ಆಪರೇಷನ್‌ ಆಡಿಯೋ-2 ಸ್ಫೋಟ : ಹಾಸನ ಶಾಸಕ ಪ್ರೀತಂ ಆಪ್ತನಿಗೆ ಕಲ್ಲೇಟು

Team Udayavani, Feb 13, 2019, 11:56 PM IST

100.jpg

ಬೆಂಗಳೂರು: ಮೊದಲ ಆಡಿಯೋ ಬಿಡುಗಡೆ ಪ್ರಕರಣವನ್ನು ಎಸ್‌ಐಟಿಗೆ ವಹಿಸಬೇಕೋ ಅಥವಾ ಸದನ ಸಮಿತಿ, ನ್ಯಾಯಾಂಗ ತನಿಖೆ ಮಾಡಿಸಬೇಕೋ ಎಂಬ ಗೊಂದಲಗಳ ನಡುವೆಯೇ ಬುಧವಾರ ಮತ್ತೂಂದು ‘ಆಪರೇಷನ್‌ ಆಡಿಯೋ’ ಬಿಡುಗಡೆಯಾಗಿದ್ದು, ರಾಜಕೀಯ ಸಂಚಲನವೇ ಸೃಷ್ಟಿಯಾಗಿದೆ. ಈ ಆಡಿಯೋ ಬಿಡುಗಡೆಯಾದ ಬೆನ್ನಲ್ಲೇ ಹಾಸನದ ಬಿಜೆಪಿ ಶಾಸಕ ಪ್ರೀತಂ ಗೌಡ ನಿವಾಸದ ಮೇಲೆ ದಾಳಿ ನಡೆದಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿ ಮತ್ತೂಂದು ಸ್ವರೂಪ ಪಡೆದಂತಾಗಿದೆ. ಜತೆಯಲ್ಲೇ ರಾಜ್ಯ ಸರ್ಕಾರವನ್ನು ತುದಿಗಾಲಲ್ಲಿ ನಿಲ್ಲಿಸಿದ್ದ ಅತೃಪ್ತ ಶಾಸಕರೆಲ್ಲರೂ ಸದನಕ್ಕೆ ಹಾಜರಾಗಿದ್ದು, ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ನಿರಾಳತೆ ಬಂದಿದೆ.

ಈ ಮಧ್ಯೆ, ಮೊದಲ ಆಡಿಯೋ ಬಿಡುಗಡೆ ಪ್ರಕರಣದ ತನಿಖೆಯನ್ನು ಯಾರು ಮಾಡಬೇಕು ಎಂಬ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವ ಸಂಬಂಧ ಸ್ಪೀಕರ್‌ ರಮೇಶ್‌ಕುಮಾರ್‌ ಅವರು ಕರೆದಿದ್ದ ಆಡಳಿತ, ಪ್ರತಿಪಕ್ಷ ನಾಯಕರ ಸಭೆ ವಿಫ‌ಲವಾಗಿದ್ದು, ಎಸ್‌ಐಟಿ ತನಿಖೆಯೇ ಖಚಿತವಾಗಿದೆ. ಮಧ್ಯಾಹ್ನ 12ರ ಹೊತ್ತಿಗೆ ವಿಧಾನಸಭೆ ಕಲಾಪ ಆರಂಭವಾದರೂ, ಬಿಜೆಪಿ ಶಾಸಕರ ಪ್ರತಿಭಟನೆಯಿಂದಾಗಿ ಮುಂದೂಡಬೇಕಾಯಿತು. ಮಧ್ಯಾಹ್ನ 4.05ಕ್ಕೆ ಮರಳಿ ಆರಂಭವಾದರೂ, ಪ್ರೀತಂ ಗೌಡ ನಿವಾಸದ ಮೇಲೆ ಹಲ್ಲೆ ನಡೆದ ಸಂಬಂಧ ಬಿಜೆಪಿ ಶಾಸಕರು ಪ್ರತಿಭಟನೆ ತೀವ್ರಗೊಳಿಸಿದ ಹಿನ್ನೆಲೆಯಲ್ಲಿ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಯಿತು.

ಎರಡನೇ ಆಡಿಯೋದಲ್ಲೇನಿದೆ: ಗುರುಮಿಠಕಲ್‌ ಶಾಸಕ ನಾಗನಗೌಡ ಅವರ ಪುತ್ರ ಶರಣುಗೌಡ ಅವರೊಂದಿಗೆ ಆಪರೇಷನ್‌ ಕಮಲ ಸಂಬಂಧ ಯಡಿಯೂರಪ್ಪ ನಡೆಸಿದ್ದಾರೆ ಎನ್ನಲಾದ ಮಾತುಕತೆ ಆಡಿಯೋದಲ್ಲಿ ಸ್ಪೀಕರ್‌, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಲಘುವಾಗಿ ಹೇಳಿಕೆ ನೀಡಲಾಗಿದೆ.

