ಸಿಎಂಗೆ ಟಿಪ್ಪು ದೆವ್ವ ಹಿಡಿದಿದೆ, ಈ ಸರ್ಕಾರದಿಂದ ಹಿಂದೂಗಳಿಗೆ ಮಾನಸಿಕ ಹಿಂಸೆ: ಅಶೋಕ್
Team Udayavani, Jun 13, 2024, 9:27 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಿಪ್ಪು ದೆವ್ವ ಹಿಡಿದಿದೆ. ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಸರ್ಕಾರ, ನಮ್ಮ ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸ್ ದಾಖಲೆಯಲ್ಲಿದೆ. ಆದರೆ, ಇದಕ್ಕೆ ಯಾವುದೇ ದಾಖಲೆ ಇಲ್ಲ. ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಎಂದಿದ್ದರು. ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತನಿಖೆ ನಡೆಯಲಿ:
ಚಿತ್ರನಟ ದರ್ಶನ್ ಪೊಲೀಸರಿಗೆ ದೂರು ನೀಡಿ ರೇಣುಕಾಸ್ವಾಮಿಗೆ ತಿಳಿ ಹೇಳಿಸಬಹುದಿತ್ತು. ಅದು ಬಿಟ್ಟು ಕಾನೂನು ಕೈಗೆ ತೆಗೆದುಕೊಂಡು ಕೊಂದಿದ್ದರೆ ಅದು ದೊಡ್ಡ ತಪ್ಪು ಎಂದು ಅಶೋಕ್ ಹೇಳಿದರು.
ಕಾನೂನಿಗಿಂತ ಯಾರೂ ದೊಡ್ಡವರಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಹಾಗೆಯೇ ಪೊಲೀಸರು ಸೂಕ್ತವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದರು.
ಚಲನಚಿತ್ರ ವಾಣಿಜ್ಯ ಮಂಡಳಿಯವರು ಕೂಡ ಈ ಕುರಿತು ನಿರ್ಧಾರ ತೆಗೆದುಕೊಳ್ಳಬೇಕು. ತನಿಖೆ ಸರಿಯಾಗಿ ನಡೆದು ಸತ್ಯಾಂಶ ಹೊರಬರಲಿ. ಈ ಪ್ರಕರಣದಲ್ಲಿ ಮೃತನಾದ ವ್ಯಕ್ತಿ ಯಾವುದೇ ಅಪರಾಧಿ ಹಿನ್ನೆಲೆ ಹೊಂದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಎಷ್ಟೋ ಸಂದೇಶಗಳು ಬರುತ್ತವೆ. ಅದಕ್ಕಾಗಿ ಕೊಲೆ ಮಾಡಲು ಹೋಗಬಾರದು. ಇದು ಇಡೀ ಚಿತ್ರೋದ್ಯಮಕ್ಕೆ ಕಳಂಕವಾಗಿದೆ. ಸರ್ಕಾರ ಮಾನವೀಯತೆ ದೃಷ್ಟಿಯಿಂದ ಮೃತ ವ್ಯಕ್ತಿಯ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.