ಸಿದ್ದು ಔತಣಕೂಟದಲ್ಲೂ ಆಪರೇಷನ್ ಧ್ಯಾನ
Team Udayavani, Feb 6, 2019, 1:35 AM IST
ಬೆಂಗಳೂರು: ಅಧಿವೇಶನ ಹಿನ್ನೆಲೆಯಲ್ಲಿ ಪಕ್ಷದ ಸಚಿವರಿಗೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾ ಮಯ್ಯ ಏರ್ಪಡಿಸಿದ್ದ ವಿಶೇಷ ಭೋಜನಕೂಟದ ಲ್ಲಿಯೂ ಆಪರೇಷನ್ ಕಮಲದ್ದೇ ಮಾತು.
ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲ ಸಚಿವರೊಂದಿಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ನಾಲ್ವರು ಅತೃಪ್ತರಿಗೆ ನೋಟಿಸ್ ನೀಡಿದ್ದರೂ, ಅತೃಪ್ತರು ಯಾರೂ ನೇರವಾಗಿ ಬಂದು ಭೇಟಿಯಾಗಿಲ್ಲ. ಸದನದ ಕಲಾಪಕ್ಕೂ ಹಾಜರಾಗದೇ ಇದ್ದರೆ, ಪಕ್ಷದಿಂದ ಉಚ್ಚಾಟನೆ ಮಾಡಬೇಕಾ?, ಬೇಡವೇ ಎಂದು ಆಪ್ತರ ಜತೆ ಚರ್ಚಿಸಿದರು ಎಂದು ತಿಳಿದು ಬಂದಿದೆ.
ರಮೇಶ್ ಜಾರಕಿಹೊಳಿಯೊಂದಿಗೆ ಮಾತನಾ ಡಬೇಕೆಂದರೂ ಸಿಗುತ್ತಿಲ್ಲ. ಏನ್ರಿ ಸಾಹುಕಾರ್ರೆ ನಿಮಗಾದ್ರು ಸಿಕ್ಕಿದ್ದಾರಾ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿಯವರನ್ನು ಸಿದ್ದರಾಮಯ್ಯ ಪ್ರಶ್ನಿಸಿದರು. ನನಗಿಂತ ನಿಮಗೆ ಹೆಚ್ಚು ಮಾಹಿತಿ ಇದೆ, ನಾನೇನು ಹೇಳುವುದು ಎಂದು ಸತೀಶ್ ಜಾರಕಿಹೊಳಿ ಜಾರಿಕೊಂಡರು ಎಂದು ಹೇಳಲಾಗಿದೆ.
ಬಜೆಟ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿಗೆ ಸೂಚನೆ ನೀಡಿದ್ದೆ. ಇಲಾಖಾವಾರು ಸಭೆಗಳಲ್ಲಿ ನಿಮ್ಮ ಬೇಡಿಕೆ ಸಲ್ಲಿಸಿದ್ದೀರಾ?ಎಂದು ಸಚಿವರನ್ನು ಸಿದ್ದರಾ ಮಯ್ಯ ಪ್ರಶ್ನಿಸಿದರು. ಇದೇ ವೇಳೆ, ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಜಾರಿಯಾಗದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿ, ಲೋಕಸಭೆ ಚುನಾವಣೆ ಇರುವುದರಿಂದ ಬಜೆಟ್ ಅತ್ಯಂತ ಮಹತ್ವ ಪಡೆದುಕೊಂಡಿದೆ. ಎರಡೂ ಪಕ್ಷಗಳಿಗೆ ಲಾಭ ತರುವ ರೀತಿಯಲ್ಲಿ ಬಜೆಟ್ ಇದ್ದರೆ ಅನುಕೂಲ ಎಂದು ಹೇಳಿದರು ಎಂದು ತಿಳಿದು ಬಂದಿದೆ.
ರೆಸಾರ್ಟ್‌ನಲ್ಲಿ ಆನಂದ್ ಸಿಂಗ್ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ನಡುವೆ ನಡೆದ ಗಲಾಟೆ ಪಕ್ಷಕ್ಕೆ ಮುಜುಗರ ತಂದಿದ್ದು, ಬಿಜೆಪಿಯವರು ಸದನದಲ್ಲಿ ಅದನ್ನೇ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಅದನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸುವಂತೆ ಸೂಚಿಸಿದ್ದಾರೆ. ಇಬ್ಬರೂ ಒಳ್ಳೆಯ ಸ್ನೇಹಿತರೇ. ಕೆಟ್ಟ ಘಳಿಗೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಸಮಜಾಯಿಷಿ ನೀಡಿದರು. ಆಗ, ಅದನ್ನು ಸಮರ್ಥಿಸಿಕೊಳ್ಳಲು ಆಗುತ್ತಾ ಎಂದು ಸಿದ್ದರಾಮಯ್ಯ ಮರು ಪ್ರಶ್ನೆ ಮಾಡಿದರು ಎನ್ನಲಾಗಿದೆ.