ಯಡಿಯೂರಪ್ಪ, ಶಿವನಗೌಡ ನಾಯಕ್‌,ಶರಣುಗೌಡ, ಪ್ರೀತಂಗೌಡ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಸರ್ಕಾರ ರಚನೆ ಮಾಡುವ ಮಾತುಗಳು ನಡೆಯುತ್ತವೆ. ಗುರುಮಿಠಕಲ್‌ ಶಾಸಕರ ಪುತ್ರನಿಗೆ ಸಚಿವ ಸ್ಥಾನದ ಆಮಿಷ ಹಾಗೂ 10 ರಿಂದ 20 ಕೋಟಿ ರೂ. ಆಮಿಷದ ಚರ್ಚೆ ನಡೆದಿದೆ.

ಕಲಾಪ ಮುಂದೂಡಿಕೆ: ಆಡಿಯೋಗಳ ಬಿಡುಗಡೆ ಪ್ರಕರಣ ಹಾಗೂ ಹಾಸನದ ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸದ ಮೇಲಿನ ದಾಳಿ ಬುಧವಾರ ಎರಡೂ ಸದನಗಳಲ್ಲಿ ಪ್ರಸ್ತಾಪಗೊಂಡಿತು. ಸದನದಲ್ಲಿ ಗದ್ದಲ-ಕೋಲಾಹಲ ಉಂಟಾಗಿದ್ದರಿಂದ ಸದನ ಗುರುವಾರಕ್ಕೆ ಮುಂದೂಡಲಾಯಿತು. ವಿಧಾನ ಪರಿಷತ್‌ನಲ್ಲೂ ಮಧ್ಯಾಹ್ನದ ನಂತರ ಇದೇ ವಿಚಾರವಾಗಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿ ಚರ್ಚೆಗೆ ಆಗ್ರಹಿಸಿದರು. ಇದರಿಂದಾಗಿ ಗದ್ದಲ ಉಂಟಾಗಿ ಅಲ್ಲೂ ಕಲಾಪ ಮುಂದೂಡುವಂತಾಯಿತು.

ಅತೃಪ್ತ ಶಾಸಕರ ಹಾಜರಿ: ಕಾಂಗ್ರೆಸ್‌ನ 4 ಅತೃಪ್ತ ಶಾಸಕರು ಹಾಗೂ ಇಬ್ಬರು ಪಕ್ಷೇತರರು ಬುಧವಾರ ವಿಧಾನಸಭೆ ಕಲಾಪಕ್ಕೆ ಹಾಜರಾದರು. ರಮೇಶ್‌ ಜಾರಕಿಹೊಳಿ, ಮಹೇಶ್‌ ಕುಮಠಳ್ಳಿ,ಬಿ.ನಾಗೇಂದ್ರ, ಡಾ. ಉಮೇಶ್‌ ಜಾಧವ್‌, ಹಾಗೂ ಆರ್‌.ಶಂಕರ್‌ ಹಾಗೂ ನಾಗೇಶ್‌ ಬಂದರು. ಜೆಡಿಎಸ್‌ ಶಾಸಕ ನಾರಾಯಣಗೌಡ ಕೂಡ ಸದನಕ್ಕೆ ಹಾಜರಾದರು.

4 ಶಾಸಕರ ನಡೆ ಇನ್ನೂ ನಿಗೂಢ
ಅತೃಪ್ತ ಶಾಸಕರ ನಡೆ ಇನ್ನೂ ನಿಗೂಢವಾಗಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಇವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಡಿ ಶಾಸಕ ಸ್ಥಾನದಿಂದ ಉಚ್ಚಾಟನೆ ಆಗುವುದನ್ನು ತಪ್ಪಿಸಿಕೊಳ್ಳಲು ಬುಧವಾರ ಕಲಾಪಕ್ಕೆ ಹಾಜರಾಗಿದ್ದರು ಎನ್ನಲಾಗಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಉಮೇಶ್‌ ಜಾಧವ್‌ ಹಾಗೂ ರಮೇಶ್‌ ಜಾರಕಿಹೊಳಿ ರಾಜಿನಾಮೆ ನೀಡುವ ಸಾಧ್ಯತೆ ಹೆಚ್ಚಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಮಧ್ಯೆ, ಬುಧವಾರ ಸಂಜೆಯೇ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪಕ್ಷೇತರ ಶಾಸಕ ನಾಗೇಶ್‌, ಸರ್ಕಾರಕ್ಕೆ ಬೆಂಬಲ ಮುಂದುವರಿಸುವುದಾಗಿ ಹೇಳಿದ್ದಾರೆ.

