ಉಡುಪಿಗೆ 250 ಜನರ ಎಸ್ ಡಿಆರ್ ಎಫ್ ತಂಡ, ಒಂದು ರಕ್ಷಣಾ ಹೆಲಿಕಾಪ್ಟರ್: ಬಸವರಾಜ ಬೊಮ್ಮಾಯಿ
Team Udayavani, Sep 20, 2020, 1:24 PM IST
ಬೆಂಗಳೂರು: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತದ್ದು, ರಕ್ಷಣಾ ಕಾರ್ಯಾಚರಣೆಗೆ 250 ಜನರ ಎಸ್ ಡಿಆರ್ ಎಫ್ ತಂಡವನ್ನು ಈಗಾಗಲೇ ಕಳುಹಿಸಿದ್ದು, ರಕ್ಷಣಾ ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ಕೆಲವು ಗ್ರಾಮಗಳು ಜಲಾವೃತಗೊಂಡಿರುತ್ತವೆ. ಹಾಗೂ ರಸ್ತೆ ಸಂಪರ್ಕವು ಕಡಿತವಾಗಿರುವುದರ ಕುರಿತು ನನ್ನ ಗಮನಕ್ಕೆ ಜಿಲ್ಲಾಡಳಿತ ತಂದ ತಕ್ಷಣ ರಾಜ್ಯದ ಒಂದು ಎಸ್ ಡಿಆರ್ ಎಫ್ ತಂಡದ ಸುಮಾರು 250 ಸದಸ್ಯರನ್ನು ತಡರಾತ್ರಿಯೇ ಸ್ಥಳಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಶಿರ್ವ ನಡಿಬೆಟ್ಟು: 70 ವರ್ಷಗಳ ನಂತರ ಬಾಗಿನ ಅರ್ಪಣೆ
ಈಗಾಗಲೇ 200ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಹಾಗೂ ಎನ್ ಡಿಆರ್ ಎಫ್ ತಂಡವೂ ಕೂಡ ಕೆಲವೇ ಸಮಯದಲ್ಲಿ ಸ್ಥಳಕ್ಕೆ ತಲುಪಲಿದ್ದು, ಜಿಲ್ಲಾಡಳಿತಕ್ಕೆ ಎಲ್ಲಾ ಕ್ರಮಗಳನ್ನು ತಗೆದುಕೊಳ್ಳಲು ಸೂಚಿಸಲಾಗಿದೆ. ಹಾಗೂ ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಅವರ ಜೊತೆ ಮಾತನಾಡಿ ರಕ್ಷಣಾ ಇಲಾಖೆಯ ಒಂದು ಹೆಲಿಕಾಪ್ಟರ್ ನ್ನು ನೀಡಲು ಕೇಳಿಕೊಂಡಿರುತ್ತೇನೆ ಎಂದು ಗೃಹ ಸಚಿವರು ಟ್ವೀಟ್ ಮಾಡಿದ್ದಾರೆ.
ಉಡುಪಿ ಮಳೆ ಅವಾಂತರದ ಚಿತ್ರಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.