4 ವಾರಗಳು ಮಾತ್ರ ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ: ಸುಧಾಕರ್
Team Udayavani, Feb 3, 2021, 7:36 PM IST
ಬೆಂಗಳೂರು: ನಾಲ್ಕು ವಾರಗಳ ಮಟ್ಟಿಗೆ ಮಾತ್ರ 100% ಪ್ರೇಕ್ಷಕರಿಗೆ ಸಿನಿಮಾ ವೀಕ್ಷಣೆ ಮಾಡಲು ಅವಕಾಶ ನೀಡಲಾಗುವುದು. ಈ ನಾಲ್ಕು ವಾರದಲ್ಲಿ ಸೊಂಕು ಹೆಚ್ಳವಾದರೆ, ಮಾರ್ಗಸೂಚಿಯಲ್ಲಿ ಬದಲಾವಣೆ ತರಲಾಗುವುದು. ಸದ್ಯ ಕಠಿಣ ಷರತ್ತು ಮೂಲಕ ಅವಕಾಶ ನೀಡಲಾಗಿದೆ. ನಾಳೆ (ಫೆ.4) ನಮ್ಮ ಅಧಿಕಾರಿಗಳು ಈ ಬಗ್ಗೆ ಮಾರ್ಗಸೂಚಿ ಪ್ರಕಟಿಸುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
ಕನ್ನಡ ಚಲನಚಿತ್ರ ಮಂದಿರಗಳಲ್ಲಿ ಶೇಕಡಾ 100ರಷ್ಟು ಪ್ರವೇಶಾವಕಾಶ ನೀಡುವ ಸಂಬಂಧ ಸಮ್ಮೇಳನ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಸಿ.ಸಿ. ಪಾಟೀಲ್ ಮತ್ತು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿದರು. ಈ ಸಂದರ್ಭದಲ್ಲಿ ನಟ ಶಿವರಾಜಕುಮಾರ್, ಚಲನಚಿತ್ರ ಮಂಡಳಿ ಅಧ್ಯಕ್ಷ ಶ್ರೀ ಜಯರಾಜ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಖ್ಯಾತ ಪಾಪ್ ತಾರೆ ರಿಹಾನಾ v/s ಕಂಗನಾ ?
ಸಚಿವ ಸಿಸಿ ಪಾಟೀಲ್ ಮಾತನಾಡಿ, ನಾಳೆ ಸಂಜೆಯೊಳಗೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಹೊರಡಿಸಲಾಗುತ್ತದೆ. ಶುಕ್ರವಾರದಿಂದ 100% ಸಿನಿಮಾ ವೀಕ್ಷಣೆಗೆ ಅವಕಾಶ ನೀಡಲಾಗುವುದು. ನಾವು ಸಹ ಒಂದು ವರ್ಷದಿಂದ ಚಿತ್ರಮಂದಿರಕ್ಕೆ ಕಾಲಿಟ್ಟಿಲ್ಲ. ಅದಷ್ಟು ಬೇಗ ಶಿವರಾಜ್ ಕುಮಾರ್ ಚಿತ್ರ ಬರಲಿ. ನಾವು ಚಿತ್ರ ಮಂದಿರಕ್ಕೆ ಹೋಗಿ ಚಿತ್ರ ವೀಕ್ಷಣೆ ಮಾಡುತ್ತೇವೆ ಎಂದು ಸಭೆಯಲ್ಲಿ ಚಿತ್ರೋದ್ಯಮಕ್ಕೆ ಸಿ.ಸಿ ಪಾಟೀಲ್ ಶುಭ ಹಾರೈಸಿದರು.
ನಂತರ ಮಾತನಾಡಿದ ನಟ ಶಿವರಾಜ್ ಕುಮಾರ್, ಸಭೆಯ ಆರಂಭದಲ್ಲಿ ನಾವು ಸಹ ಮಾತುಕತೆ ನಡೆಸಿದ್ದೆವು. ಯಾವ ಕಾರಣಕ್ಕಾಗಿ 50% ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ನಾವೂ ಕೂಡ 100% ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡುವ ಕುರಿತು ಮಾಹಿತಿ ನೀಡಿದೆವು. ಕೊನೆಗೆ ಹೌಸ್ ಫುಲ್ ಪ್ರದರ್ಶನಕ್ಕೆ ಒಪ್ಪಿಗೆ ನೀಡಲಾಗಿದೆ. ಮುಂದಿನ ದಿನದಲ್ಲಿ ಯಾವುದೇ ತೊಂದರೆ ಬಾರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ: ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.