ಸರ್ಕಾರದ ತಡೆಯಿದ್ದರೂ ಈ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ನಡೆಯುತ್ತಿದೆ ಆನ್ ಲೈನ್ ಕ್ಲಾಸ್
Team Udayavani, Jun 13, 2020, 11:37 AM IST
ಬೆಂಗಳೂರು: ಎಲ್ ಕೆಜಿಯಿಂದ ಪ್ರಾಥಮಿಕ ಹಂತದವರೆಗೆ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದ್ದರೂ, ವರ್ತೂರಿನ ವಿಬ್ ಗಯಾರ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಮುಂದುವರಿದಿದೆ. ಸರ್ಕಾರದ ಆದೇಶ ನಮ್ಮ ಕೈಸೇರಿಲ್ಲ ಎಂಬ ಸಬೂಬಿನೊಂದಿಗೆ ತರಗತಿಗಳು ಮುಂದುವರಿದಿದೆ.
ಸಣ್ಣ ಮಕ್ಕಳಿಗೆ ಆನ್ ಲೈನ್ ತರಗತಿ ನಡೆಸುವ ಬಗ್ಗೆ ರಾಜ್ಯದಲ್ಲಿ ಬಹಳಷ್ಟು ದೂರುಗಳು ಕೇಳಿಬಂದಿದ್ದವು. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಳೆದ ಬುಧವಾರ ಸುದ್ದಿಗೋಷ್ಠಿ ನಡೆಸಿ ಪ್ರಾಥಮಿಕ ಹಂತದವರೆಗಿನ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವಂತಿಲ್ಲ. ಎಲ್ ಕೆಜಿ, ಯುಕೆಜಿ, ಪ್ರಾಥಮಿಕ ಹಂತದವರೆಗೆ ನಡೆಯುತ್ತಿರುವ ಎಲ್ಲಾ ಆನ್ ಲೈನ್ ತರಗತಿಗಳನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಹೇಳಿದ್ದರು. ಮರುದಿನ ಸರ್ಕಾರದ ಅಧಿಕೃತ ಆದೇಶವೂ ಹೊರಬಿದ್ದಿತ್ತು.
ಆದರೆ ನಗರದ ವರ್ತೂರಿನ ವಿಬ್ ಗಯಾರ್ ಶಾಲೆಯಲ್ಲಿ ಆನ್ ಲೈನ್ ತರಗತಿಗಳು ಮುಂದುವರಿದಿದೆ. ವರ್ಚುವಲ್ ಲರ್ನಿಂಗ್ ಹೆಸರಿನಲ್ಲಿ ಈ ಶಾಲೆ ಆನ್ ಲೈನ್ ತರಗತಿಗಳನ್ನು ಮುಂದುವರಿಸಿದೆ.
ಈ ಸಲುವಾಗಿ ಪಾಲಕರಿಗೆ ಶಾಲೆ ಪತ್ರ ಬರೆದಿದ್ದು, ಆನ್ ಲೈನ್ ತರಗತಿಗಳನ್ನು ನಿಲ್ಲಿಸುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಆದರೆ ಸರ್ಕಾರದ ಯಾವುದೇ ಆದೇಶಪ್ರತಿ ನಮಗೆ ತಲುಪಿಲ್ಲ. ಹಾಗಾಗಿ ಹಿಂದಿನಂತೆಯೇ ತರಗತಿಗಳು ಮುಂದುವರಿಯುತ್ತದೆ ಎಂದಿದೆ.
ಸರ್ಕಾರದ ಆದೇಶವಿದ್ದರೂ, ವರ್ಚುವಲ್ ಲರ್ನಿಂಗ್ ಹೆಸರಲ್ಲಿ ಒತ್ತಡ ಹೇರುತ್ತಿರುವ ಖಾಸಗಿ ಶಾಲೆಯ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಮೈಕ್ರೋಫೈನಾನ್ಸ್ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Hubballi: ಬಂಧಿಸಲು ಹೋದ ಪೊಲೀಸರ ಮೇಲೆ ದಾಳಿ… ಆರೋಪಿ ಕಾಲಿಗೆ ಗುಂಡೇಟು
Hubballi: ಸಿಲಿಂಡರ್ ಸ್ಫೋಟ ಪ್ರಕರಣ… ಮತ್ತೋರ್ವ ಕೊನೆಯುಸಿರು, ಮೃತರ ಸಂಖ್ಯೆ 8ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.