ವಲಸೆ ಮಕ್ಕಳ ಶಿಕ್ಷಣ ನೀತಿ ಜಾರಿಗೆ ಅ.31ರ ಗಡುವು
Team Udayavani, Sep 26, 2019, 3:05 AM IST
ಬೆಂಗಳೂರು: ರಾಜ್ಯದಲ್ಲಿ ವಲಸೆ ಮಕ್ಕಳ ಹಾಗೂ ಶಾಲೆಯಿಂದ ದೂರ ಉಳಿದ ಮಕ್ಕಳ ಕಡ್ಡಾಯ ಶಿಕ್ಷಣಕ್ಕಾಗಿ ಸಮಗ್ರ ನೀತಿ ಅಳವಡಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅ.31ರ ಗಡುವು ನೀಡಿದೆ. ರಾಜ್ಯದಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿದ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ 2013ರಲ್ಲಿ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಬುಧವಾರ ಸರ್ಕಾರಕ್ಕೆ ಈ ಗಡುವು ನೀಡಿತು.
ಯಾವುದೇ ಕ್ರಮವಿಲ್ಲ: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ-2009 ಹಾಗೂ “ಕರ್ನಾಟಕ ಮಕ್ಕಳ ಕಡ್ಡಾಯ ಹಾಗೂ ಉಚಿತ ಶಿಕ್ಷಣ ಹಕ್ಕು ನಿಯಮಗಳು-2012’ರ ಪ್ರಕಾರ ರಾಜ್ಯದಲ್ಲಿ ವಲಸೆ ಮಕ್ಕಳ ಶಿಕ್ಷಣ ಹಕ್ಕಿಗೆ ಸಂಬಂಧಿಸಿದಂತೆ ನೀತಿ ಜಾರಿಗೆ ತರಲು 2019ರ ಜು.20ಕ್ಕೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಲಾಗಿತ್ತು. ಆದರೆ, ಈವರೆಗೆ, ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ನ್ಯಾಯಾಲಯ ನಿರ್ದೇಶನ ನೀಡಬೇಕಾಗಿದೆ. ಅದರಂತೆ ಅ.31ರೊಳಗೆ ನೀತಿ ಅಳವಡಿಸಿಕೊಳ್ಳಲು ಕಾಲಮಿತಿ ನಿಗದಿ ಪಡಿಸಲಾಗಿದೆ ಎಂದು ನ್ಯಾಯಪೀಠ ಹೇಳಿದೆ.
ಸರ್ಕಾರ ಮನಗಾಣಲಿ: ವಿಶೇಷವಾಗಿ ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯಪುರ ಮತ್ತು ಗದಗ ಜಿಲ್ಲೆಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಬಹಳ ಹೆಚ್ಚಾಗಿದೆ. ಬರ ಮತ್ತು ನೆರೆ ಜತೆಗೆ ಕುಟುಂಬಗಳ ವಲಸೆ ಇದಕ್ಕೆ ಮುಖ್ಯ ಕಾರಣ ಎನ್ನುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹೀಗಾಗಿ ಕಾಯ್ದೆ ಆಶಯ ಈಡೇರಲು ಸಮಗ್ರ ನೀತಿ ಅವಶ್ಯಕತೆಯಿದೆ ಎಂಬುದನ್ನು ಸರ್ಕಾರ ಮನಗಾಣಬೇಕೆಂದು ನ್ಯಾಯಪೀಠ ಸೂಚ್ಯವಾಗಿ ಹೇಳಿದೆ.
ಖಾಲಿ ಹುದ್ದೆ ಭರ್ತಿ ಮಾಡಿ: ಶಾಲೆ ಬಿಟ್ಟ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಟ್ಟದಲ್ಲಿ ಕೆಲಸ ಮಾಡುವ “ಶಿಕ್ಷಣ ಸಂಯೋಜಕರ’ (ಹಾಜರಾತಿ ಅಧಿಕಾರಿ) ಕಾರ್ಯ ಮಹತ್ವದ್ದು. ಆದರೆ, ರಾಜ್ಯದಲ್ಲಿ 967 ಶಿಕ್ಷಣ ಸಂಯೋಜಕರ ಹುದ್ದೆಗಳ ಪೈಕಿ 357 ಹುದ್ದೆ ಭರ್ತಿ ಆಗಿದ್ದು, 2018ರ ಅ.6ರಿಂದ 610 ಹುದ್ದೆ ಖಾಲಿ ಇವೆ. ಹೀಗಾಗಿ ಖಾಲಿ ಹುದ್ದೆ ಭರ್ತಿಗೆ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ತಾಕೀತು ಮಾಡಿದೆ.
