ಬಿಸಿಯೂಟ ಕಾರ್ಯಕರ್ತರ ಪ್ರತಿಭಟನೆಗೆ ತೆರೆ
Team Udayavani, Feb 10, 2018, 6:00 AM IST
ಬೆಂಗಳೂರು: ಬಿಸಿಯೂಟ ಕಾರ್ಯಕರ್ತರ ಬೇಡಿಕೆಗಳಿಗೆ ಕೊನೆಗೂ ಸರ್ಕಾರ ಸ್ಪಂದಿಸಿದೆ. ಇದರೊಂದಿಗೆ ಕನಿಷ್ಠ ವೇತನ ಹಾಗೂ ಇತರೆ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ನಾಲ್ಕುದಿನಗಳಿಂದ ನಗರದ ಸ್ವಾತಂತ್ಯ ಉದ್ಯಾನವನದಲ್ಲಿ ಆಹೋರಾತ್ರಿ ನಡೆಯುತ್ತಿದ್ದ ಪ್ರತಿಭಟನೆಗೆ ತೆರೆ ಬಿದ್ದಿದೆ.
ಬಿಸಿಯೂಟ ಕಾರ್ಯಕರ್ತರ ಆಹೋರಾತ್ರಿ ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗುವ ಮುನ್ಸೂಚನೆ ಕಂಡುಬಂದ ಹಿನ್ನೆಲೆಯಲ್ಲಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕರ್ತರ ಸಂಘಟನೆ ಪ್ರಮುಖರೊಂದಿಗೆ ಶುಕ್ರವಾರ ಸಂಜೆ ಸಭೆ ನಡೆಸಿದರು. ಶೀಘ್ರದಲ್ಲೇ ಬಜೆಟ್ ಇರುವುದರಿಂದ ಈ ಹಂತದಲ್ಲಿ ವೇತನ ಹೆಚ್ಚಳ ಘೋಷಣೆ ಮಾಡಲು ಸಾಧ್ಯವಿಲ್ಲ. ಅಲ್ಲದೆ, ಕನಿಷ್ಠ ವೇತನ ನೀಡುವುದೂ ಅಸಾಧ್ಯ. ಆದರೆ, ನಿಮ್ಮ ವೇತನ ಹೆಚ್ಚಳ ಬೇಡಿಕೆಯನ್ನು ಬಜೆಟ್‌ನಲ್ಲಿ ಪ್ರಸ್ತಾಪಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಉಳಿದಂತೆ ಪಿಂಚಣಿ ನೀಡುವ ಬಗ್ಗೆ ಕಾರ್ಮಿಕ ಇಲಾಖೆ ಜತೆ ಚರ್ಚಿಸಲಾಗುವುದು. ರಾಜ್ಯ ಸರ್ಕಾರದ ಸಾರ್ವತ್ರಿಕ ಆರೋಗ್ಯ ವಿಮೆ ಶೀಘ್ರದಲ್ಲೇ ಜಾರಿಯಾಗುವುದರಿಂದ ವಿಮೆ ಸೌಲಭ್ಯ ಸಿಕ್ಕಂತಾಗುತ್ತದೆ. ದೌರ್ಜನ್ಯ ತಡೆ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದಾದ ಬಳಿಕ ಮುಖಂಡರೊಂದಿಗೆ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಸಚಿವರು, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ನಿರ್ಧಾರ ಮತ್ತು ಮುಖ್ಯಮಂತ್ರಿಗಳು ನೀಡಿದ ಭರವಸೆಯ ಕುರಿತು ವಿವರಿಸಿದರು. ಇದಕ್ಕೆ ಒಪ್ಪಿದ ಬಿಸಿಯೂಟ ಕಾರ್ಯಕರ್ತರ ಅಹೋರಾತ್ರಿ ಪ್ರತಿಭಟನೆ ಹಿಂಪಡೆದಿದ್ದಾರೆ. ಆದರೆ, ಬಜೆಟ್‌ನಲ್ಲಿ ವೇತನ ಹೆಚ್ಚಳ ಕುರಿತು ಘೋಷಿಸದಿದ್ದಲ್ಲಿ ಮತ್ತೆ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಇದಕ್ಕೂ ಮುನ್ನ ಬೆಳಗ್ಗೆ ಪ್ರತಿಭಟನಾಕಾರರ ಜತೆ ಸಚಿವ ತನ್ವೀರ್ ಸೇಠ್ ಸಂಧಾನ ನಡೆಸಿದ್ದರಾದರೂ ಅದು ವಿಫಲವಾಗಿ
