ಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರ ವಜಾಕ್ಕೆ ಬಿಜೆಪಿ ನಾಯಕರ ಆಗ್ರಹ

Team Udayavani, May 28, 2024, 6:55 AM IST

bjpಸರ್ಕಾರದ ಕಮಿಷನ್‌ ದಾಹಕ್ಕೆ ಅಧಿಕಾರಿ ಬಲಿ: ಬಿಜೆಪಿ

ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್‌ ಆತ್ಮಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿರುವ ಬಿಜೆಪಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್‌, ಡೆತ್‌ ನೋಟ್‌ನಲ್ಲಿ ನಿಗಮದ ಎಂ.ಡಿ. ಪದ್ಮನಾಭ ಹಾಗೂ ಇನ್ನೊಬ್ಬ ಅಧಿಕಾರಿ ಹೆಸರನ್ನು ಬರೆದಿದ್ದು, ಈ ಇಲಾಖೆಯ ಸಚಿವರ ಮೌಖೀಕ ಆದೇಶದ ಪ್ರಕಾರ ಇಷ್ಟೆಲ್ಲ ಮಾಡಬೇಕಾಗಿದೆ ಎಂದು ಆರೋಪಿಸಿದ್ದಾರೆ. ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಿದ್ದ 187 ಕೋಟಿ ರೂ.ಗಳನ್ನು ಸಚಿವರು, ನಿಗಮದ ಎಂ.ಡಿ. ಮತ್ತು ಅಧಿಕಾರಿಗಳು ನಕಲಿ ಖಾತೆ ತೆರೆದು ವರ್ಗಾವಣೆ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಕನ್ನಡಿ ಬೇರೆ ಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಈಶ್ವರಪ್ಪನವರ ಮೇಲೆ ಇದೇ ರೀತಿಯ ಆರೋಪ ಬಂದಿತ್ತು. ಅಲ್ಲಿ ಮೃತನ ಕೈಬರಹ ಇರಲಿಲ್ಲ. ಇಲ್ಲಿ ನೇಣಿಗೆ ಶರಣಾದ ಚಂದ್ರಶೇಖರ್‌ ತನ್ನ ಹಸ್ತಾಕ್ಷರದಲ್ಲಿ ಇಲಾಖೆಯ ಸಚಿವರನ್ನು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯನವರು ಇಷ್ಟರೊಳಗೆ ನಾಗೇಂದ್ರರನ್ನು ಸಂಪುಟದಿಂದ ವಜಾ ಮಾಡಬೇಕಿತ್ತು. ಅವತ್ತು ಕೇವಲ 9 ಕೋಟಿ ರೂ. ಆರೋಪಕ್ಕೆ ಸಂಬಂಧಿಸಿ ಈಶ್ವರಪ್ಪನವರ ರಾಜೀನಾಮೆಗೆ ಗಂಟಲು ಕಿರುಚಿಕೊಂಡ ಸಿದ್ದರಾಮಯ್ಯನವರು ಈಗೇನು ಹೇಳುತ್ತಾರೆ ? ಎಂದು ಪ್ರಶ್ನಿಸಿದರು.

ಸರ್ಕಾರದ ಕಮಿಷನ್‌ ದಾಹಕ್ಕೆ
ಅಧಿಕಾರಿ ಆತ್ಮಹತ್ಯೆ: ಆರ್‌.ಅಶೋಕ್‌
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ.ಮೌಲ್ಯದ ಬೃಹತ್‌ ಭ್ರಷ್ಟಾಚಾರವನ್ನು ಅಧಿಕಾರಿಯ ತಲೆಗೆ ಕಟ್ಟಲು ಹೋಗಿ, ಕಿರುಕುಳ ನೀಡಿ ಆತ ಆತ್ಮಹತ್ಯೆಗೆ ಶರಣಾಗುವಂತೆ ಮಾಡಿದೆ ಈ ಕೊಲೆಗಡುಕ ಸರ್ಕಾರ. ಸಿಎಂ ಸಿದ್ದರಾಮಯ್ಯನವರೇ ಇದು ಆತ್ಮಹತ್ಯೆ ಅಲ್ಲ. ಕೊಲೆ. ಈ ಕೊಲೆಗೆ ಹೊಣೆ ಯಾರು? ನಿಮ್ಮ ಸರ್ಕಾರದ ಕಮಿಷನ್‌ ದಾಹಕ್ಕೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು ಎಂದು ವಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾ ಮಾಡಿ ಈ ಪ್ರಕರಣದ ತನಿಖೆಗೆ ಆದೇಶ ಮಾಡಿ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿ ಎಂದು ಆಗ್ರಹಿಸಿದ್ದಾರೆ.

