ನೇರ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಅವಕಾಶ: ಸಿಎಂ
ಹಾಲ್ ಆಫ್ ಫೇಮ್ ಉದ್ಘಾಟನೆ
Team Udayavani, Dec 12, 2020, 10:51 PM IST
ಬೆಂಗಳೂರು: ಪೊಲೀಸ್, ಅರಣ್ಯ, ಆರೋಗ್ಯ ಮೊದಲಾದ ಇಲಾಖೆಗಳ ನೇರ ನೇಮಕಾತಿಯಲ್ಲಿ ಕ್ರೀಡಾಪಟು ಗಳಿಗೆ ಶೇ. 2ರಷ್ಟು ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಕರ್ನಾಟಕ ಒಲಿಂಪಿಕ್ ಸಂಸ್ಥೆ ವತಿಯಿಂದ ನಗರದ ಒಲಿಂಪಿಕ್ ಭವನದಲ್ಲಿ ಆಯೋಜಿಸಿದ್ದ ಹಾಲ್ ಆಫ್ ಫೇಮ್ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಹಲವು ಕಾರ್ಯಕ್ರಮವನ್ನು ಸರಕಾರ ಈಗಾಗಲೇ ಅನುಷ್ಠಾನಕ್ಕೆ ತಂದಿದೆ. ಪೊಲೀಸ್ ಇಲಾಖೆಯಲ್ಲಿ ಶೇ.2ರಷ್ಟು ನೇರ ನೇಮಕ ಮಾಡಲು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಅದೇ ರೀತಿ ಸರಕಾರದ ಕೆಲವು ಇಲಾಖೆ, ಲಾಭದಾಯಕ ನಿಗಮ ಮಂಡಳಿಗಳಲ್ಲಿ ಕ್ರೀಡಾಪಟುಗಳ ನೇರ ನೇಮಕಾತಿಗೆ ಅವಕಾಶ ನೀಡುವ ಬಗ್ಗೆ ಎಲ್ಲ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಭರವಸೆ ನೀಡಿದರು.
ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅಗತ್ಯ
ರಾಜ್ಯಪಾಲ ವಿ. ಆರ್. ವಾಲಾ ಮಾತನಾಡಿ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ಅತಿ ಅಗತ್ಯವಾಗಿದೆ. ಭಾರತದಲ್ಲಿ ಉತ್ತಮ ಕ್ರೀಡಾಪಟುಗಳ ಕೊರತೆ ಇಲ್ಲ. ಬದಲಾಗಿ ಅವಕಾಶಗಳ ಕೊರತೆ ಇದೆ. ಕ್ರೀಡಾಪಟುಗಳಿಗೆ ಸೂಕ್ತ ಅವಾಶಕ ಕಲ್ಪಿಸಿ, ಪ್ರೋತ್ಸಾಹಿಸುವ ಜವಾಬ್ದಾರಿ ಆಯಾ ರಾಜ್ಯ ಸರಕಾರಗಳ ಮೇಲಿದೆ ಎಂದು ಹೇಳಿದರು.
ಕ್ರೀಡೆಗೆ ಪ್ರೋತ್ಸಾಹ ನೀಡಲು ಹಣಕಾಸಿನ ಕೊರತೆ ಉಂಟಾದಾಗ ರಾಜ್ಯ ಸರಕಾರ, ಉದ್ಯಮಿಗಳು, ಕೈಗಾರಿಕೋದ್ಯಮಿಗಳು ತಮ್ಮಲ್ಲಿರುವ ಹಣದ ಶೇ.1 ಭಾಗವನ್ನು ಕ್ರೀಡೆಯ ಉನ್ನತೀಗಾಗಿ ಮೀಸಲಿಡಬೇಕು. ಅಥವಾ ಅವರಿಗೆ ಉದ್ಯೋಗಾವಕಾಶ ನೀಡಬೇಕು ಎಂದು ಸಲಹೆ ನೀಡಿದರು.
ಕ್ರಿಕೆಟ್ ಶ್ರೀಮಂತರ ಆಟ: ಖರ್ಗೆ
ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಕ್ರಿಕೆಟ್ ಶ್ರೀಮಂತರ ಆಟವಾಗಿದೆ. ಸಾಮಾನ್ಯರಿಗೆ ಸುಲಭವಾಗಿ ಸಿಗುವ ಕಬಡ್ಡಿ, ಹಾಕಿ ಮೊದಲಾದ ಕ್ರೀಡಿಗೆ ಹೆಚ್ಚಿನ ಪ್ರೋತ್ಸಾಹ ಸಿಗಬೇಕಿದೆ ಎಂದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಉಪಮುಖ್ಯಮಂತ್ರಿ ಡಾ| ಸಿ.ಎನ್.ಅಶ್ವತ್ಥನಾರಾಯಣ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಅಧ್ಯಕ್ಷ ಕೆ. ಗೋವಿಂದರಾಜ್, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್ ಮೊದಲಾದವರು ಇದ್ದರು.
ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹ ಕಡಿಮೆ ಎಂಬ ಸತ್ಯವನ್ನು ಒಪ್ಪಿಕೊಳ್ಳಬೇಕು. ಮನುಷ್ಯನ ಕ್ರಿಯಾಶೀಲತೆಗೆ ಕ್ರೀಡೆ ಅತಿ ಆವಶ್ಯಕವಾಗಿದ್ದು, ಕ್ರೀಡೆಗೆ ಮೊದಲ ಆದ್ಯತೆ ಸಿಗುವಂತಾಗಬೇಕು.
-ಡಾ| ಸಿ.ಎನ್.ಅಶ್ವತ್ಥ ನಾರಾಯಣ, ಉಪ ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.