್ಎಸ್‌ಗೆ ಸೇರಿಸಿಕೊಳ್ಳಲು ಅನುಕೂಲ ಆಗಲಿದೆ. ಬಜೆಟ್‌ನಲ್ಲಿ ಹೆಚ್ಚಿನ ಹಣವನ್ನು ಕ್ರೀಡಾ ಇಲಾಖೆಗೆ ಕೊಡಬೇಕು ಎಂದು ಕೇಳಿಕೊಳ್ಳುತ್ತೇನೆ. ಕ್ರೀಡೆ ಇದ್ದರೇ ಎಲ್ಲವೂ ಸಿಗಲಿದೆ. ಉನ್ನತ ಶಿಕ್ಷಣ ಇಲಾಖೆಯಿಂದ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಬೇಕಾದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಅಶ್ವಥ್ ನಾರಾಯಣ್ ಹೇಳಿದರು.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಸಿ ಎನ್ ಅಶ್ವಥ್ ನಾರಾಯಣ ಅವರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು, ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.