ಕಾಣದ ಕೈಗಳ ಕರಾಮತ್ತು
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಸಾವಿನ ಸುತ್ತ ಭ್ರಷ್ಟಾಚಾರದ ಹುತ್ತ ಕಟ್ಟಿದ ಅನುಮಾನ ಬರುತ್ತಿದೆ. ಇಲಾಖೆಯಲ್ಲಿನ ಕಾಣದ ಕೈಗಳ ಕರಾಮತ್ತು ಯಾವುದೆಂಬುದು ಮಹದೇವನೇ ಬಲ್ಲ ! ಈ ಬಗ್ಗೆ ಸಮಗ್ರ ತನಿಖೆ ನಡೆಯಲಿ. ಸಾಕ್ಷನಾಶ ಪಡಿಸಿ ಎಸ್‌ಐಟಿ ತನಿಖೆ ಎಂಬ ರಾಗವನ್ನು ಸರ್ಕಾರ ಹಾಡದಿರಲಿ. ಈ ಬಗ್ಗೆ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆ ಸೂಕ್ತ ತನಿಖೆ ನಡೆಸಲಿ.
ವಿ.ಸುನೀಲ್‌ ಕುಮಾರ್‌, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ಇಲಾಖೆಯ ಸಚಿವರಿಂದಲೇ ಭ್ರಷ್ಟಾಚಾರದ
ನೇತೃತ್ವ: ಬಿ.ವೈ.ವಿಜಯೇಂದ್ರ ಆರೋಪ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ.ಮೌಲ್ಯದ ಬೃಹತ್‌ ಭ್ರಷ್ಟಾಚಾರದ ಜಾಲದಲ್ಲಿ ನಲುಗಿರುವ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಪ.ಜಾತಿ/ಪಂಗಡಗಳ ಕಲ್ಯಾಣದ ಬಗ್ಗೆ ಭಾಷಣ ಬಿಗಿಯುವ ಕಾಂಗ್ರೆಸ್‌ ಮುಂದಾಳುಗಳು ಪ.ಜಾತಿ/ಪಂಗಡಗಳ ಹೆಸರಿನಲ್ಲಿ ನಡೆಯುತ್ತಿರುವ ದುರಾಚಾರ ಹಾಗೂ ಭ್ರಷ್ಟಾಚಾರದ ನೇತೃತ್ವವನ್ನು ಇಲಾಖೆಯ ಸಚಿವರೇ ವಹಿಸಿರುವುದು ದುರಂತ ದೌರ್ಭಾಗ್ಯವೆನ್ನಬೇಕಿದೆ. ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅಧಿಕಾರಿಯ ಸಾವಿನ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕೆಂದು “ಎಕ್ಸ್‌ ‘ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿ ಕಾರಿಗಳು ಈ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. 187 ಕೋಟಿ ಸಹ ಭ್ರಷ್ಟಾಚಾರ ಆಗಿರುವ ಬಗ್ಗೆ ಅನುಮಾನ ಬರುತ್ತಿದೆ. ಈ ಹಗರಣವನ್ನು ಉನ್ನತ ಮಟ್ಟದ ತನಿಖೆ ನಡೆಸಬೇಕು. ಮಹಾದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು. ಸರ್ಕಾರ ಅಧಿ ಕಾರಿಗಳ ಮೇಲೆ ಒತ್ತಡ ತರುವ ಮೂಲಕ ಅವರ ಸಾವಿಗೆ ಕಾರಣವಾಗುತ್ತಿದೆ. ಈ ಬಗ್ಗೆ ರಾಜ್ಯಪಾಲರಿಗೂ ಪತ್ರ ಬರೆಯುತ್ತೇವೆ.
-ಎಸ್‌.ಎನ್‌.ಚನ್ನಬಸಪ್ಪ, ಶಾಸಕ

ಟಾಪ್ ನ್ಯೂಸ್

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

Land Scam Case: ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

Land Scam Case: 6 ತಿಂಗಳ ಬಳಿಕ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

7-belthangady

Belthangady: ಬಸ್-ಬೈಕ್ ಢಿಕ್ಕಿ; ನಡ ಗ್ರಾಮದ ಗ್ರಾಮ ಕರಣಿಕರ ಕಚೇರಿ ಸಹಾಯಕ ಸಾವು

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ

Udupi: ಜೂನ್‌ 29ರಂದು “ದೊಡ್ಡ ಸಾಮಗರ ನಾಲ್ಮೊಗ” ಪುಸ್ತಕ ಬಿಡುಗಡೆ, ಯಕ್ಷಗಾನ ತಾಳಮದ್ದಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

Congress High Command: ಸಾಕು, ನಿಲ್ಲಿಸಿ; ಸಿದ್ದು ಬಣಕ್ಕೆ ಕಾಂಗ್ರೆಸ್‌ ಹೈಕಮಾಂಡ್‌ ತರಾಟೆ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

How much did ‘Kalki 2898 AD’ earn at the box office on the first day?

ಬಾಕ್ಸಾಫೀಸ್ ಗೆ ಕಿಚ್ಚು ಹತ್ತಿಸಿದ ‘Kalki 2898 AD’ ಮೊದಲ ದಿನ ಗಳಿಸಿದ್ದೆಷ್ಟು?

Land Scam Case: ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

Land Scam Case: 6 ತಿಂಗಳ ಬಳಿಕ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಜಾಮೀನು

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

Anant Ambani-ರಾಧಿಕಾ ಮರ್ಚೆಂಟ್‌ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch

Egret ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

Egret: ಆರಿದ್ರ ಮಳೆಯೊಂದಿಗೆ ಶಿರಸಿಯ ಮುಂಡಿಗೇಕೆರೆಗೆ ಬೆಳ್ಳಕ್ಕಿಗಳ ಆಗಮನ!

Aranthodu; Man slipped and fell into the river

Aranthodu; ಕಾಲು ಜಾರಿ ಹೊಳೆಗೆ ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.