ನಾಳೆಯಿಂದ ಖಾಸಗಿ ಆಸ್ಪತ್ರೆ OPD ಬಂದ್, ಸರ್ಕಾರಿ ವೈದ್ಯರ ರಜೆ ರದ್ದು
Team Udayavani, Nov 15, 2017, 3:27 PM IST
ಬೆಂಗಳೂರು/ಬೆಳಗಾವಿ:ಖಾಸಗಿ ಆಸ್ಪತ್ರೆಗಳ ವೈದ್ಯರ ಮತ್ತು ರಾಜ್ಯ ಸರ್ಕಾರದ ನಡುವಿನ ತಿಕ್ಕಾಟ ಮುಂದುವರಿದಿದ್ದು, ನಾಳೆಯಿಂದ(ಗುರುವಾರ) ಆರು ಸಾವಿರ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಆಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಘ ತಿಳಿಸಿದೆ.
ನಾಳೆ ಬೆಳಗ್ಗೆ 8ಗಂಟೆಯಿಂದ ಖಾಸಗಿ ಆಸ್ಪತ್ರೆಯ ಹೊರರೋಗಿಗಳ ವಿಭಾಗ ಬಂದ್ ಆಗಲಿದ್ದು, ಎಮರ್ಜೆನ್ಸಿ ಚಿಕಿತ್ಸೆಗಳು ಎಂದಿನಂತೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಖಾಸಗಿ ವೈದ್ಯಕೀಯ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ ಬೆಳಗಾವಿಯಲ್ಲಿ ವೈದ್ಯರುಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೆ ಸಾವನ್ನಪ್ಪಿದವರ ಸಂಖ್ಯೆ 14ಕ್ಕೇರಿದೆ.
ವಿಜಯಪುರದ 120 ಖಾಸಗಿ ಆಸ್ಪತ್ರೆಗಳ ವೈದ್ಯರು ತುರ್ತು ಚಿಕಿತ್ಸೆ, ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ ಬೆಳಗಾವಿಯಲ್ಲಿ ನಡೆಯುವ ವೈದ್ಯರ ಮುಷ್ಕರಕ್ಕೆ ತೆರಳಿದ್ದಾರೆ. ಒಟ್ಟು ಜಿಲ್ಲೆಯಿಂದ 460 ಖಾಸಗಿ ವೈದ್ಯರು ಬೆಳಗಾವಿಗೆ ತೆರಳಿದ್ದು, ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳ ಮುಂದೆ ವೈದ್ಯಕೀಯ ಸೇವೆ ಇಲ್ಲ ಎಂದು ಬೋರ್ಡ್, ಬ್ಯಾನರ್ ಹಾಕಲಾಗಿತ್ತು. ಮಂಗಳವಾರದ ವರೆಗೆ ಹೊರ ರೋಗಿಗಳಿಗೆ ಚಿಕಿತ್ಸೆ ಬಂದ್ ಮಾಡಲಾಗಿತ್ತು,
ಬೆಳಗಾವಿಯಲ್ಲಿ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲವಾಗಿ ನಾಳೆ ಆರು ಸಾವಿರ ಖಾಸಗಿ ಆಸ್ಪತ್ರೆಯ ಒಪಿಡಿ ಬಂದ್ ಮಾಡಿ, 22 ಸಾವಿರ ವೈದ್ಯರುಗಳು ಬೆಂಬಲ ನೀಡುವುದಾಗಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆ ವೈದ್ಯರ ರಜೆ ರದ್ದು;
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ರಜೆಯನ್ನು ರದ್ದು ಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.