ಆನ್‌ಲೈನ್‌ನಲ್ಲಿ ಶಾಲಾ ನೋಂದಣಿ: ಸಚಿವ ನಾಗೇಶ್
Team Udayavani, Mar 4, 2023, 6:41 AM IST
ಬೆಂಗಳೂರು: ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ಆರಂಭಿಸಲು ಅಗತ್ಯ ಅನುಮತಿಗಾಗಿ ಇನ್ನು ಮುಂದೆ ಕಚೇರಿಗಳಿಗೆ ಅಲೆದಾಡಬೇಕಿಲ್ಲ. ನೀವಿದ್ದಲ್ಲಿಂದಲೇ ಬೆರಳತುದಿ ಯಲ್ಲಿ ಅರ್ಜಿ ಹಾಕಿ ಅಲ್ಪಾವಧಿಯಲ್ಲೇ ಅನುಮತಿ ಪಡೆಯಬಹುದು. ಈ ಹೊಸ ವ್ಯವಸ್ಥೆಗೆ ಶುಕ್ರವಾರ ಚಾಲನೆ ದೊರಕಿದೆ.
ಇದಕ್ಕಾಗಿ ಆನ್‌ಲೈನ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ, ಕೇವಲ ನಾಲ್ಕು ಹಂತಗಳಲ್ಲಿ 15ರಿಂದ 17 ದಿನಗಳಲ್ಲಿ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆಯುವ ವ್ಯವಸ್ಥೆ ಪರಿಚಯಿಸಿದೆ.
ಇದರಡಿ ರಾಜ್ಯದ ಖಾಸಗಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಆರಂಭಿಸಲು ನೋಂದಣಿ/ಅನುಮತಿ, ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣ ಮತ್ತು ಕೇಂದ್ರ ಪಠ್ಯಕ್ರಮ ಸಂಯೋಜನೆ ಸೇವೆಗಳು ಆನ್‌ಲೈನ್‌ನಲ್ಲೇ ಲಭ್ಯವಾಗಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ. ಸಿ. ನಾಗೇಶ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಪರಿಷ್ಕೃತ ತಂತ್ರಾಂಶದ ಮೂಲಕ ಅರ್ಜಿ ಸಲ್ಲಿಸಬಹುದು. ಈ ಸಂಬಂಧದ ಲಿಂಕ್ ಇಲಾಖೆ ವೆಬ್‌ಸೈಟ್‌ನ ಮುಖಪುಟದಲ್ಲಿ ಲಭ್ಯವಿದೆ. ಅರ್ಜಿಗಳು ಜಿಲ್ಲಾ ಉಪ ನಿರ್ದೇಶಕರಿಗೆ ನೇರವಾಗಿ ಸಲ್ಲಿಕೆಯಾಗಲಿದ್ದು, ಅಧಿಕಾರಿಯು ಮಂಜೂರಾತಿ ಪ್ರಾಧಿಕಾರಿಯಾಗಿರುತ್ತಾರೆ. ಒಂದು ವೇಳೆ ನಿಗದಿತ ಅವಧಿಯಲ್ಲಿ ಅರ್ಜಿಯನ್ನು ವಿಲೇವಾರಿ ಮಾಡದಿದ್ದರೆ, ಅಟೋಮೆಟಿಕ್ ಆಗಿ ಅರ್ಜಿ ವಿಲೇವಾರಿ ಆಗುತ್ತದೆ ಎಂದು ಮಾಹಿತಿ ನೀಡಿದರು.
ಆಡಳಿತ ಮಂಡಳಿಗಳು ಅರ್ಜಿ ಸಲ್ಲಿಕೆ ಸಂದರ್ಭ ಜಿಯೊ ಟ್ಯಾಗ್‌ನಲ್ಲಿ ಶಾಲೆಯ ಮೂಲಸೌಕರ್ಯಗಳ ಕುರಿತು ಛಾಯಾ ಚಿತ್ರಗಳು ಮತ್ತು ವೀಡಿಯೋ ತುಣುಕುಗಳನ್ನು ಅಪ್‌ಲೋಡ್ ಮಾಡಬೇಕು. ಇದಕ್ಕಾಗಿ ಅರ್ಜಿದಾರರು SATSKARNATAKA‘ ಆ್ಯಪ್ ಅನ್ನು ಇನ್‌ಸ್ಟಾಲ್ ಮಾಡಿಕೊಂಡು, ಆ ಮೂಲಕ ಅಪ್‌ಲೋಡ್ ಮಾಡಬಹುದು. ಪ್ರತಿ ಹಂತದಲ್ಲಿ ಅರ್ಜಿದಾರರಿಗೆ ಎಸ್‌ಎಂಎಸ್ ಬರುತ್ತದೆ. ಈ ಮಧ್ಯೆ ತಿರಸ್ಕೃತ ಅರ್ಜಿಗಳಿಗಾಗಿ ಆನ್‌ಲೈನ್‌ನಲ್ಲಿ ಮೇಲ್ಮನವಿ’ ತಂತ್ರಾಂಶವನ್ನೂ ಅಭಿವೃದ್ಧಿಪಡಿಸಲಾಗುವುದು. ಈ ಹಿಂದಿನ ವ್ಯವಸ್ಥೆಯಲ್ಲಿ ನಿರಾಪೇಕ್ಷಣ ಪತ್ರ ಪಡೆಯಲು ಹತ್ತಕ್ಕಿಂತ ಹೆಚ್ಚು ಹಂತಗಳನ್ನು ಅನುಸರಿಸಬೇಕಿತ್ತು ಎಂದರು.
ಅನಧಿಕೃತ ಶಾಲೆಗಳ ಪಟ್ಟಿ ಸಿದ್ಧ; ಪರೀಕ್ಷೆ ಬಳಿಕ ಕ್ರಮ
ಬೆಂಗಳೂರು: ರಾಜ್ಯದ ಅನಧಿಕೃತ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪರೀಕ್ಷೆಗಳು ಮುಗಿಯುತ್ತಿದ್ದಂತೆ ಆ ಅನಧಿಕೃತ ಶಾಲೆಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಲಿದೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾತನಾಡಿ, ರಾಜ್ಯದ ಎಲ್ಲ ಜಿಲ್ಲೆಗಳ ಅನಧಿಕೃತ ಶಾಲೆಗಳ ಪಟ್ಟಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ. ಆದರೆ, ಸದ್ಯ ಪರೀಕ್ಷೆಗಳು ಆರಂಭವಾಗುತ್ತಿವೆ. ಈ ಸಂದರ್ಭದಲ್ಲಿ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳುವುದರಿಂದ ಮಕ್ಕಳಿಗೆ ಸಮಸ್ಯೆಯಾಗಬಹುದು. ಹಾಗಾಗಿ ಪರೀಕ್ಷೆಗಳು ಮುಗಿದ ಬಳಿಕ ಆ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈ ವೇಳೆ ಮಕ್ಕಳ ಭವಿಷ್ಯಕ್ಕೆ ಸಮಸ್ಯೆಯಾಗದಂತೆ ಎಚ್ಚರಿಕೆಯನ್ನೂ ವಹಿಸಲಾಗುವುದು. ಅಲ್ಲದೆ, 2023-24ನೇ ಶೈಕ್ಷಣಿಕ ವರ್ಷದಿಂದ ಜಿಲ್ಲಾವಾರು ಅನಧಿಕೃತ ಶಾಲೆಗಳ ಪಟ್ಟಿಯನ್ನು ಇಲಾಖೆ ವೆಬ್‌ಸೈಟ್‌ನಲ್ಲೇ ಪ್ರಕಟಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.