ಕರಾವಳಿಯ ಪ್ರತಿ ಇಬ್ಬರಲ್ಲಿ ಒಬ್ಬರ ಬಳಿಯಿದೆ ಆಯುಷ್ಮಾನ್‌ ಕಾರ್ಡ್‌

Team Udayavani, Sep 27, 2021, 9:36 AM IST

ayushman card

ಬೆಂಗಳೂರು: ಕರಾವಳಿ ಭಾಗದ ಜಿಲ್ಲೆಗಳಲ್ಲಿ ವಾಸಿಸುವ ಪ್ರತಿ ಇಬ್ಬರಲ್ಲಿ ಒಬ್ಬರು ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಕಾರ್ಡ್‌ ಹೊಂದಿದ್ದಾರೆ!

ವಾರ್ಷಿಕ ಬಿಪಿಎಲ್‌ ಕುಟುಂಬಗಳಿಗೆ ಐದು ಲಕ್ಷ ರೂ., ಎಪಿಲ್‌ ಕುಟುಂಗಳಿಗೆ ಒಂದೂವರೆ ಲಕ್ಷ ರೂ., ಆಸ್ಪತ್ರೆ ಚಿಕಿತ್ಸಾ ವೆಚ್ಚದ ನೆರವು ನೀಡುವ ಆಯುಷ್ಮಾನ್‌ ಭಾರತ್‌ ಆರೋಗ್ಯ ಯೋಜನೆಗೆ ಮೂರು ವರ್ಷ ತುಂಬಿದೆ. ರಾಜ್ಯದಲ್ಲಿ ಒಟ್ಟಾರೆ 7.02 ಕೋಟಿ ಜನಸಂಖ್ಯೆ ಇದ್ದು, ಈ ಪೈಕಿ ಸೆ.23 ವೇಳೆಗೆ 58.8 ಲಕ್ಷ ಕುಟುಂಬಗಳ 1,47,36918 ಮಂದಿ ನೋಂದಣಿಯಾಗಿ ಆರೋಗ್ಯ ಕಾರ್ಡ್‌ ಪಡೆದುಕೊಂಡಿದ್ದಾರೆ. ಈ ಮೂಲಕ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ.20 ರಷ್ಟು ಮಂದಿಗೆ ಮಾತ್ರ ಈ ಯೋಜನೆ ತಲುಪಿದಂತಾಗಿದೆ. ಆದರೆ, ರಾಜ್ಯದ ಕರಾವಳಿ ಭಾಗದಲ್ಲಿ ಆಯುಷ್ಮಾನ್‌ ಯೋಜನೆಗೆ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಈ ಜಿಲ್ಲೆಗಳಲ್ಲಿ ವಾಸಿಸುತ್ತಿರುವವರ ಪೈಕಿ ಸರಾಸರಿ ಶೇ.50ರಷ್ಟು ಜನರು ಆಯುಷ್ಮಾನ್‌ ಕಾರ್ಡ್‌ ಹೊಂದಿದ್ದಾರೆ.

ಅತಿ ಹೆಚ್ಚು ಉಡುಪಿಯ ಶೇ.64, ಉತ್ತರ ಕನ್ನಡ ಶೇ.41, ದಕ್ಷಿಣ ಕನ್ನಡ ಶೇ.37, ಕೊಡಗು ಶೇ.58 ರಷ್ಟು ನಿವಾಸಿಗಳ ಬಳಿ ಆಯುಷ್ಮಾನ್‌ ಕಾರ್ಡ್‌ ಇದೆ. ಈ ಭಾಗದ ಜನರಲ್ಲಿರುವ ಆರೋಗ್ಯ ಕಾಳಜಿ, ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ಬಿಜೆಪಿ ಜಾರಿಗೆ ತಂದ ಯೋಜನೆಯಾಗಿದ್ದು, ಈ ಜಿಲ್ಲೆಗಳಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಂಖ್ಯೆ ಹೆಚ್ಚಿರುವುದೇ ಆಯುಷ್ಮಾನ್‌ ಯೋಜನೆಗೆ ಉತ್ತಮ ಪ್ರತಿಕ್ರಿಯೆ ದೊರೆಯಲು ಕಾರಣವಾಗಿದೆ. ಜತೆಗೆ ಮಲೆನಾಡಿನ ಭಾಗದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಶೇ.40ರಷ್ಟು ಮಂದಿ ಯೋಜನೆಗೆ ನೋಂದಣಿಯಾಗಿದ್ದಾರೆ. ಉಳಿದಂತೆ ಮಂಡ್ಯ ಶೇ.40, ರಾಮನಗರ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಶೇ.30ಕ್ಕಿಂತ ಮೊದಲ ಹತ್ತು ಸ್ಥಾನದಲ್ಲಿವೆ.