ಹೋರಾಟ ಮುಂದುವರಿಸಲು ಕಾರ್ಯಕರ್ತೆಯರು ನಿರ್ಧರಿಸಿದ್ದರು. ಆದರೆ, ಮುಖ್ಯಮಂತ್ರಿಗಳ ಭರವಸೆ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆದಿದ್ದಾರೆ. ಬೆಳಗ್ಗೆ ಶಿಕ್ಷಣ ಇಲಾಖೆ ಕಾರ್ಯದರ್ಶಿ ಶಾಲಿನಿ ರಜನೀಶ್ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಕರ್ತೆಯರ ಜತೆ ಮಾತುಕತೆ ನಡೆಸಿದ್ದರು. ನಂತರ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಹಾಗೂ ಇತರೆ ಐವರು ಮುಖಂಡರೊಂದಿಗೆ ಸರ್ವಶಿಕ್ಷಣ ಅಭಿಯಾನ ಕಚೇರಿಯಲ್ಲಿ ಸಚಿವ ತನ್ವೀರ್ ಸೇಠ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು.
ಕಾರ್ಯಕರ್ತೆಯರು ಅಸ್ವಸ್ಥ: ಊಟವಿಲ್ಲದೇ, ನಿದ್ರೆಯಿಲ್ಲದೇ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತೆಯರ ಪೈಕಿ 10 ಮಹಿಳೆಯರು ಅಸ್ವಸ್ಥಗೊಂಡಿದ್ದರು. ಇವರನ್ನು ಕೂಡಲೇ ಆ್ಯಂಬುಲೆನ್ಸ್ ಮೂಲಕ ಕೆ.ಸಿ.ಜನರಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ, ಜತೆಗೆ ಅನಾರೋಗ್ಯ ಹಿನ್ನೆಲೆ ಇತರೆ 22ಕ್ಕೂ ಅಧಿಕ ಮಂದಿ ಕಾರ್ಯಕರ್ತೆಯರು ಆಸ್ಪತ್ರೆ ಸೇರಿದ್ದರು .
ಶೆಟ್ಟರ್ ಭೇಟಿ: ಬೆಳಗ್ಗೆ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಪ್ರತಿಪಕ್ಷ ನಾಯಕ ಜಗದೀಶ ಶೆಟ್ಟರ್, ಬಿಸಿಯೂಟ ಕಾರ್ಯಕರ್ತೆಯರು ನಾಲ್ಕು ದಿನವಾದರೂ ಸಚಿವರು ಮತ್ತು ಸರ್ಕಾರದ ಕಡೆಯಿಂದ ಯಾರೂ ಬಂದಿಲ್ಲ. ಇದು ಸರ್ಕಾರದ ವಿರೋಧಿ ಧೋರಣೆ ತೋರಿಸುತ್ತದೆ ಎಂದು ಆರೋಪಿಸಿದ್ದರು.
ವಿಧಾನಸಭೆಯಲ್ಲಿ ಬಿಸಿಯೂಟ : ಬಿಸಿಯೂಟದ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಶುಕ್ರವಾರ ವಿಧಾನಸಭೆಯಲ್ಲಿಯೂ ಚರ್ಚೆಯಾಗಿತ್ತು. ಸರ್ಕಾರ ಸ್ಪಂದಿಸದಿರುವುದಕ್ಕೆ ಬಿಜೆಪಿ,ಜೆಡಿಎಸ್ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಅವರ ಬೇಡಿಕೆ ನ್ಯಾಯಯುತವಾಗಿದ್ದು ಸರ್ಕಾರ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಕನಿಷ್ಠ ವೇತನ ನಿಗದಿಗೆ ಮಾಡಬೇಕೆಂದು ಒತ್ತಾಯಿಸಿದ್ದರು.
