ಬಜೆಟ್ ಮಂಡನೆವರೆಗೂ ಅಧಿಕಾರಿಗಳಿಗೆ ರಜೆ ಇಲ್ಲ
Team Udayavani, Feb 23, 2020, 3:04 AM IST
ಬೆಂಗಳೂರು: ಬಜೆಟ್ ಮಂಡನೆಯಾಗುವವರೆಗೂ ಯಾವುದೇ ಅಧಿಕಾರಿಗಳು ರಜೆ ತೆಗೆದುಕೊಳ್ಳದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ. ಈಗಾಗಲೇ ಬಜೆಟ್ ಸಿದ್ಧತೆ ನಡೆಸಿರುವ ಅವರು, ಶನಿವಾರ, ರಜಾ ದಿನವೂ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈಗಾಗಲೇ ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ನಡೆಸಿರುವ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಗೂ ಹೊಸ ಯೋಜನೆಗಳಿಗೆ ಬೇಕಾಗುವ ಹಣಕಾಸಿನ ಲಭ್ಯತೆಯ ಕುರಿತು ಚರ್ಚಿಸಿದರು.
ಮಾರ್ಚ್ 5ರಂದು ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮುಖ್ಯಮಂತ್ರಿಯವರು ಪ್ರತಿ ದಿನವೂ ಬಿಡುವಿಲ್ಲದೇ ಬಜೆಟ್ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ಅಧಿಕಾರಿಗಳಿಗೂ ಯಾವುದೇ ಸಮಯದ ನಿರ್ಬಂಧವಿಲ್ಲದೇ ಕೆಲಸ ಮಾಡಲು ಸೂಚಿಸಿದ್ದು, ಹಬ್ಬ ಹಾಗೂ ಭಾನುವಾರದ ರಜೆಗಳನ್ನೂ ಬದಿಗಿಟ್ಟು, ಸಕ್ರೀಯರಾಗಿ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.