ಉತ್ತರ ಕರ್ನಾಟಕ ಜಿಲ್ಲೆಗಳು ಹಿಂದೆ!: ರಾಜ್ಯದ ಒಟ್ಟಾರೆ ಜನಸಂಖ್ಯೆ ಶೇ.20 ರಷ್ಟು ಮಂದಿ ಆಯುಷ್ಮಾನ್‌ ಕಾರ್ಡ್‌ ಹೊಂದಿದಾರೆ. ಆದರೆ, ಅರ್ಧದಷ್ಟು ಜಿಲ್ಲೆಗಳಲ್ಲಿ ಶೇ.20ಕ್ಕಿಂತಲೂ ಕಡಿಮೆ ಮಂದಿಗೆ ಯೋಜನೆ ತಲುಪಿದೆ. ಈ ಪೈಕಿ ಉತ್ತರ ಕರ್ನಾಟಕದ 12 ಜಿಲ್ಲೆಗಳು, ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಿವೆ. ರಾಯಚೂರು, ಬೆಂಗಳೂರು ನಗರ, ಬಳ್ಳಾರಿ, ವಿಜಯಪುರ, ದಾವಣಗೆರೆ ಸರಾಸರಿ ಶೇ.10 ರಷ್ಟು ಮಂದಿ ಮಾತ್ರ ಆರೋಗ್ಯ ಕಾರ್ಡ್‌ಹೊಂದಿದ್ದು, ಕೊನೆಯಿಂದ ಐದು ಸ್ಥಾನದಲ್ಲಿವೆ.

ಶೇ.82ರಷ್ಟು ಬಡವರಿಗೆ ತಲುಪಿದೆ:  ಬಡತನ ರೇಖೆಗಿಂತ ಕೆಳಗೆ (ಬಿಪಿಎಲ್‌) 55.96 ಲಕ್ಷ ಕುಟುಂಬಗಳಿದ್ದು, ಇವುಗಳ 1.2 ಕೋಟಿ ಮಂದಿ ಈಗಾಗಲೇ ಆಯುಷ್ಮಾನ್‌ ಕಾರ್ಡ್‌ ಪಡೆದು ಕೊಂಡಿದ್ದಾರೆ. ಈ ಮೂಲಕ ಶೇ.82 ರಷ್ಟು ಬಡವರಿಗೆ ಈ ಯೋಜನೆ ತಲುಪಿದಂತಾಗಿದೆ. ಇನ್ನು ಎಪಿಎಲ್‌ ಕುಟುಂಬಗಳ 2.5 ಲಕ್ಷವಿದ್ದು, ಈ ಪೈಕಿ ಶೇ.3.5 ರಷ್ಟು ಮಂದಿ ಮಾತ್ರ ನೋಂದಣಿಯಾಗಿದ್ದಾರೆ.

ಇದನ್ನೂ ಓದಿ:ಇಂದು ಪ್ರವಾಸೋದ್ಯಮ ದಿನ: ಕಡತದಲ್ಲೇ ಬಾಕಿಯಾದ ಪ್ರವಾಸೋದ್ಯಮ ಯೋಜನೆ

ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆಯುಷ್ಮಾನ್‌ ಕಾರ್ಡ್‌ ನೀಡಲಾಗುತ್ತಿದ್ದು, ದಾಖಲೆ ನೀಡಿದರೆ 10 ನಿಮಿಷದಲ್ಲಿ ಕಾರ್ಡ್‌ ಲಭ್ಯವಾಗಲಿದೆ. ಬಿಪಿಎಲ್‌ ಕುಟುಂಬಗಳ ಶೇ.82 ರಷ್ಟು ಮಂದಿ ಈಗಾಗಲೇ ಕಾರ್ಡ್‌ ಪಡೆದಿದ್ದಾರೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಜಾಗೃತಿ ಮೂಡಿಸಿ, ಕಾರ್ಡ್‌ ನೋಂದಣಿ ಕೇಂದ್ರ ಮತ್ತಷ್ಟು ಹೆಚ್ಚಿಸಿ ಯೋಜನೆಯನ್ನು ಎಲ್ಲರಿಗೂ ತಲುಪಿಸಲಾಗುತ್ತದೆ.

-ಡಾ.ತ್ರಿಲೋಕ್ ಚಂದ್ರ, ಆಯುಕ್ತ, ಆರೋಗ್ಯ ಇಲಾಖೆ

ವರದಿ: ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

1-katte

Kodagu; ದೇವಸ್ಥಾನ ಪ್ರವೇಶ ನಿರಾಕರಣೆ: ವಿವಿಧೆಡೆ ಕೊಡವರಿಂದ ರಸ್ತೆ ತಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Exam-Authotiy

Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫ‌ಲಿತಾಂಶ ಪ್ರಕಟಿಸಿದ ಕೆಇಎ

Pierre-Filliozat

ಫ್ರಾನ್ಸ್‌ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್‌ ಫಿಲಿಯೋಜಾ ನಿಧನ

Kimmane-Ratnakar

ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.