ಕಂದಾಯ ನ್ಯಾಯಾಲಯಗಳಲ್ಲಿ ಲಕ್ಷ ಅರೆ ನ್ಯಾಯಿಕ ಪ್ರಕರಣಗಳು ಬಾಕಿ
Team Udayavani, Apr 20, 2022, 6:35 AM IST
ಬೆಂಗಳೂರು: ರಾಜ್ಯದಲ್ಲಿ ಕಂದಾಯ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ಭಾರ ಹೆಚ್ಚಾಗುತ್ತಲೆ ಇದೆ. ಸದ್ಯ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ ಹಾಗೂ ತಹಶೀಲ್ದಾರರ ಕಂದಾಯ ನ್ಯಾಯಾಲಯಗಳಲ್ಲಿ 1 ಲಕ್ಷಕ್ಕೂ ಅಧಿಕ ಅರೆ ನ್ಯಾಯಿಕ ಪ್ರಕರಣಗಳು ಬಾಕಿ ಇವೆ.
ಜಮೀನಿನ ಹಕ್ಕು ವರ್ಗಾವಣೆ, ಮ್ಯುಟೇಶನ್, ಖಾತಾ ಮತ್ತು ಆರ್. ಟಿ.ಸಿ. ಬದಲಾವಣೆಗಳಿಗೆ ಸಂಬಂಧಿಸಿದ ಅರೆ ನ್ಯಾಯಿಕ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರರ ಕಂದಾಯ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸುತ್ತಾರೆ. ಆದರೆ, ಅಧಿಕಾರಿಗಳ ಕಾರ್ಯಬಾಹುಳ್ಯದ ಪರಿಣಾಮ ಅರೆ ನ್ಯಾಯಿಕ ಪ್ರಕರಣಗಳ ಬಾಕಿ ಹೆಚ್ಚುತ್ತಲೆ ಇದೆ.
ಅದಕ್ಕಾಗಿ ಈ ಬಾಕಿ ಪ್ರಕರಣಗಳ ಭಾರ ಇಳಿಸಲು ಕಂದಾಯ ಇಲಾಖೆ ಹಲವು ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಎಲ್ಲ ಅರೆ ನ್ಯಾಯಿಕ ಕಂದಾಯ ನ್ಯಾಯಾಲಯಗಳು ಪ್ರಕರಣಗಳ ವಿಚಾರಣೆಯನ್ನು ವಾರದ ಪ್ರತಿ ಮಂಗಳವಾರ ಮತ್ತು ಗುರುವಾರಗಳಂದು ಪೂರ್ಣದಿನ ಕಡ್ಡಾಯವಾಗಿ ನಡೆಸಲು ನಿರ್ದೇಶನ ನೀಡಿದೆ. ಅದೇ ರೀತಿ ಮ್ಯುಟೇಶನ್, ಖಾತಾ ಮತ್ತು ಆರ್‌ಟಿಸಿ ಬದಲಾವಣೆಗೆ ಸಲ್ಲಿಕೆಯಾಗುವ ಅರ್ಜಿಗಳು ವಿವಾದರಹಿತವಾದ ಪ್ರಕರಣಗಳಿದ್ದಲ್ಲಿ ಖಾತೆ ಬದಲಾವಣೆಯನ್ನು 60 ದಿನಗಳಲ್ಲಿ ಭೂಮಿ ತಂತ್ರಾಂಶದ ಮೂಲಕ ಸಕಾಲ ಸೇವೆಗಳಡಿ ವಿಲೇವಾರಿ ಮಾಡಲಾಗುತ್ತಿದೆ.
ಅಲ್ಲದೇ ಅರ್ಜಿಯು ಆಸ್ತಿಯ ಹಕ್ಕಿನ ಹೊರತಾದ ವಿವಾದಿತ ಪ್ರಕರಣವಾಗಿದ್ದಲ್ಲಿ ಕರ್ನಾಟಕ ಭೂ ಕಂದಾಯ ಅಧಿನಿಯಮದ ಪ್ರಕಾರ ತಹಶೀಲ್ದಾರರು ಮೂರು ತಿಂಗಳಲ್ಲಿ ಇತ್ಯರ್ಥಪಡಿಸಬೇಕು. ಮೇಲ್ಮನವಿಗಳನ್ನು ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳು 6 ತಿಂಗಳಲ್ಲಿ ಇತ್ಯರ್ಥಪಡಿಸಲು ಸೂಚಿಸಲಾಗಿದೆ.
ಇದನ್ನೂ ಓದಿ:ಬಂಡೀಪುರ ಸಂರಕ್ಷಿತ ಪ್ರದೇಶದಲ್ಲಿ ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆ!
ಅಧಿಕಾರಿಗಳಿಗೆ ತಿಂಗಳ ಗುರಿ
ಬಾಕಿ ಪ್ರಕರಣಗಳ ವಿಲೇವಾರಿಯನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳಿಗೆ ಸರಕಾರ ತಿಂಗಳ ಗುರಿ ನೀಡಿದೆ. ಅದರಂತೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಅರೆ ನ್ಯಾಯಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನ ಸಭೆ ನಡೆಸಿ, ಪ್ರತಿ ಜಿಲ್ಲಾಧಿಕಾರಿ ಪ್ರತಿ ತಿಂಗಳು 75 ಪ್ರಕರಣಗಳನ್ನು ಹಾಗೂ ಉಪ ವಿಭಾಗಾಧಿಕಾರಿಗಳು ಪ್ರತಿ ತಿಂಗಳು 100 ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಗುರಿ ನಿಗದಿಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್ ಪಟೇಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.