ಜನತಾ ಪರಿವಾರದ ನಾಲ್ವರಿಗೆ ಅವಕಾಶ
Team Udayavani, Aug 21, 2019, 3:00 AM IST
ಬೆಂಗಳೂರು: ಜನತಾಪರಿವಾರ ಮೂಲದ ನಾಲ್ವರು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಅನುಭವ ಹಾಗೂ ಹಿರಿತನದ ಆಧಾರದ ಮೇಲೆ ಅವಕಾಶ ಪಡೆದಿದ್ದಾರೆ. ಗೋವಿಂದ ಕಾರಜೋಳ, ಬಸವರಾಜ ಬೊಮ್ಮಾಯಿ, ಜೆ.ಸಿ.ಮಾಧುಸ್ವಾಮಿ, ವಿ.ಸೋಮಣ್ಣ ಅವರು ಸಚಿವರಾಗಿದ್ದಾರೆ.
ಗೋವಿಂದ ಕಾರಜೋಳ ಅವರು ಜನತಾಪರಿವಾರದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದು ರಾಮಕೃಷ್ಣ ಹೆಗಡೆ, ಜೆ.ಎಚ್.ಪಟೇಲ್, ಎಸ್.ಆರ್.ಬೊಮ್ಮಾಯಿ ಅವರಿಗೆ ಹತ್ತಿರವಾಗಿದ್ದರು. ಜನತಾದಳ ಇಬ್ಭಾಗದ ನಂತರ ವಿಜಯಪುರ-ಬಾಗಲಕೋಟೆ ಜಿಲ್ಲೆಗಳ ನಾಯಕರ ಜತೆ ಬಿಜೆಪಿ ಸೇರಿದ್ದರು. ಹಿಂದಿನ ಬಿಜೆಪಿ ಸರ್ಕಾರದಲ್ಲೂ ಸಚಿವರಾಗಿದ್ದರು.
ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಆವರು ಜನತಾದಳದಲ್ಲಿದ್ದು ಎಚ್.ಡಿ.ದೇವೇಗೌಡ, ಸಿದ್ದರಾಮಯ್ಯ, ಎಂ.ಪಿ.ಪ್ರಕಾಶ್ ಗರಡಿಯಲ್ಲಿ ಪಳಗಿದವರೇ. ಜನತಾದಳ ಇಬ್ಭಾಗವಾದಾಗ ಸಂಯುಕ್ತ ಜನತಾದಳದಲ್ಲಿ ಗುರುತಿಸಿಕೊಂಡು ನಂತರ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಜೆ.ಸಿ.ಮಾಧುಸ್ವಾಮಿ ಸಹ ಸಂಯುಕ್ತ ಜನತಾದಳದಲ್ಲಿದ್ದು ನಂತರ ಬಿಜೆಪಿ ಸೇರಿದ್ದರು. ವಿ.ಸೋಮಣ್ಣ ಅವರು ಜನತಾದಳದಿಂದ ಕಾಂಗ್ರೆಸ್‌ಗೆ ಹೋಗಿ ನಂತರ ಬಿಜೆಪಿ ಸೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.