ಸ್ಪೀಕರ್‌ ರಮೇಶ್‌ ಕುಮಾರ್‌ ಸಂಧಾನ ವಿಫ‌ಲ
ಆಪರೇಷನ್‌ ಆಡಿಯೋ ಪ್ರಕರಣದ ತನಖೆಗೆ ವಹಿಸುವ ಕುರಿತಂತೆ ಸದನ ನಾಯಕರ ಸಭೆಯಲ್ಲಿ
ಒಮ್ಮತ ಮೂಡಿಸುವಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ನಡೆಸಿದ ಸಂಧಾನ ವಿಫ‌ಲವಾಗಿದೆ. ಸ್ಪೀಕರ್‌
ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರತಿಪಕ್ಷ ನಾಯಕ ಯಡಿಯೂರಪ್ಪ ಸೇರಿ ಬಿಜೆಪಿ
ಸದಸ್ಯರು ಎಸ್‌ಐಟಿ ಬೇಡ, ನ್ಯಾಯಾಂಗ ತನಿಖೆ ಅಥವಾ ಸದನ ಸಮಿತಿ ರಚಿಸಿ ಎಂದು ಮನವಿ
ಮಾಡಿದರು. ಆದರೆ, ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್‌ ಎಸ್‌ಐಟಿಗೆ ಪಟ್ಟು ಹಿಡಿದರು ಎನ್ನಲಾಗಿದೆ. ಒಂದು ಹಂತದಲ್ಲಿ ಸ್ಪೀಕರ್‌ ರಮೇಶ್‌ ಕುಮಾರ್‌ ಯಾರಾದರೂ ನಿಮ್ಮ ನಿಲುವು ಸಡಿಲಗೊಳಿಸಿ ಸುಗಮ ಕಲಾಪ ನಡೆಸಲು ಅವಕಾಶ ಕಲ್ಪಿಸಿ ಎಂದು ಸಲಹೆ ನೀಡಿದ್ದರು ಎಂದು ಹೇಳಲಾಗಿದ್ದು, ಸಿಎಂ ಕುಮಾರಸ್ವಾಮಿ ಸ್ಪೀಕರ್‌ ಸಲಹೆಗೆ ಸಹಮತ ವ್ಯಕ್ತಪಡಿಸಿ, ಸದನ ಸಮಿತಿ ರಚನೆಗೆ ಒಲವು ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಆದರೆ, ಸಿದ್ದರಾಮಯ್ಯ ಅವರ ಆಕ್ಷೇಪದಿಂದಾಗಿ ಸ್ಪೀಕರ್‌ ಸಭೆಯನ್ನು ಮೊಟಕುಗೊಳಿಸಿದ್ದರು. ನಿಲುವು ಮರುಪರಿಶೀಲಿಸಲು 10 ನಿಮಿಷ ಸಮಯ ಕೊಟ್ಟಿದ್ದರು. ಎರಡನೇ ಬಾರಿ ಸಭೆ ಸೇರಿದಾಗಲೂ ಯಾರೊಬ್ಬರು ನಿಲುವು ಸಡಿಲಿಸದ ಕಾರಣ ಸ್ಪೀಕರ್‌ ಸಭೆಯನ್ನು ಮುಕ್ತಾಯಗೊಳಿಸಿದರು.

