ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಅಗತ್ಯವಿದೆ: ಚುಂಚಶ್ರೀ
Team Udayavani, Oct 13, 2022, 11:00 PM IST
ಮಂಡ್ಯ: ಸಂವಿಧಾನದ ಪ್ರಕಾರ ಶೇ.50 ಮೀಸಲಾತಿಗಿಂತ ಹೆಚ್ಚು ನೀಡಬಾರದು ಎಂಬ ನಿಯಮವಿತ್ತು. ಆದರೆ ಆಳುವ ಸರ್ಕಾರಗಳು ಅದನ್ನು ಸಡಿಲಿಸಿದ್ದರಿಂದ ನಮ್ಮ ಒಕ್ಕಲಿಗ ಸಮುದಾಯಕ್ಕೂ ಶೇ.4 ಕ್ಕಿಂತ ಹೆಚ್ಚು ಮೀಸಲಾತಿ ನೀಡಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಗ್ರಹಿಸಿದರು.
ನಗರದ ಕಲಾಮಂದಿರದಲ್ಲಿ ನಡೆದ ಜಿಲ್ಲಾ ಒಕ್ಕಲಿಗರ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಬೇರೆ ಸಮುದಾಯಕ್ಕೆ ಹೆಚ್ಚು ಮೀಸಲಾತಿ ನೀಡಿರುವುದಕ್ಕೆ ನಮಗೆ ಬೇಸರವಿಲ್ಲ. ಆದರೆ ಹಿಂದಿನಿಂದಲೂ ಒಕ್ಕಲಿಗ ಸಮುದಾಯಕ್ಕೆ ಶೇ.4ಗಿಂತ ಹೆಚ್ಚಿನ ಮೀಸಲಾತಿ ನೀಡಬೇಕು ಎಂಬ ಕೂಗು ಕೇಳಿ ಬರುತ್ತಲೇ ಇತ್ತು. ದೇಶದ ಸಂವಿಧಾನದಂತೆ ಶೇ.50 ಮೀಸಲಾತಿ ಇತ್ತು. ಅದನ್ನು ಕದಲಿಸಬಾರದು ಎಂಬ ನಿಯಮವಿದ್ದರಿಂದ ನಮ್ಮವರಿಗೆ ತಿಳಿ ಹೇಳುತ್ತಿದ್ದೆವು. ನಾವು ಕಾನೂನನ್ನು ಗೌರವಿಸುತ್ತಾ ಬಂದಿದ್ದೆವು. ಆದರೆ ಈಗ ಕಳೆದ ವಾರ ಸರ್ಕಾರ ಸಂವಿಧಾನದ ಪ್ರಕಾರ ಇದ್ದ ಶೇ.50 ಮೀಸಲಾತಿಯನ್ನು ಸಡಿಲಿಸಿದ್ದಾರೆ. ಶೇ.50ರಷ್ಟು ಮೀಸಲಾತಿಗಿಂತ ಹೆಚ್ಚು ಕೊಡುವುದಾದರೆ ನಮ್ಮ ಸಮುದಾಯಕ್ಕೆ ಶೇ.4 ಕ್ಕಿಂತ ಹೆಚ್ಚು ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.