ನ.3ರಂದು ಖಾಸಗಿ ಆಸ್ಪತ್ರೆಗಳಲ್ಲಿ ಒಪಿಡಿ ಬಂದ್
Team Udayavani, Nov 1, 2017, 6:00 AM IST
ಬೆಂಗಳೂರು: ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಕಾಯ್ದೆ 2017ಕ್ಕೆ (ಕೆಪಿಎಂಇ) ತಿದ್ದುಪಡಿಯಲ್ಲಿನ ಕೆಲವು ಅಂಶಗಳು ವೈದ್ಯರು, ಸಾರ್ವಜನಿಕರಿಗೆ ಮಾರಕವಾಗಿದ್ದು, ಇವುಗಳನ್ನು ಕೈಬಿಡುವಂತೆ ಒತ್ತಾಯಿಸಿ ಭಾರತೀಯ ವೈದ್ಯ ಸಂಘದ (ಐಎಂಎ) ರಾಜ್ಯ ಘಟಕ ನ.3ಕ್ಕೆ ಹೊರ ರೋಗಿ ಚಿಕಿತ್ಸಾ ಸೇವೆಯನ್ನು 24 ಗಂಟೆ ಸ್ಥಗಿತಗೊಳಿಸಿ ಪ್ರತಿಭಟನೆಗೆ ಕರೆ ನೀಡಿದೆ.
ಸರಕಾರದೊಂದಿಗೆ ಮುಕ್ತ ಚರ್ಚೆಗೆ ಸಿದ್ಧವಿರುವುದಾಗಿ ತಿಳಿಸಿರುವ ಸಂಘವು ಸ್ಪಂದನೆ ಸಿಗದಿದ್ದರೆ ನ.9 ಇಲ್ಲವೇ ನ.10ರಂದು ವೈದ್ಯ ವೃತ್ತಿ ಯನ್ನೇ ತ್ಯಜಿಸುವ ಘೋಷಣೆ ಮಾಡುವುದಾಗಿ ಎಚ್ಚರಿಕೆ ನೀಡಿದೆ. ಈ ನಡುವೆ ನ. 2ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಭೆ ಕರೆದಿರುವುದು ಕುತೂಹಲ ಮೂಡಿಸಿದೆ.
ಸಂಘದ ಕಚೇರಿಯಲ್ಲಿ ಮಂಗಳ ವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಐಎಂಎ ರಾಜ್ಯ ಘಟಕದ ಅಧ್ಯಕ್ಷ ಡಾ|ಎಚ್. ಎನ್.ರವೀಂದ್ರ, “ಕೆಪಿಎಂಇ ಕಾಯ್ದೆ ತಿದ್ದುಪಡಿ ಪ್ರಸ್ತಾವದಲ್ಲಿನ ಕೆಲ ಅಂಶಗಳು ಖಾಸಗಿ ಆಸ್ಪತ್ರೆ ವೈದ್ಯರು, ಸಾರ್ವಜನಿಕರಿಗೆ ಮಾರಕವಾಗಿದ್ದು, ಅವುಗಳನ್ನು ಕೈಬಿಡಬೇಕೆಂದು ಈಗಾಗಲೇ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಈ ಅಂಶ ಗಳಿಂದಾಗುವ ಅನಾಹುತಗಳ ಬಗ್ಗೆ ಮಂಡಿಸಿದ ವಿಚಾರಗಳನ್ನು ನಿವೃತ್ತ ನ್ಯಾ| ವಿಕ್ರಮ್ಜಿತ್ ಸೇನ್ ನೇತೃತ್ವದ ಸಮಿತಿ ಸರಿ ಎಂದಿತ್ತು. ಇಷ್ಟಾದರೂ ಆ ಸಮಿತಿ ವರದಿ ಕಡೆಗಣಿಸಿ ತಿದ್ದುಪಡಿಗೆ ಮುಂದಾಗಿರುವುದು ಖಂಡನೀಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.