ಪ್ರೀತಂ ನಿವಾಸದ ಬಳಿ ದಾಂಧಲೆ
ಹಾಸನ:
ಮಾಜಿ ಪ್ರಧಾನಿ ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರ ಬಗ್ಗೆ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಜೆ.ಗೌಡ ಅವರು ಆಕ್ಷೇಪಾರ್ಹ ಮಾತನಾಡಿದ್ದಾರೆ ಎಂದು ಆಕ್ರೋಶಗೊಂಡ ಜೆಡಿಎಸ್‌ ಕಾರ್ಯಕರ್ತರು ಅವರ ನಿವಾಸದ ಬಳಿ ಬುಧವಾರ ಪ್ರತಿಭಟನೆ ನಡೆಸಿ, ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಧ್ಯಾಹ್ನ 12 ಗಂಟೆ ವೇಳೆಗೆ ಹಾಸನದ ವಿದ್ಯಾನಗರ ದಲ್ಲಿರುವ ಪ್ರೀತಂ ಗೌಡ ಅವರ ನಿವಾಸದ ಬಳಿ ಜಮಾಯಿಸಿದ್ದ ನೂರಾರು ಕಾರ್ಯಕರ್ತರು, ಬಹಿರಂಗ ಕ್ಷಮೆಗೆ ಒತ್ತಾಯಿಸಿದ್ದರು. ಇವರ ಮನವೊಲಿಕೆಗೆ ಪೊಲೀಸರು ಯತ್ನಿಸುತ್ತಿದ್ದಾಗಲೇ ಜೆಡಿಎಸ್‌ ಕಾರ್ಯಕರ್ತರ ಗುಂಪಿನಲ್ಲಿದ್ದವನೊಬ್ಬ ಕಲ್ಲೊಂದನ್ನು ಶಾಸಕರ ಮನೆಯಂಗಳದತ್ತ ಬೀಸಿದ. ಆ ಕಲ್ಲು ಬಿಜೆಪಿ ಕಾರ್ಯಕರ್ತ ರಾಹುಲ್‌ ಎಂಬುವರ ಬಲ ಕಣ್ಣಿನ ಹುಬ್ಬಿಗೆ ಬಡಿಯಿತು. ಗಾಯಗೊಂಡ ರಾಹುಲ್‌ ಅವರನ್ನು ಹಾಸನದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯರು ಚಿಕಿತ್ಸೆ ನೀಡಿದ್ದು, ಅದೃಷ್ಟಾವಶಾತ್‌ ಕಣ್ಣಿಗೆ ಅಪಾಯವಾಗಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಪಕ್ಷದ ಕಾರ್ಯಕರ್ತರು ಯಾವುದೇ ಪ್ರಚೋದನೆಗೆ ಒಳಗಾಗಬಾರದು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಬಾರದು.
– ಕುಮಾರಸ್ವಾಮಿ, ಸಿಎಂ

ಪ್ರೀತಂ ನಿವಾಸಕ್ಕೆ ನುಗ್ಗಿದವರು ದಾಂಧಲೆ ನಡೆಸಿ ಶಾಸಕರ ತಾಯಿಯನ್ನು ಎಳೆದಾಡಿದ್ದಾರೆ. ಇದಕ್ಕೆ ಕುಮಾರಸ್ವಾಮಿಯವರ ಕುಮ್ಮಕ್ಕು ಇದೆ.
– ಯಡಿಯೂರಪ್ಪ, ಬಿಜೆಪಿ ನಾಯಕ

ಜೆಡಿಎಸ್‌ ಕಾರ್ಯಕರ್ತರು ಹಾಗೂ ಕೆಲ ಗೂಂಡಾಗಳು ಮನೆಯಲ್ಲಿದ್ದ ತಂದೆ- ತಾಯಿ
ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

– ಪ್ರೀತಂ ಗೌಡ, ಬಿಜೆಪಿ ಶಾಸಕ

ಪ್ರೀತಂ ಗೌಡ ಆಪ್ತನ ಮೇಲೆ ಹಲ್ಲೆ: ಬಿಜೆಪಿಗೆ ಸಿಕ್ಕಿತು ಹೊಸ ಅಸ್ತ್ರ
ಆಡಿಯೋ ಪ್ರಕರಣವನ್ನು ಎಸ್‌ಐಟಿಗೆ ಬದಲಾಗಿ ಸದನ ಸಮಿತಿ ಅಥವಾ ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಎರಡೂ ದಿನ ಪಟ್ಟು ಹಿಡಿದಿದ್ದ ಬಿಜೆಪಿ ಇದೀಗ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ನಿವಾಸದ ಮೇಲೆ ಜೆಡಿಎಸ್‌ ಕಾರ್ಯಕರ್ತರು ನಡೆಸಿದ ದಾಳಿಯನ್ನೇ ಕೇಂದ್ರವಾಗಿಸಿ ಕೊಂಡು ಸರ್ಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿದೆ.

ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರು ಹಲವು ಶಾಸಕರೊಂದಿಗೆ ದಿಢೀರ್‌ ಹಾಸನಕ್ಕೆ ತೆರಳಿದರು. ಪ್ರೀತಂ ಗೌಡ ನಿವಾಸಕ್ಕೆ ಹೋಗಿ, ಅವರ ಕುಟುಂಬಸ್ಥರಿಗೆ ಅಭಯ ತುಂಬಿದರು. ಈ ಮಧ್ಯೆ ಗುರುವಾರವೂ ಉಭಯ ಸದನಗಳಲ್ಲಿ ಶಾಸಕರ ನಿವಾಸದ ಮೇಲಿನ ದಾಳಿ ಘಟನೆಯನ್ನೇ ಪ್ರಮುಖ ವಿಚಾರವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿದೆ. ಅಲ್ಲದೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.