6 ತಿಂಗಳು ಓಲಾ ಟ್ಯಾಕ್ಸಿ ಪರವಾನಗಿ ಅಮಾನತು
Team Udayavani, Mar 23, 2019, 12:10 AM IST
ಬೆಂಗಳೂರು: ನಗರದಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆ ನೀಡುವ ಓಲಾ ಸಂಸ್ಥೆ, ಕರ್ನಾಟಕ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ಆ ಸಂಸ್ಥೆಗೆ ನೀಡಿದ ಪರವಾನಗಿ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಇತ್ತೀಚಿನ ದಿನಗಳಲ್ಲಿ ಆ್ಯಪ್ ಆಧಾರಿತ ಟ್ಯಾಕ್ಸಿ ಸೇವೆಗೆ ನಗರದ ಜನರು ಹೆಚ್ಚು ಮಾರು ಹೋಗಿದ್ದು, ಪರಿಣಾಮ ತಮ್ಮ ಸೇವಾ ವ್ಯಾಪ್ತಿ ವಿಸ್ತರಿಸುವ ಭರದಲ್ಲಿ ಓಲಾ ಸಂಸ್ಥೆಯು ನಿಯಮಗಳನ್ನು ಗಾಳಿಗೆ ತೂರಿ, ಆ್ಯಪ್ ಆಧಾರಿತ ಬೈಕ್ ಸಂಚಾರ ಸೇವೆ ಆರಂಭಿಸಿದೆ. ಆ ಮೂಲಕ ನಿಯಮಗಳನ್ನು ಉಲ್ಲಂ ಸಿದ ಹಿನ್ನೆಲೆಯಲ್ಲಿ ರಾಜ್ಯ ಬೇಡಿಕೆ ಆಧಾರಿತ ಸಂಚಾರ ತಂತ್ರಜ್ಞಾನ ನಿಯಮಾವಳಿಗಳು -2018ರ 11 (1)ರ ರಂತೆ ಸಂಸ್ಥೆಗೆ ನೀಡಲಾಗಿದ್ದ ಪರವಾನಗಿ ಅಮಾನತುಗೊಳಿಸಿ, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸಬೇಕೆಂದು ಸಾರಿಗೆ ಇಲಾಖೆ ಆದೇಶ
ಹೊರಡಿಸಿದೆ.
ಸಾರಿಗೆ ಇಲಾಖೆಯ ನಿಯಮಗಳಂತೆ ಅನಿ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಓಲಾ ಸಂಸ್ಥೆಗೆ ಕೇವಲ ಆ್ಯಪ್ ಆಧಾರಿತ ಮೋಟರು ಕ್ಯಾಬ್ಸ್ ಸೇವೆ ಒದಗಿಸಲು ಮಾತ್ರ ಪರವಾನಗಿ ನೀಡಲಾಗಿದೆ. ಆದರೆ, ಇತ್ತೀಚೆಗೆ ಓಲಾ ಸಂಸ್ಥೆಯು ಆ್ಯಪ್ ಆಧಾರಿತ ಬೈಕ್ ಸೇವೆಯನ್ನು ಕಾನೂನು ಬಾಹಿರವಾಗಿ ಆರಂಭಿಸಿರುವುದು ತನಿಖೆಯಿಂದ ಬಯಲಾಗಿದೆ. ಬೆಂಗಳೂರು ನಗರದಲ್ಲಿ ನಗರ ಸಾರಿಗೆ ಸಂಪೂರ್ಣ ರಾಷ್ಟ್ರೀಕರಣವಾಗಿರುವ ಪ್ರದೇಶಗಳಲ್ಲಿ ಕಾನೂನುಬಾಹಿರವಾಗಿ ಆ್ಯಪ್ ಮೂಲಕ ಬೈಕ್ ಸೇವೆ ನೀಡುತ್ತಿರುವುದು ಪರಿಶೀಲನೆಯಿಂದ ದೃಢಪಟ್ಟಿದೆ. ಆ ಹಿನ್ನೆಲೆಯಲ್ಲಿ ನಿಯಮ ಉಲ್ಲಂ ಸಿದ ಸಂಸ್ಥೆಯ ಪರವಾನಗಿ ಏಕೆ ಅಮಾನತು ಅಥವಾ ರದ್ದುಗೊಳಿಸಬಾರದು ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಸಾರಿಗೆ ಇಲಾಖೆ, ಓಲಾ ಸಂಸ್ಥೆಗೆ ನೋಟಿಸ್‌ಜಾರಿಗೊಳಿಸಿತ್ತು.
ಆದರೆ, ಓಲಾ ಸಂಸ್ಥೆಯ ಆಡಳಿತ ವರ್ಗ ಸಮಪರ್ಕವಾಗಿ ಉತ್ತರ ನೀಡದ ಹಿನ್ನೆಲೆಯಲ್ಲಿ ಆರು ತಿಂಗಳ ಮಟ್ಟಿಗೆ ಸಂಸ್ಥೆಗೆ ನೀಡಿರುವ ಪರವಾನಗಿ ಅಮಾನತುಗೊಳಿಸಿದ್ದು, ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ.
ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲ: ಸಾರಿಗೆ ಇಲಾಖೆಯ ಆಯುಕ್ತರು ಓಲಾ ಸಂಸ್ಥೆಗೆ ತಕ್ಷಣದಿಂದಲೇ ಸೇವೆ ಸ್ಥಗಿತಗೊಳಿಸುವಂತೆ ಆದೇಶ ಹೊರಡಿಸಿ ಮೂರು ದಿನಗಳು ಕಳೆದಿದೆ. ಆದರೆ, ಓಲಾ ಸಂಸ್ಥೆ ಮಾತ್ರ ಸರ್ಕಾರದ ಆದೇಶಕ್ಕೆ ಮನ್ನಣೆ ನೀಡಿಲ್ಲ.
ಬೈಕ್ ಸೇವೆ ಕೇವಲ ಪ್ರಾಯೋಗಿಕವಷ್ಟೇ
ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಓಲಾ ಮೂಲಸೌಕರ್ಯ, ಉತ್ತಮ ಸಂಚಾರ ವ್ಯವಸ್ಥೆ, ಹೊಸ ತಂತ್ರಜ್ಞಾನಗಳ ಬಳಕೆಯಲ್ಲಿ ಮುಂದಿದೆ. ಬೇರೆ ಸಂಸ್ಥೆಗಳು ಅನಧಿಕೃತವಾಗಿ ಬೈಕ್ ಸೇವೆ ಮುಂದುವರಿಸುತ್ತಿವೆ. ಆದರೆ, ಓಲಾ ಸಂಸ್ಥೆಯಿಂದ ಸಂಚಾರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತಾದರೂ, ಕೆಲವು ತಿಂಗಳ ಹಿಂದೆಯೇ ಬೈಕ್ ಸೇವೆ ಸ್ಥಗಿತಗೊಳಿಸಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುವುದು. ಸರ್ಕಾರ ಹೊರಡಿಸಿರುವ ಅಮಾನತು ಆದೇಶದ ಕುರಿತು ನೇರವಾಗಿ ಸರ್ಕಾರದೊಂದಿಗೆ ಮಾತನಾಡಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಮುಂದಿನ ನಡೆಯೇನು?
ಪ್ರಾದೇಶಿಕ ಸಾರಿಗೆ ಕಚೇರಿಯಿಂದ ಓಲಾ ಸಂಸ್ಥೆಗೆ ನೀಡಿರುವ ಪರವಾನಗಿಯನ್ನು ವಾಪಸ್ ನೀಡುವಂತೆ ಸಾರಿಗೆ ಇಲಾಖೆ ನೋಟಿಸ್‌ನಲ್ಲಿ ತಿಳಿಸಿದೆ. ಅದರಂತೆ ಓಲಾ ಸಂಸ್ಥೆಯವರು ಮೂರು ದಿನಗಳಲ್ಲಿ ಪರವಾನಗಿಯನ್ನು ಸಾರಿಗೆ ಇಲಾಖೆಗೆ ಸಲ್ಲಿಸಬೇಕಾಗಿದೆ. ಒಂದೊಮ್ಮೆ ಸಲ್ಲಿಸದಿದ್ದರೆ ಅಂತಹ ಕಾರುಗಳನ್ನು ಹಿಡಿದು ಜಪ್ತಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಓಲಾ ಸಂಸ್ಥೆಯವರು ನಿಯಮಗಳನ್ನು ಗಾಳಿಗೆ ತೂರಿ ಬೈಕ್ ಸೇವೆ ಆರಂಭಿಸಿದ್ದರಿಂದ ಕ್ರಮಕೈಗೊಳ್ಳುವಂತೆ ಸಂಚಾರ ಇಲಾಖೆಗೆ ದೂರು ನೀಡಲಾಗಿತ್ತು. ಅದರಂತೆ ಪರಿಶೀಲನೆ ನಡೆಸಿದ ಅಧಿಕಾರಿಗಳು, ಕಾನೂನು ಬಾಹಿರವಾಗಿ ಬೈಕ್ ಸೇವೆ ಒದಗಿಸುತ್ತಿರುವುದನ್ನು ಪತ್ತೆ ಹಚ್ಚಿದ್ದು, ನಾಲ್ಕೈದು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
● ತನ್ವೀರ್ ಪಾಷ, ರಾಜ್ಯ ಓಲಾ, ಉಬರ್ ಚಾಲಕರು, ಮಾಲೀಕರ ಸಂಘ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Vehicle Tragedy:ಕೊಡಗಿನ ಗಾಯಾಳು ಯೋಧ ಚಿಕಿತ್ಸೆ ಫಲಕಾರಿಯಾಗದೆ ಸಾ*ವು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri; ಜಾತ್ರೋತ್ಸವದ ವೇಳೆ ಗುಂಪು ಸಂಘರ್ಷ: ಕಟ್ಟೆಮಾಡು ಗ್ರಾಮದಲ್ಲಿ ನಿಷೇಧಾಜ್ಞೆ
Udupi: ಗೀತಾರ್ಥ ಚಿಂತನೆ-140: ಮಕ್ಕಳಲ್ಲಿ “ಇಗೋ’ ಏರಿಕೆ, ಪಾಲಕರಲ್ಲಿ ಗೌರವ ಇಳಿಕೆ
Kasaragod; ಬಸ್-ಕಾರು ಢಿಕ್ಕಿ: ಇಬ್ಬರ ಸಾವು
South Korea Plane Crash: ಛಿದ್ರಗೊಂಡ ದೇಹಗಳು, ಕೊನೇ ಸಂದೇಶ…
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.