ಭೋಜನ ಕೂಟಕ್ಕೆ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಹಾಗೂ ಕೃಷಿ ಸಚಿವ ಶಿವಶಂಕರ ರೆಡ್ಡಿ ತಡವಾಗಿ ಆಗಮಿಸಿದರು. ಆರೋಗ್ಯ ಸಮಸ್ಯೆಯಿಂದ ಸಚಿವರಾದ ಸಿ.ಎಸ್.ಶಿವಳ್ಳಿ ಹಾಗೂ ಎಂ.ಟಿ.ಬಿ.ನಾಗರಾಜ್ ಸಭೆಯಿಂದ ಬೇಗ ತೆರಳಿದರು.
ನೋ ಡ್ರಿಂಕ್ಸ್: ರೆಸಾರ್ಟ್‌ನಲ್ಲಿ ಕೈ ಶಾಸಕರಿಬ್ಬರು ಹೊಡೆದಾಡಿಕೊಂಡಿದ್ದರಿಂದ ಸಿದ್ದರಾಮಯ್ಯ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಸಚಿವರಿಗೆ ಮದ್ಯಪಾನ ವ್ಯವಸ್ಥೆ ಇರಲಿಲ್ಲ ಎಂದು ಹೇಳಲಾಗಿದೆ.
ಕಾಂಗ್ರೆಸ್ ರಾಜ್ಯ ಕಾರ್ಯಕಾರಿಣಿ ಇಂದು
ಬೆಂಗಳೂರು: ರಾಜ್ಯ ಕಾಂಗ್ರೆಸ್ ಕಾರ್ಯಕಾ ರಿಣಿ ಸಭೆ ಬುಧವಾರ ನಗರದ ಅರಮನೆ ಮೈದಾನದಲ್ಲಿ ನಡೆಯಲಿದೆ. ಪಕ್ಷದ ಶಾಸಕರು, ಸಚಿವರು, ಸಂಸದರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಸೇರಿ ಎಲ್ಲಾ ಮುಂಚೂಣಿ ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡು ಸ್ಪರ್ಧೆ ಮಾಡಲು ನಿರ್ಧರಿಸಿರುವುದರಿಂದ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಅಗತ್ಯ ಕಾರ್ಯತಂತ್ರ ರೂಪಿಸುವುದು. ಜಿಲ್ಲಾಮಟ್ಟದಲ್ಲಿ ಜೆಡಿಎಸ್ ಜೊತೆಗೆ ಗೊಂದಲ ಸೃಷ್ಠಿಸಿಕೊಳ್ಳದೇ ಹೊಂದಾಣಿಕೆಯಿಂದ ಚುನಾವಣೆಯಲ್ಲಿ ಕಾರ್ಯ ನಿರ್ವಹಿಸುವ ಕುರಿತು ಪಕ್ಷದ ಮುಖಂಡರಿಗೆ ಸಲಹೆ ಸೂಚನೆ ನೀಡುವ ಸಾಧ್ಯತೆ ಇದೆ. ಪರಮೇಶ್ವರ್ ಭೋಜನ ಕೂಟ: ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪಕ್ಷದ ಸಚಿವರಿಗೆ ಭೋಜನ ಕೂಟ ಏರ್ಪಡಿಸಿದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎರಡೂ ಪಕ್ಷಗಳ ಸಚಿವರು ಹಾಗೂ ಶಾಸಕರಿಗೆ ವಿಶೇಷ ಭೋಜನ ಕೂಟ ಏರ್ಪಡಿಸಿದ್ದಾರೆ. ಭೋಜನ ಕೂಟದ ಬೆನ್ನಲ್ಲೇ ಜಂಟಿ ಶಾಸಕಾಂಗ ಪಕ್ಷದ ಸಭೆಯನ್ನೂ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದರು. ಆದರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಂದ ಅಧಿಕೃತ ಒಪ್ಪಿಗೆ ದೊರೆಯದ ಹಿನ್ನೆಲೆಯಲ್ಲಿ ಗುರುವಾರ ನಡೆಸಲು ಉದ್ದೇಶಿಸಿದ್ದ ಜಂಟಿ ಶಾಸಕಾಂಗ ಸಭೆಯನ್ನು ಮುಂದೂಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.