ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸೂತ್ರವೇ ಅಂತಿಮವಲ್ಲ: ಸುರ್ಜೇವಾಲಾ ಭರವಸೆ
Team Udayavani, Jun 3, 2022, 11:38 AM IST
ಬೆಂಗಳೂರು: ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸೂತ್ರ ಬೆಂಗಳೂರಿನಲ್ಲಿ ನಡೆಯುತ್ತಿರುವ ನವಚೈತನ್ಯ ಶಿಬಿರದಲ್ಲೂ ಚರ್ಚೆಗೆ ಬಂದಿದ್ದು, ಈ ಸೂತ್ರವೇ ಅಂತಿಮವಲ್ಲ ಎಂಬ ಸೂಚನೆ ರವಾನೆಯಾಗಿದೆ.
ಪಕ್ಷದಲ್ಲಿ ನಾಯಕರ ಕುಟುಂಬಗಳು ಅಥವಾ ಸಂಬಂಧಿಗಳಿಗೆ ಟಿಕೆಟ್ ನೀಡುವ ವಿಚಾರವಾಗಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಸೂತ್ರವನ್ನು ಅಳವಡಿಸಿಕೊಳ್ಳಲಾಗಿದೆ. ಹಾಗೆಂದ ಮಾತ್ರಕ್ಕೆ ಒಂದು ಕುಟುಂಬದಲ್ಲಿ ಮತ್ತೊಬ್ಬರಿಗೆ ಅವಕಾಶ ನೀಡುವುದೇ ಇಲ್ಲ ಎಂದಲ್ಲ. ಕುಟುಂಬದಲ್ಲಿ ಮತ್ತೊಬ್ಬರೂ ಪಕ್ಷಕ್ಕಾಗಿ 5 ವರ್ಷಗಳ ಕಾಲ ದುಡಿದಿದ್ದರೆ ಅವರಿಗೆ ಅವಕಾಶ ನೀಡಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಹೀಗಾಗಿ ಒಂದು ಕುಟುಂಬಕ್ಕೆ ಒಂದು ಟಿಕೆಟ್ ಎಂಬ ವಾದಕ್ಕೆ ಆರಂಭದಲ್ಲೇ ಹಿನ್ನಡೆಯಾದಂತಾಗಿದೆ. ಇದರ ಜತೆಗೆ ಪಕ್ಷ ಸಂಘಟನೆಗೆ ಸಂಬಂಧಪಟ್ಟಂತೆ ಕೆಲ ವಿಚಾರಗಳನ್ನು ಸುರ್ಜೇವಾಲಾ ಸಭೆಯಲ್ಲಿ ಹೇಳಿದ್ದಾರೆ.
ಪಕ್ಷದ ಖಾಲಿ ಹುದ್ದೆಗಳ ಭರ್ತಿ ಮಾಡುವಂತೆ ಕೆಪಿಸಿಸಿ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಲಾಗಿದೆ. ಮುಂದಿನ 15 ದಿನದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಪೂರ್ಣಗೊಳ್ಳಬೇಕು. 3 ರಿಂದ 6 ತಿಂಗಳೊಳಗೆ ಪ್ರತಿಯೊಂದು ಸಮಿತಿಗೂ ಪೂರ್ಣ ಪ್ರಮಾಣದಲ್ಲಿ ಪದಾಧಿಕಾರಿಗಳು ನೇಮಕವಾಗಿರಬೇಕು. ಜತೆಗೆ ಎಲ್ಲ ಸಮಿತಿಗಳಲ್ಲೂ ಶೇ.50 ರಷ್ಟು ಸ್ಥಾನ 50 ವರ್ಷದೊಳಗಿನವರಿಗೆ ಅವಕಾಶ ನೀಡಬೇಕು ಎಂದು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ
ಸಮನ್ವಯತೆ ಸಾಧಿಸಲು ಬ್ಲಾಕ್ ಹಾಗೂ ಗ್ರಾಮ ಸಮಿತಿ ನಡುವೆ ಮಂಡಲ ಸಮಿತಿ ರಚನೆಯಾಗಬೇಕು. ಕೆಪಿಸಿಸಿ ಪದಾಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ಜಿಲ್ಲೆ ಹಾಗೂ ಕ್ಷೇತ್ರಗಳ ಉಸ್ತುವಾರಿ ನೀಡಲಾಗುವುದು. ಈ ಎಲ್ಲ ವಿಚಾರವಾಗಿ ನಾನು ಚರ್ಚೆ ಮಾಡಿ, ಖುದ್ದು ಮೇಲ್ವಿಚಾರಣೆ ಮಾಡುತ್ತೇನೆ ಎಂದು ಸುರ್ಜೇವಾಲಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.