ಅರ್ಜಿಗೆ ಸಂಬಂಧಿಸಿದಂತೆ ಈಗ ನೀಡಲಾಗಿರುವ ನಿರ್ದೇಶನ ಹಾಗೂ 2019ರ ಜು.20ರಂದು ನೀಡಲಾಗಿರುವ ನಿರ್ದೇಶನ ಪಾಲಿಸಿದ ಅನುಪಾಲನಾ ವರದಿಯನ್ನು ನ.4ರೊಳಗೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್, ವಿಚಾರಣೆ ನ.6ಕ್ಕೆ ಮುಂದೂಡಿದೆ.
ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ನಿರಾಕರಣೆ
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಸುಳ್ವಾಡಿಯ ಕಿಚ್ಚುಗತ್ತಿ ಮಾರಮ್ಮ ದೇಗುಲದ ಪ್ರಸಾದದಲ್ಲಿ ವಿಷ ಬೆರೆಸಿದ ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲು ಹೈಕೋರ್ಟ್ ನಿರಾಕರಿಸಿದೆ. ಇಮ್ಮಡಿ ಮಹದೇವಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಬುಧವಾರ ಪ್ರಕಟಿಸಿದ ನ್ಯಾ. ಕೆ.ಎನ್.ಫಣೀಂದ್ರ ಅವರಿದ್ದ ಏಕಸದಸ್ಯ ನ್ಯಾಯಪೀಠ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿತು. ವಿಚಾರಣೆ ವೇಳೆ “ಇದು 16 ಮಂದಿ ಅಮಾಯಕರನ್ನು ಬಲಿ ತೆಗೆದುಕೊಂಡ ಗಂಭೀರ ಪ್ರಕರಣ.
ಇದರಲ್ಲಿ ಇಮ್ಮಡಿ ಮಹದೇವಸ್ವಾಮಿ ಪ್ರಮುಖ ಆರೋಪಿಯಾಗಿದ್ದಾನೆ. ಮೇಲಾಗಿ ಸಮಾಜದಲ್ಲಿ ಆತ ಸ್ವಾಮೀಜಿ ಯಾಗಿ ಗುರುತಿಸಿಕೊಂಡಿದ್ದು ಪ್ರಭಾವಿಯೂ ಆಗಿದ್ದಾನೆ. ಜಾಮೀನಿನ ಮೇಲೆ ಹೊರ ಬಂದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿದ್ದು, ಈ ಸಂದರ್ಭದಲ್ಲಿ ಜಾಮೀನು ಮಂಜೂರು ಮಾಡಬಾರದು’ ಎಂದು ಸರ್ಕಾರಿ ಅಭಿಯೋಜಕ ವಿ.ಎಸ್. ಹೆಗಡೆ ಅವರ ವಾದವನ್ನು ಪುರಸ್ಕರಿಸಿರುವ ಹೈಕೋರ್ಟ್ ಜಾಮೀನು ಅರ್ಜಿ ವಜಾಗೊಳಿಸಿದೆ.
ಬೆಂ.ವಿವಿ ಕುಲಪತಿ ನೇಮಕ ರದ್ದತಿಗೆ ತಡೆ
ಬೆಂಗಳೂರು: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಕೆ ಸೇರಿ ಹಲವು ಅಕ್ರಮ ಮತ್ತು ಗಂಭೀರ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ವಿವಿ ಕುಲಪತಿ ಕೆ.ಆರ್.ವೇಣುಗೋಪಾಲ್ ನೇಮಕ ರದ್ದುಪಡಿಸಿ ಮಂಗಳವಾರವಷ್ಟೇ (ಸೆ.24) ಏಕಸದಸ್ಯ ನ್ಯಾಯಪೀಠ ನೀಡಿದ ಆದೇಶಕ್ಕೆ ಹೈಕೋರ್ಟ್ ಬುಧವಾರ ಮಧ್ಯಂತರ ತಡೆ ಕೊಟ್ಟಿದೆ. ಈ ಕುರಿತಂತೆ ಕೆ.ಆರ್.ವೇಣುಗೋಪಾಲ್ ಮತ್ತು ಬೆಂಗಳೂರು ವಿವಿ ಪ್ರತ್ಯೇಕವಾಗಿ ಸಲ್ಲಿಸಿದ್ದ 2 ಮೇಲ್ಮನವಿಗಳು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್, ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.