ಪೊಲೀಸ್ ಕಟ್ಟೆಚ್ಚರ: ಭಾರೀ ಭದ್ರತೆ
ಬಿಸಿಯೂಟ ಕಾರ್ಯಕರ್ತೆಯರು ಹಾಗೂ ಕಂದಾಯ ಇಲಾಖೆ ಗ್ರಾಮ ಸಹಾಯಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ.ಕೆ.ಸಿಂಗ್, ಡಿಸಿಪಿ ಅನುಚೇತ್, ಚೇತನ್ ಸಿಂಗ್ ರಾಥೋಡ್, ಶರಣಪ್ಪ ನೇತೃತ್ವದಲ್ಲಿ ಭಾರೀ ಭದ್ರತೆ ನೀಡಲಾಗಿದೆ. 5 ಮಂದಿ ಎಸಿಪಿ, 15 ಮಂದಿ ಇನ್‌ಸ್ಪೆಕ್ಟರ್, 700ಕ್ಕೂ ಅಧಿಕ ಮಂದಿ ಪೊಲೀಸ್ ಪೇದೆಗಳು, 200 ಮಹಿಳಾ ಪೇದೆಗಳು, 2 ವಾಟರ್‌ಜೆಟ್, 5 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿತ್ತು.
ಸಂಘಟನೆಗಳಿಂದ ಆಹಾರ ವಿತರಣೆ
ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಕಾರ್ಯಕರ್ತರಿಗೆ ಅಂಬೇಡ್ಕರ್ ಸೇನೆ, ಸಾಮಾಜಿಕ ಸೇವಾ ಸಂಸ್ಥೆ ಹಾಗೂ ಪರಿಷತ್ ಸದಸ್ಯ ಶರವಣ ಸೇರಿದಂತೆ ವಿವಿಧ ಸಂಘಟನೆ ಕಾರ್ಯಕರ್ತರು ಆಹಾರ ಹಾಗೂ ನೀರು ವಿತರಿಸಿದ್ದರು. ಪ್ರತಿಭಟನಾ ನಿರತರಿಗಾಗಿ ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿತ್ತು.
ರಾಜ್ಯ ಸರ್ಕಾರ 1,600 ರೂ. ಕೇಂದ್ರ ಸರ್ಕಾರ 600 ರೂ. ಒಟ್ಟು 2,200 ರೂ. ವೇತನ ನಿಗದಿ ಮಾಡಲಾಗಿದೆ. ಎಐಟಿಯುಸಿ ಮತ್ತು ಟಿಐಸಿಯು ಸಂಘಟನೆಗಳು ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿವೆ. ಫೆ.16ರಂದು ರಾಜ್ಯದ ಬಜೆಟ್ ಮಂಡನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಾಗುವುದು. ಹಾಗೆಯೇ ಹೋರಾಟಗಾರರಲ್ಲಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದ್ದೇನೆ.
– ತನ್ವೀರ್ ಸೇಠ್ ಶಿಕ್ಷಣ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Belagavi: ಕಾಂಗ್ರೆಸ್ ಶಕ್ತಿ ಏನೆಂದು ನಮಗಿಂತ ಚೆನ್ನಾಗಿ ಬಿಜೆಪಿಯವರಿಗೆ ಗೊತ್ತಿದೆ: ಡಿಕೆಶಿ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Madikeri: ರಾಜ್ಯದಲ್ಲೇ ಮೊಟ್ಟಮೊದಲ ಮೂಳೆ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಹೊತ್ತಿ ಉರಿದ ಲಾರಿ… ಅಪಾರ ಪ್ರಮಾಣದ ಸೊತ್ತು ಬೆಂಕಿಗಾಹುತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.